October 5, 2024

ಮೂಡಿಗೆರೆ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿ ಶ್ರೀಮತಿ ನಯನ ಅರ್ಜಿ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಪಕ್ಷ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದೆ. ರೂ. 5000 ಅರ್ಜಿ ಶುಲ್ಕ ಹಾಗೂ ಸಾಮಾನ್ಯ ಕ್ಷೇತ್ರದಲ್ಲಿ ರೂ 200000 ಹಾಗೂ ಮೀಸಲು ಕ್ಷೇತ್ರದಲ್ಲಿ ರೂ 100000 ಠೇವಣಿಯೊಂದಿಗೆ ಅರ್ಜಿ ಸಲ್ಲಿಸಲು ಸೂಚಿಸಿದೆ. ಅದರಂತೆ ನಯನ  ಕೆಪಿಸಿಸಿ ಗೆ ಅರ್ಜಿ ಸಲ್ಲಿಸಿದರು.

ಹಾಲಿ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿರುವ ನಯನ ಮೂಡಿಗೆರೆ ಕ್ಷೇತ್ರದ ಮಾಜಿ ಶಾಸಕಿ, ಮಾಜಿ ಸಚಿವೆ ಶ್ರೀಮತಿ ಮೋಟಮ್ಮನವರ ಪುತ್ರಿ.

ರಾಜಕೀಯ ಮಹತ್ವಾಕಾಂಕ್ಷೆ ಹೊಂದಿರುವ ನಯನ ಮೂಡಿಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಕ್ಷೇತ್ರದಲ್ಲಿ ಈಗಾಗಲೇ ಮತದಾರರನ್ನು ತಲುಪುವ ಪ್ರಯತ್ನ ನಡೆಸಿದ್ದಾರೆ. ಹೈಕಮಾಂಡ್ ಮಟ್ಟದಲ್ಲು ಉತ್ತಮ ಪ್ರಭಾವ ಹೊಂದಿದ್ದಾರೆ.

ಈ ಮೂಲಕ ಮೂಡಿಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಸಿದವರ ಸಂಖ್ಯೆ ಮೂರಕ್ಕೆ ಏರಿದೆ. ಶ್ರೀಮತಿ ಎನ್.ಆರ್. ನಾಗರತ್ನ ಹಾಗೂ ಪ್ರಭಾಕರ್ ಬಿನ್ನಡಿ ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ