October 5, 2024

ಮೂಡಿಗೆರೆ ತಾಲ್ಲೂಕು ಹುಲ್ಲೆಮನೆ ಕುಂದೂರು ಗ್ರಾಮದಲ್ಲಿ ಭಾನುವಾರ ಕಾಡಾನೆ ದಾಳಿಯಿಂದ ಶೋಭಾ ಎನ್ನುವ ರೈತಮಹಿಳೆಯನ್ನು ಸಾವನ್ನಪ್ಪಿದ ನಂತರ ನಡೆದ ಘಟನಾವಳಿಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದು ಹಲವರನ್ನು ಬಂಧಿಸಿದ್ದಾರೆ.
ಕ್ಷೇತ್ರದ ಶಾಸಕ ಎಂ.ಪಿ. ಕುಮಾರಸ್ವಾಮಿಯವರು ಸಂಜೆ ಘಟನಾ ಸ್ಥಳಕ್ಕೆ ಆಗಮಿಸಿದಾಗ ಸ್ಥಳದಲ್ಲಿದ್ದ ಸ್ಥಳೀಯರು ಅವರ ಮೇಲೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಆಗ ಪೊಲೀಸರು ಶಾಸಕರನ್ನು ಸ್ಥಳದಿಂದ ಕರೆದೊಯ್ಯಲು ಮುಂದಾದಾಗ ಜನರು ಶಾಸಕರ ಬೆನ್ನಟ್ಟಿ ಬಂದಿದ್ದರು. ಸುಮಾರು ಒಂದು ಕಿಲೋಮೀಟರ್ ದೂರ ಶಾಸಕರನ್ನು ಹಿಂಬಾಲಿಸಿ ಜನರು ಬಂದಿದ್ದರು. ನಂತರ ಪೊಲೀಸರು ಶಾಸಕರನ್ನು ಅರಣ್ಯ ಇಲಾಖೆ ಜೀಪಿಗೆ ಹತ್ತಿಸಿ ಕಳುಹಿಸಿದ್ದರು. ಈ ಸಂದರ್ಭದಲ್ಲಿ ನೂಕುನುಗ್ಗಲಿನಲ್ಲಿ ಕೆಲವು ಪೊಲೀಸರು ಗಾಯಗೊಂಡಿದ್ದರು. ಕಲ್ಲು ತೂರಾಟದಿಂದ ಅರಣ್ಯ ಇಲಾಖೆ ಜೀಪಿನ ಗಾಜುಗಳು ಪುಡಿಯಾಗಿದ್ದವು. ಕಾಡಾನೆ ದಾಳಿಯಿಂದ ನೊಂದಿದ್ದ ಜನರು ಆಕ್ರೋಶದ ಕಟ್ಟೆಯೊಡೆದಿತ್ತು. ಈ ಪ್ರಕರಣ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು.

ಸರ್ಕಾರಿ ಆಸ್ತಿಪಾಸ್ತಿಗೆ ಹಾನಿ, ಸರ್ಕಾರಿ ನೌಕರರ ಮೇಲೆ ಹಲ್ಲೆ ಸೇರಿದಂತೆ ಹಲವು ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ಭಾನುವಾರ ರಾತ್ರಿ ಗ್ರಾಮದ ಹಲವರನ್ನು ಬಂಧಿಸಿದ್ದಾರೆ. ಮುಂಜಾಗ್ರತ ಕ್ರಮವಾಗಿ ಮೂಡಿಗೆರೆ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಹಿರಿಯ ಪೊಲೀಸರು ಮೂಡಿಗೆರೆಯಲ್ಲಿ ಮೊಕ್ಕಾಂ ಹೂಡಿದ್ದಾರೆ. ಸುತ್ತಮುತ್ತಲ ತಾಲ್ಲೂಕುಗಳಿಂದ ಹೆಚ್ಚುವರಿ ಪೊಲೀಸರನ್ನು ಕರೆಸಲಾಗಿದೆ.

ಈ ನಡುವೆ ಶಾಸಕರ ಮೇಲಿನ ಹಲ್ಲೆಯನ್ನು ಖಂಡಿಸಿ ಮೂಡಿಗೆರೆಯಲ್ಲಿ ಛಲವಾದಿ ಮಹಾಸಭಾ ಸದಸ್ಯರು ತಹಸೀಲ್ದಾರ್‍ರವರಿಗೆ ದೂರು ಸಲ್ಲಿಸಿದ್ದಾರೆ. ತಾಲ್ಲೂಕು ಬಿ.ಜೆ.ಪಿ. ಅಧ್ಯಕ್ಷ ಜೆ.ಎಸ್. ರಘು ನೇತೃತ್ವದಲ್ಲಿ ಪ್ರವಾಸಿ ಮಂದಿರದಲ್ಲಿ ಒಟ್ಟಾಗಿದ್ದ ಬಿ.ಜೆ.ಪಿ. ಕಾರ್ಯಕರ್ತರು ಘಟನೆಯನ್ನು ಖಂಡಿಸಿದ್ದಾರೆ.

ಶಾಸಕ ಎಂ.ಪಿ. ಕುಮಾರಸ್ವಾಮಿಯವರು ಇಂದು ಬೆಳಿಗ್ಗೆ ತಮ್ಮ ಬೆಂಬಲಿಗರೊಂದಿಗೆ ಮೃತರ ಮನೆಗೆ ತೆರಳಿ ಸಾಂತ್ವಾನ ಹೇಳಿದ್ದಾರೆ.

 

ಚಿಕ್ಕಮಗಳೂರು ‌ದರ್ಪಣ ವಾಟ್ಸಾಪ್ ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಒತ್ತಿ
https://chat.whatsapp.com/JdPeRuZ5cWv9mo6W35qoUV

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ