October 5, 2024

ನವೆಂಬರ್ 25ರ ಶುಕ್ರವಾರ ಮೂಡಿಗೆರೆ ಸಂತ ಅಂಥೋನಿ ಚರ್ಚ್ ಆವರಣದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣೆ ಶಿಬಿರದಲ್ಲಿ ಸಾವಿರಾರು ಜನರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು.

ಶಿಬಿರದಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿರುವ ಮಾಜಿ ಸಚಿವೆ ಶ್ರೀಮತಿ ಮೋಟಮ್ಮ

ಸಂತ ಅಂಥೋನಿ ಕ್ರಿಶ್ಚಿಯನ್ ಅಸೋಸಿಯೇಷನ್ ಮೂಡಿಗೆರೆ, ಬಣಕಲ್ ಕ್ರೈಸ್ತರ ಅಭಿವೃದ್ಧಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆ ಸಹಯೋಗದಲ್ಲಿ ಬೃಹತ್ ಆರೋಗ್ಯ ತಪಾಷಣೆ ಶಿಬಿರ ಏರ್ಪಡಿಸಲಾಗಿತ್ತು.

ಶಿಬಿರದಲ್ಲಿ ಕಣ್ಣಿನ ಪರೀಕ್ಷೆ, ಮೂಳೆ ಪರೀಕ್ಷೆ, ಮಧುಮೇಹ ಪರೀಕ್ಷೆ, ರಕ್ತದೊತ್ತಡ, ಇ.ಸಿ.ಜಿ., ಜನರಲ್ ಮೆಡಿಸನ್ ಸಂಬಂಧಪಟ್ಟಂತೆ ತಪಾಸಣೆ ನಡೆಸಲಾಯಿತು. ಫಾದರ್ ಮುಲ್ಲರ್ಸ್ ಆಸ್ಪತ್ರೆಯ ವೈದ್ಯರ ತಂಡ ಆರೋಗ್ಯ ತಪಾಸಣೆ ನಡೆಸಿತು.

ಸಂತ ಅಂಥೋನಿ ಕ್ರಿಶ್ಚಿಯನ್ ಅಸೋಸಿಯೇಷನ್ ಮೂಡಿಗೆರೆ, ಬಣಕಲ್ ಕ್ರೈಸ್ತರ ಅಭಿವೃದ್ಧಿ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಶಿಬಿರವನ್ನು ಅಚ್ಚುಕಟ್ಟಾಗಿ ಆಯೋಜಿಸಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು.

ಚಿಕ್ಕಮಗಳೂರು ದರ್ಪಣ ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 9448555587, 8660601449

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ