October 5, 2024

ಬಿಜೆಪಿ ಸರಕಾರಕ್ಕೆ ಕಣ್ಣು, ಕಿವಿ, ಹೃದಯವೇ ಇಲ್ಲ. ಜನರಿಗೆ ತೊಂದರೆ ಕೊಡೊ ಭಾವನೆ ಭ್ರಷ್ಟ ಹಾಗೂ ಪರ್ಸಂಟೇಜ್ ಬಿಟ್ಟರೆ ಆ ಪಕ್ಷದಲ್ಲಿ ಬೇರೇನೂ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಅವರು ಇಂದು ಮೂಡಿಗೆರೆ ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಬಿಜೆಪಿ ಸರಕಾರ 3 ಬಾರಿ ನಡೆಸಿದ ಆಡಳಿತದಲ್ಲಿ ಜನರ ಬದುಕು ಬದಲಾವಣೆ ಮಾಡಲು ಸಾಧ್ಯವಾಗಿಲ್ಲ. ಪೆಟ್ರೋಲ್, ಡೀಸೆಲ್, ಗ್ಯಾಸ್, ಗೊಬ್ಬರ ಬೆಲೆ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಈಗ ಅಧಿಕಾರ ಮುಗಿಯುತ್ತಾ ಬಂದಿದೆ. ಇಲ್ಲಿಯವರೆಗೆ ಅಧಿಕಾರವಿದ್ದಾಗಲೇ ಜನರ ಬದುಕು ಹಸನು ಮಾಡಲು ಸಾಧ್ಯವಾಗಿಲ್ಲ. ಇನ್ನು ಅಧಿಕಾರ ಕಳೆದುಕೊಳ್ಳುವ ಸಮಯದಲ್ಲಿ ಸಾಧ್ಯವೇ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಜಾತಿ ಮೇಲಿಲ್ಲ. ನೀತಿ ಮೇಲಿದೆ. ಇಂದಿರಾಗಾಂಧಿ, ರಾಜೀವ್‌ಗಾಂಧಿ, ನೆಹರು, ಲಾಲ್ ಬಹದ್ದೂರು ಶಾಸ್ತ್ರಿ ಪ್ರಧಾನಿಯಾಗಿದ್ದಾಗ ಬಡವರಿಗೆ ನಿವೇಶನ, ಜಮೀನು, ಬಗರ್ ಹುಕಂ ಸಾಗುವಳಿ ಸಕ್ರಮ, ಸಾಲ ಮನ್ನಾ ಸೇರಿದಂತೆ ಅನೇಕ ಜನಪರ ಕಾರ್ಯಕ್ರಮ ಮಾಡಿದ್ದು, ಅದರ ಪ್ರಯೋಜನ ದೇಶದ ಜನರು ಪಡೆದಿದ್ದಾರೆ. ಅಂತಹ ಒಂದೇ ಒಂದು ಕಾರ್ಯಕ್ರಮ ಬಿಜೆಪಿ ಮಾಡಲಿಲ್ಲ. ಕೇವಲ ಭಾವನೆಗಳು, ಕೋಮು ಗಲಭೆಯಲ್ಲೇ ಕಾಲ ಕಳೆದಿದ್ದಾರೆ. ಇದು ಜನರ ಅಭಿವೃದ್ಧಿಯಲ್ಲ. ಹಾಗಾಗಿ ಜನರ ಬದುಕು ಹಸನಾಗಲು ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಅದಕ್ಕಾಗಿ ಮೂಡಿಗೆರೆ ಮೀಸಲು ಕ್ಷೇತ್ರದಲ್ಲಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಮತ್ತು ನನ್ನ ಪರವಾಗಿ ಯಾವುದೇ ಅಭ್ಯರ್ಥಿ ನಿಲ್ಲಿಸಿದರೂ ಅವರನ್ನು ಗೆಲ್ಲಿಸಿಕೊಡುವ ಕರ್ತವ್ಯ ನಿಮ್ಮದು ಎಂದು ಹೇಳಿದರು.

ಇದಕ್ಕೂ ಮುನ್ನ ಮೂಡಿಗೆರೆ ಬಿಜಿಎಸ್ ಶಾಲೆಯಿಂದ ಮೆರವಣಿಗೆ ಮೂಲಕ ಪಟ್ಟಣದ ಅಡ್ಯಂತಾಯ ರಂಗಮಂದಿರಕ್ಕೆ ಡಿ.ಕೆ.ಶಿವಕುಮಾರ್ ಅವರನ್ನು ಕರೆತರಲಾಯಿತು.

ವೇದಿಕೆಯಲ್ಲಿ ಕೆ.ಪಿ.ಸಿ.ಸಿ.ಉಪಾಧ್ಯಕ್ಷ ಬಿ.ಎಲ್.ಶಂಕರ್, ಮಾಜಿ  ಸಚಿವರಾದ ಮೋಟಮ್ಮ, ಬಿ.ಶಿವರಾಂ, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ದೃವ ನಾರಾಯಣ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಅಂಶುಮಂತ್, ಶಾಸಕ ಟಿ.ಡಿ.ರಾಜೇಗೌಡ,  ತಾಲೂಕು ಅಧ್ಯಕ್ಷ ಎಚ್.ಜಿ.ಸುರೇಂದ್ರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಯನಾ ಮೋಟಮ್ಮ, ರೋಜಿಜಾನ್, ಮುಖಂಡರಾದ ಸಚಿನ್ ಮಿಗಾ, ಎಂ.ಎಲ್.ಮೂರ್ತಿ, ಡಾ.ವಿಜಯ್ ಕುಮಾರ್, ಹೆಚ್.ಹೆಚ್. ದೇವರಾಜು,  ಎ.ಎನ್. ಮಹೇಶ್, ಬಿ.ಎಸ್.ಜಯರಾಂ, ಎಂ.ಪಿ.ಮನು, ಎನ್.ಆರ್.ನಾಗರತ್ನ, ಎಂ.ಸಿ. ಹೂವಪ್ಪ,ಶ್ರೇಣಿಕ್ ಮತ್ತಿತರರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ