October 5, 2024

ಚಿಕ್ಕಮಗಳೂರು ಜಿಲ್ಲೆಯ ಅನೇಕ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ಮಿತಿಮೀರಿದೆ. ಅವುಗಳ ನಿಯಂತ್ರಣಕ್ಕೆ ಶಾಶ್ವತವಾದ ಪರಿಹಾರ ಒದಗಿಸಬೇಕು, ಕಾಡಾನೆ ಮತ್ತು ಕಾಡುಪ್ರಾಣಿಗಳಿಂದ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ಒದಗಿಸಬೇಕು  ಎಂದು ಬಿ.ಜೆ.ಪಿ.ಜಿಲ್ಲಾ ವಕ್ತಾರ ದೀಪಕ್ ದೊಡ್ಡಯ್ಯ ಒತ್ತಾಯಿಸಿದ್ದಾರೆ.

ಅವರು ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜು ಅವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಮಾಡಿದ್ದಾರೆ.

ಇತ್ತೀಚೆಗೆ ಹುಲ್ಲೇಮನೆ ಕುಂದೂರು ಗ್ರಾಮದಲ್ಲಿ ಮೃತಪಟ್ಟ ಶೋಭಾ ಅವರ ಪುತ್ರ ಇಂಜಿನಿಯರ್ ಪದವಿದರರಾಗಿದ್ದು ಅವರಿಗೆ ಸರ್ಕಾರ ಉದ್ಯೋಗ ನೀಡಬೇಕೆಂದು ಮನವಿ ಮಾಡಿದ್ದಾರೆ.

ಮೂಡಿಗೆರೆ ಭಾಗದಲ್ಲಿ ಅನೇಕ ಕಾಡಾನೆಗಳು ಸಂಚರಿಸುತ್ತಿವೆ. ಮೂರು ತಿಂಗಳಲ್ಲಿ ಮೂರು ಜನರ ಪ್ರಾಣ ತೆಗೆದಿವೆ. ಈಗ ಕುಂದೂರು ಭಾಗದಲ್ಲಿ ಮೂರು ಆನೆಗಳನ್ನು ಹಿಡಿಯಲು ಕಾರ್ಯಾಚರಣೆ ನಡೆಯುತ್ತಿದೆ. ಊರುಬಗೆ ಭಾಗದಲ್ಲಿ ಒಂದು ಆನೆ ಹಿಡಿಯಲು ಮಾಡಿದ ಪ್ರಯತ್ನ ವಿಫಲವಾಗಿದೆ. ಆ ಆನೆಯನ್ನು ಗುರುತಿಸಿ ಸೆರೆಹಿಡಿಯಬೇಕು ಮತ್ತು ಆನೆ ಹಾವಳಿ ತಡೆಗೆ ಶಾಶ್ವತವಾದ ಯೋಜನೆಗಳನ್ನು ರೂಪಿಸಬೇಕು ಎಂದಿದ್ದಾರೆ.

ದೀಪಕ್ ದೊಡ್ಡಯ್ಯ ನೀಡಿದ ಮನವಿಯನ್ನು ಸ್ವೀಕರಿಸಿದ ಸಚಿವ ಬೈರತಿ ಬಸವರಾಜು ಈ ವಿಚಾರಗಳನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತಂದು ಸರ್ಕಾರದ ಮಟ್ಟದಲ್ಲಿ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ