October 5, 2024

ಮೂಡಿಗೆರೆಯಿಂದ ಮಾಕೋನಹಳ್ಳಿ ಮೂಲಕ ಬೇಲೂರು ಸಾಗುವ ರಸ್ತೆಯಲ್ಲಿ ಗುಂಡಿಮುಚ್ಚುವ ಕಾಮಗಾರಿ ನಡೆಯುತ್ತಿದೆ. ಈ ಕಾಮಗಾರಿಯು ಗುಣಮಟ್ಟದ ಬಗ್ಗೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಸ್ತೆಯಲ್ಲಿ ಕೆಲವು ಸಣ್ಣ ಗುಂಡಿಗಳನ್ನು ಮುಚ್ಚುತ್ತಿಲ್ಲ, ಡಾಂಬಾರು ನಿಗದಿತ ಪ್ರಮಾಣದಲ್ಲಿ ಬಳಸುತ್ತಿಲ್ಲ. ವಾಹನಗಳು ಚಲಿಸಿದಂತೆಲ್ಲ ಜಲ್ಲಿಪುಡಿ ಎದ್ದು ಬರುತ್ತಿದೆ ಎಂದು ಮಾಕೋನಹಳ್ಳಿ ಸುತ್ತಮುತ್ತಲ ಗ್ರಾಮಸ್ಥರು ಕಾಮಗಾರಿ ನಡೆಯುವ ಸ್ಥಳದಲ್ಲಿ ಸೇರಿ ತಮ್ಮ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನಂತರ ವಿಚಾರವನ್ನು ವಿಧಾನಪರಿಷತ್ ಸದಸ್ಯರಾದ ಎಂ.ಕೆ. ಪ್ರಾಣೇಶ್ ಅವರ ಗಮನಕ್ಕೆ ತರಲಾಗಿ ಪ್ರಾಣೇಶ್ ಅವರು ಸ್ಥಳಕ್ಕಾಗಮಿಸಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದ್ದಾರೆ. ನಂತರ ಲೋಕೋಪಯೋಗಿ ಇಂಜಿನಿಯರ್ ಅವರಿಗೆ ಕರೆ ಮಾಡಿ ಕಾಮಗಾರಿ ನಿಯಮಾನುಸಾರ ನಡೆಸುವಂತೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಪತ್ರಿಕೆ ಮೂಡಿಗೆರೆ ಲೋಕೋಪಯೋಗಿ ಇಲಾಖೆ ಎಇಇ ಮಂಜುನಾಥ್ ಅವರನ್ನು ವಿಚಾರಿಸಿದರೆ ಈ ರಸ್ತೆ ತುಂಬಾ ಸ್ಕಿನ್ ಔಟ್ ಆಗಿದೆ. ಈಗ ಗುಂಡಿಗಳನ್ನು ಮುಚ್ಚಲು ಮಾತ್ರ ಅನುದಾನ ಬಿಡುಗಡೆಯಾಗಿದೆ. ಕಾಮಗಾರಿ ಕಳಪೆ ಆಗದಂತೆ ಕ್ರಮ ವಹಿಸುತ್ತೇವೆ. ಸಂಪೂರ್ಣ ರಸ್ತೆಗೆ ಡಾಂಬಾರಿಕರಣ ಮಾಡಲು ಅನುದಾನದ ಕೊರತೆ ಇದೆ. ಈ ರಸ್ತೆಯನ್ನು ಸರ್ಕಾರ ಅನುದಾನ ನೀಡಿದಾಗ ಆದ್ಯತೆಯ ಮೇರೆಗೆ ಪರಿಗಣಿಸುವಂತೆ ಇಲಾಖೆಯ ಪರವಾಗಿ ಶಾಸಕರಲ್ಲಿ ಮನವಿ ಮಾಡಿದ್ದೇವೆ ಎನ್ನುತ್ತಾರೆ.

ಸಾರ್ವಜನಿಕರು ತಮ್ಮ ಊರಿನ ಕಾಮಗಾರಿಗಳ ಬಗ್ಗೆ ಈ ರೀತಿಯ ಮುತುವರ್ಜಿ ವಹಿಸಿದಾಗ ಕಾಮಗಾರಿಗಳು ಗುಣಮಟ್ಟ ಸುಧಾರಿಸಲು ಸಾಧ್ಯವಾಗುತ್ತದೆ, ಕಾಮಗಾರಿಗಳಲ್ಲಿ ಲೋಪದೋಷ ಕಂಡುಬಂದಲ್ಲಿ ಜನರು ತಮ್ಮ ಹಕ್ಕನ್ನು ಜವಾಬ್ದಾರಿಯುತವಾಗಿ ಚಲಾಯಿಸುವ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಸ್ಥಳಕ್ಕಾಗಮಿಸಿದ ವಿಧಾನಪರಿಷತ್ ಸದಸ್ಯ ಎಂ.ಕೆ. ಪ್ರಾಣೇಶ್ ಅಭಿಪ್ರಾಯ ಹಂಚಿಕೊಂಡಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ