October 5, 2024

ಚಿಕ್ಕಮಗಳೂರಿನಲ್ಲಿ ನೂತನವಾಗಿ ಪ್ರಾರಂಭವಾಗಿರುವ ಮೆಡಿಕಲ್ ಕಾಲೇಜ್ (ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ನಲ್ಲಿ ಪ್ರಥಮ ವರ್ಷದ ಎಂ.ಬಿ.ಬಿ.ಎಸ್ ಕೋರ್ಸ್ ಉದ್ಘಾಟನಾ ಸಮಾರಂಭ ಇವತ್ತು ನೆರವೇರಿತು.

ನಗರದ ಹೊರವಲಯದ ತೇಗೂರು ಗ್ರಾಮದಲ್ಲಿ ನಿರ್ಮಾಣವಾಗಿರುವ ನೂತನ ಮೆಡಿಕಲ್ ಕಾಲೇಜಿನಲ್ಲಿ ನಡೆದ ಸಮಾರಂಭವನ್ನು ಶಾಸಕ ಸಿ.ಟಿ.ರವಿ ಯವರು ಉದ್ಘಾಟಿಸಿದರು. ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಸಿ.ಟಿ.ರವಿ ಚಿಕ್ಕಮಗಳೂರಿನಲ್ಲಿ ಮೆಡಿಕಲ್ ಕಾಲೇಜು ಆರಂಭಿಸಬೇಕು ಎಂಬುದು ಬಹು ದಶಕಗಳ ಕನಸಾಗಿತ್ತು. ಆ ಕನಸು ಈಗ ನನಸಾಗಿದೆ. ಆರಂಭಿಕ ಎಲ್ಲಾ ಎಡರು ತೊಡರುಗಳನ್ನು ಎದುರಿಸಿ ಈಗ ಪ್ರಥಮ ವರ್ಷದ ಎಂ.ಬಿ.ಬಿ.ಎಸ್. ತರಗತಿಗಳು ಪ್ರಾರಂಭವಾಗುವ ಹಂತಕ್ಕೆ ಬಂದು ತಲುಪಿದೆ.

ಪ್ರಕೃತಿಯ ಮಡಿಲಿನಲ್ಲಿರುವ ಸುಂದರ ಪರಿಸರದಲ್ಲಿರುವ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಮುಕ್ತಭಾವದಿಂದ ಅಧ್ಯಯನ ನಡೆಸಬಹುದು. ಪೋಷಕರು ತಮ್ಮ ಮಕ್ಕಳ ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಚಿಕ್ಕಮಗಳೂರಿನ ಜನ ಹೃದಯಶ್ರೀಮಂತಿಕೆಗೆ ಹೆಸರಾಗಿರುವವರು. ಇಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗುವುದು ಎಂದರು.

ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಅನುದಾನವನ್ನು ಸರ್ಕಾರ ನೀಡುತ್ತಿದೆ. ಈಗಾಗಲೇ ಕಡೂರು-ಚಿಕ್ಕಮಗಳೂರು ರಸ್ತೆಯನ್ನು ಉತ್ತಮ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ. ಹಾಸನ ಚಿಕ್ಕಮಗಳೂರು ನಡುವಿನ ರಸ್ತೆಯ ಅಭಿವೃದ್ಧಿಗೂ ನೀಲಿನಕ್ಷೆ ತಯಾರಾಗುತ್ತಿದೆ. ಹಾಸನ ಚಿಕ್ಕಮಗಳೂರು ರೈಲ್ವೇ ಮಾರ್ಗದ ಕಾಮಗಾರಿಕೆ ಭೂಸ್ವಾದೀನ ಪ್ರಕ್ರಿಯೆ ತ್ವರಿತಗತಿಯಲ್ಲಿ ನಡೆಯುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಉನ್ನತ ಶಿಕ್ಷಣ ತರಬೇತಿ ಸಂಸ್ಥೆಯನ್ನು ಸರ್ಕಾರದ ವತಿಯಿಂದ ಚಿಕ್ಕಮಗಳೂರಿನಲ್ಲಿ ಸ್ಥಾಪಿಸಬೇಕು ಎಂಬು ಕನಸಿದೆ. ಅಭಿವೃದ್ಧಿಯ ವಿಚಾರದಲ್ಲಿ ರಾಜಕಾರಣ ಸಲ್ಲದು. ಎಲ್ಲರು ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್, ನಗರಸಭಾ ಸದಸ್ಯ ವರಸಿದ್ದಿ ವೇಣುಗೋಪಾಲ್, ಜಿ.ಪಂ. ಸಿಇಓ ಪ್ರಭು, ಡಿ.ಹೆಚ್.ಓ. ಉಮೇಶ್, ಜಿಲ್ಲಾ ವೈದ್ಯಾಧಿಕಾರಿ ಡಾ. ಮೋಹನ್ ಕುಮಾರ್, ಸಂಸ್ಥೆಯ ಆಡಳಿತಾಧಿಕಾರಿಗಳು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

 

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿಗೆ ಬಸ್ ಕೊಡುಗೆ

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ