October 5, 2024

ವಿಧಾನ ಪರಿಷತ್ ಸದಸ್ಯರಾದ ಎಂ.ಕೆ. ಪ್ರಾಣೇಶ್ ಅವರು ತಮ್ಮ ವಿಧಾನ ಪರಿಷತ್ ಅನುದಾನದಲ್ಲಿ ಸರ್ಕಾರಿ ಶಾಲೆಯೊಂದಕ್ಕೆ ಬಸ್ ನೀಡುವುದರ ಮೂಲಕ ವಿಶಿಷ್ಟ ಹೆಜ್ಜೆ ಇಟ್ಟಿದ್ದಾರೆ.

ಚಿಕ್ಕಮಗಳೂರು ತಾಲ್ಲೂಕು ಹಂಗರವಳ್ಳಿ ಶಾಲೆಗೆ 25 ಲಕ್ಷ ಅನುದಾನದಲ್ಲಿ ಸುಸಜ್ಜಿತ ಶಾಲಾ ಬಸ್ ನೀಡಿದ್ದಾರೆ. ಇವತ್ತು ಚಿಕ್ಕಮಗಳೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಆವರಣದಲ್ಲಿ ಎಂ.ಕೆ. ಪ್ರಾಣೇಶ್ ಅವರು ಇಲಾಖೆಗೆ ಬಸ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ರಾಜ್ಯ ಯುವಜನ ಮತ್ತು ಕ್ರೀಡಾ ಸಚಿವ ಡಾ. ಕೆ.ಸಿ. ನಾರಾಯಣಗೌಡ, ಶಾಸಕ ಸಿ.ಟಿ. ರವಿಯವರು ಉಪಸ್ಥಿತರಿದ್ದು ಎಂ.ಕೆ. ಪ್ರಾಣೇಶ್ ಅವರಿಗೆ ಅಭಿನಂದನೆ ಸಲ್ಲಿಸಿದರು.ಹಂಗರವಳ್ಳಿ ಹಿರಿಯ ಪ್ರಾಥಮಿಕ ಶಾಲೆಗೆ ಸುತ್ತಲ ಗ್ರಾಮಗಳಿಂದ ಅನೇಕ ವಿದ್ಯಾರ್ಥಿಗಳು ಬರುತ್ತಾರೆ. ಅವರಿಗೆ ಸರಿಯಾದ ಸಾರಿಗೆ ಸೌಲಭ್ಯ ಇಲ್ಲದೇ ಶಾಲೆಗೆ ಬರಲು ತೊಡಕಾಗಿತ್ತು. ಈಗ ಶಾಲಾ ಬಸ್ ಬಂದಿರುವುದು ಅಲ್ಲಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವರದಾನವಾಗಿದೆ.

ಇದು ನಮ್ಮ ರಾಜ್ಯದಲ್ಲಿಯೇ ಒಂದು ವಿನೂತನ ಪ್ರಯೋಗವಾಗಿದೆ. ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಯಾರೂ ಮಾಡದ  ಚಿಂತನೆಗೆ ಎಂ.ಕೆ. ಪ್ರಾಣೇಶ್ ಅವರು ಚಾಲನೆ ನೀಡಿದ್ದಾರೆ. ಇದು ರಾಜ್ಯದಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಲು ಒಂದು ದೊಡ್ಡ ಹೆಜ್ಜೆಯಾಗಬಹುದು.

ಹಿಂದಿನ ಅವಧಿಯಲ್ಲಿ ಅವರು ತಮ್ಮ ವಿಧಾನಪರಿಷತ್ ಸದಸ್ಯರ ಅನುದಾನದಿಂದ ಗ್ರಾಮಪಂಚಾಯಿತಿಗಳಿಗೆ ಜನರೇಟರ್ ನೀಡುವ ಮೂಲಕ ವಿಶಿಷ್ಟ ಚಿಂತನೆ ಮಾಡಿದ್ದರು. ಗ್ರಾಮೀಣ ಭಾಗದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆಯಿಂದಾಗಿ ಗ್ರಾಮಪಂಚಾಯಿತಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಿಕೊಡಲು ತೊಡಗು ಉಂಟಾಗುತ್ತಿತ್ತು. ಇದನ್ನು ಮನಗಂಡು ಪ್ರಾಣೇಶ್ ಅವರು ಜಿಲ್ಲೆಯ ಬಹುತೇಕ ಗ್ರಾಮ ಪಂಚಾಯಿತಿಗಳಿಗೆ ಡೀಸೆಲ್ ಜನರೇಟರ್ ಕೊಳ್ಳಲು ಅನುದಾನ ನೀಡಿದ್ದರು. ಇದು ವ್ಯಾಪಕ ಪ್ರಶಂಸೆಗೆ ಪಾತ್ರವಾಗಿತ್ತು.

ಈಗ ಸರ್ಕಾರಿ ಶಾಲೆಗಳಿಗೆ ಬಸ್ ಕೊಳ್ಳಲು ತಮ್ಮ ಅನುದಾನ ನೀಡುವ ಮೂಲಕ ರಾಜ್ಯದಲ್ಲಿ ಒಂದು ಹೊಸ ಮಾದರಿಗೆ ನಾಂದಿ ಹಾಡಿದ್ದಾರೆ.

********************

ನಾನು ವಿಧಾನಪರಿಷತ್ತಿನಲ್ಲಿ ಚಿಕ್ಕಮಗಳೂರು ಜಿಲ್ಲೆಯನ್ನು ಪ್ರತಿನಿಧಿಸುತ್ತಿದ್ದು, ಜನರು ನಾನಾ ರೀತಿಯ ಕೆಲಸಗಳಿಗೆ ಅನುದಾನ ಕೇಳುತ್ತಾರೆ. ಪರಿಷತ್ ಸದಸ್ಯರಿಗೆ ಬರುವ ಸೀಮಿತ ಅನುದಾನದಲ್ಲಿ ಎಲ್ಲರ ನಿರೀಕ್ಷೆಗಳನ್ನು ಪೂರೈಸಲು ಸಾಧ್ಯವಾಗುವುದಿಲ್ಲ. ಇವತ್ತು ಸರ್ಕಾರಿ ಶಾಲೆಗಳಿಗೆ ತೆರಳುವ ಮಕ್ಕಳಿಗೆ ಬಸ್ ಸೌಲಭ್ಯ ನೀಡಿದರೆ ಮಕ್ಕಳಿಗೆ ಅನುಕೂಲವಾಗುತ್ತದೆ. ಇದರಿಂದ ಸರ್ಕಾರಿ ಶಾಲೆಯ ಕಡೆಗೆ ಮಕ್ಕಳು ಮತ್ತು ಪೋಷಕರು ಆಕರ್ಷಿತರಾಗುತ್ತಾರೆ. ವಿದ್ಯಾರ್ಥಿಗಳ ಕೊರತೆಯಿಂದ ವಿಶೇಷವಾಗಿ ಮಲೆನಾಡು ಭಾಗದಲ್ಲಿ ಸರ್ಕಾರಿ ಶಾಲೆಗಳು ಬಾಗಿಲು ಮುಚ್ಚಿತ್ತಿವೆ. ಸರ್ಕಾರಿ ಶಾಲೆಗಳನ್ನು ಉಳಿಸಲು ನನ್ನದೊಂದು ಸಣ್ಣ ಪ್ರಯತ್ನ. ಇದನ್ನು ರಾಜ್ಯದಾದ್ಯಂತ ಅನುಷ್ಟಾನಕ್ಕೆ ತಂದರೆ ದೊಡ್ಡ ಬದಲಾವಣೆಗೆ ಪ್ರೇರಣೆಯಾಗಬಹುದು.

ಎಂ.ಕೆ.ಪ್ರಾಣೇಶ್, ವಿಧಾನಪರಿಷತ್ ಸದಸ್ಯರು

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ