October 5, 2024

2023ರ ಜನವರಿ 18 ರಿಂದ 22 ರವರೆಗೆ ನಡೆಯಲಿರುವ ‘ಚಿಕ್ಕಮಗಳೂರು ಹಬ್ಬ’ ಜಿಲ್ಲಾ ಉತ್ಸವದ ಲಾಂಛನವನ್ನು ಅಧಿಕೃತವಾಗಿ ಇಂದು ಬಿಡುಗಡೆ ಮಾಡಲಾಯಿತು. ಈ ಮೂಲಕ ಜಿಲ್ಲಾ ಉತ್ಸವದ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡಲಾಗಿದೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದ ಸಂದರ್ಭದಲ್ಲಿ ಸುವರ್ಣ ಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಲಾಂಛನವನ್ನು ಬಿಡುಗಡೆ ಮಾಡಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಉತ್ಸವದ ರುವಾರಿಗಳಾಗಿರುವ ಶಾಸಕ ಸಿ.ಟಿ. ರವಿ, ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಬೈರತಿ ಬಸವರಾಜು, ಕನ್ನಡ ಸಂಸ್ಕøತಿ ಇಲಾಖೆ ಮತ್ತು ಇಂಧನ ಸಚಿವ ಸುನಿಲ್ ಕುಮಾರ್, ಸಚಿವರಾದ ಆನಂದಸಿಂಗ್, ಮುನಿರತ್ನ, ವಿಧಾನಪರಿಷತ್ ಸದಸ್ಯರಾದ ಎಂ.ಕೆ. ಪ್ರಾಣೇಶ್, ಎಸ್.ಎಲ್. ಬೋಜೇಗೌಡ, ಶಾಸಕರಾದ ಎಂ.ಪಿ.ಕುಮಾರಸ್ವಾಮಿ, ಡಿ.ಎಸ್.ಸುರೇಶ್, ಚಿಕ್ಕಮಗಳೂರು ಜಿಲ್ಲಾಧಿಕಾರಿ ರಮೇಶ್ ಉಪಸ್ಥಿತರಿದ್ದರು.

ಜನವರಿ 18ರಿಂದ 22ರವರೆಗೆ ಒಟ್ಟು ಐದು ದಿನಗಳ ಕಾಲ ಚಿಕ್ಕಮಗಳೂರು ಜಿಲ್ಲಾ ಆಟದ ಮೈದಾನದಲ್ಲಿ ಚಿಕ್ಕಮಗಳೂರು ಹಬ್ಬ ನೆರವೇರಲಿದೆ. 2020ರಲ್ಲಿ ಮೊದಲ ಬಾರಿಗೆ ನಡೆದಿದ್ದ ಚಿಕ್ಕಮಗಳೂರು ಜಿಲ್ಲಾ ಉತ್ಸವ ಅಪಾರ ಜನಾಕರ್ಷಣೆಯನ್ನು ಪಡೆದು ಯಶಸ್ವಿಯಾಗಿ ನೆರವೇರಿತ್ತು.

ಇದೀಗ ಎರಡನೇ ಚಿಕ್ಕಮಗಳೂರು ಜಿಲ್ಲಾ ಉತ್ಸವಕ್ಕೆ ತಯಾರಿ ನಡೆಸಲಾಗುತ್ತಿದೆ. ಉತ್ಸವದ ಹಿನ್ನಲೆಯಲ್ಲಿ ಹತ್ತಾರು ವೈವಿದ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಜಿಲ್ಲೆಯ ಕಲೆ, ಸಂಸ್ಕøತಿ, ಸಾಹಿತ್ಯ, ಕೃಷಿ, ಪ್ರವಾಸೋದ್ಯಮ, ಜನಜೀವನದ ದರ್ಶನ, ಅನೇಕಾ ಕ್ರೀಡಾ, ಸಾಂಸ್ಕøತಿಕ, ಸಾಹಸಮಯ ಸ್ಪರ್ಧೆಗಳನ್ನು ಏರ್ಪಡಿಸುವುದು, ಆಹಾರ ಮೇಳ, ವಸ್ತುಪ್ರದರ್ಶನ, ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಉತ್ಸವದ ಅಂಗವಾಗಿ ಅಳವಡಿಸಿಕೊಳ್ಳಲಾಗಿದೆ.

ಜಿಲ್ಲಾ ಉತ್ಸವ ಯಶಸ್ಸಿಗೆ ಹಲವು ಸಮಿತಿಗಳನ್ನು ರಚಿಸಿದ್ದು, ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರು ಉತ್ಸವದ ಪೂರ್ವಭಾವಿ ತಯಾರಿಯಲ್ಲಿ ಉತ್ಸಾಹದಿಂದ ತೊಡಗಿಸಿಕೊಂಡಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ