October 5, 2024

ಜಾಗತಿಕ ಮಟ್ಟದಲ್ಲಿ ಕರೋನಾ ಮತ್ತೆ ಉಲ್ಬಣಸುತ್ತಿರುವ ಹಿನ್ನಲೆಯಲ್ಲಿ ನಮ್ಮ ರಾಜ್ಯದಲ್ಲಿ ಸರ್ಕಾರ ಮುಂಜಾಗ್ರತ ಕ್ರಮಕ್ಕೆ ಮುಂದಾಗಿದೆ. ಸರ್ಕಾರ ಕೆಲವು ಕರೋನಾ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ನಿನ್ನೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಮುಖ್ಯಮಂತ್ರಿಗಳ ನೇತೃತ್ವದ ತುರ್ತು ಸಭೆಯ ನಂತರ ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿರುವ ಆರೋಗ್ಯ ಸಚಿವ ಡಾ. ಸುಧಾಕರ್ ; ಜಾಗತಿಕ ಮಟ್ಟದಲ್ಲಿ ಕೋವಿಡ್ ಸ್ಥಿತಿಗತಿಗಳ ಬಗ್ಗೆ ತಾಂತ್ರಿಕ ಸಲಹ ಸಮಿತಿ ವರದಿ ನೀಡಿದೆ. ಆ ವರದಿ ಆದಾರದಲ್ಲಿ ಮುಂಜಾಗ್ರತ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.

ಜನರು ಒಳಾಂಗಣ ಪ್ರದೇಶದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಎಲ್ಲರೂ ಬೂಸ್ಟರ್ ಡೋಸ್ ಪಡೆದುಕೊಳ್ಳಬೇಕು. ರಾಜ್ಯದ ಎಲ್ಲಾ ಕಡೆ ಕ್ಯಾಂಪ್ ಪ್ರಾರಂಭಿಸಿ ಕೋವಿಡ್ ಲಸಿಕೆ ಮತ್ತು ಬೂಸ್ಟರ್ ಡೋಸ್ ಹಾಕಲಾಗುವುದು. ಶೇಕಡಾ 20 ರಷ್ಟು ಮಂದಿ ಮಾತ್ರ ಬೂಸ್ಟರ್ ಡೋಸ್ ಪಡೆದಿದ್ದಾರೆ. ಉಳಿದವರು ಬೂಸ್ಟರ್ ಡೋಸ್ ಪಡೆಯಬೇಕು ಎಂದು ಮನವಿ ಮಾಡಿದ್ದಾರೆ. ಲಸಿಕೆ ಪಡೆದರೆ ಕೋವಿಡ್ ಗೆ ಅಂಜಬೇಕಾಗಿಲ್ಲ. ಲಸಿಕೆಗೂ ಇತರೆ ಸೈಡ್ ಎಪೆಕ್ಟ್ ಗೂ ಯಾವುದೇ ಸಂಬಂಧ ಇಲ್ಲ ಜನರು ಮುಕ್ತವಾಗಿ ಲಸಿಕೆ ಪಡೆಯಬಹುದು ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ವಿದೇಶದಿಂದ ಬರುವ ಪ್ರಯಾಣಿಕರಿಗೆ ರ್ಯಾಡಂ ಟೆಸ್ಟ್ ಮಾಡಲಾಗುತ್ತದೆ. ಕೇಂದ್ರ ಸರ್ಕಾರದ ಮಟ್ಟದಲ್ಲಿ ಸಭೆ ನಡೆಯುತ್ತಿದ್ದು, ಕೇಂದ್ರ ನೀಡುವ ಮಾರ್ಗಸೂಚಿಗಳನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದಿದ್ದಾರೆ.

ಚೀನಾದಲ್ಲಿ ಕೋವಿಡ್ ರೂಪಾಂತರಿ ತಳಿ ವ್ಯಾಪಕವಾಗಿ ಹರಡುತ್ತಿದೆ. ನಮ್ಮ ದೇಶದಲ್ಲಿಯೂ ಮೂರು ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಜಾಗತಿಕ ಮಟ್ಟದಲ್ಲಿ ಮತ್ತೆ ಕೋವಿಡ್ ಆತಂಕ ಶುರುವಾಗಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ