October 5, 2024

ಮೂಡಿಗೆರೆ ಕನ್ನಡ ಸಾಹಿತ್ಯ ಪರಿಷತ್ ಘಟಕದ ಮಾಜಿ ಅಧ್ಯಕ್ಷ, ಉಪನ್ಯಾಸಕ ಎಂ.ಎಸ್. ಅಶೋಕ್(53 ವರ್ಷ) ಅಕಾಲಿಕವಾಗಿ ನಿಧನಹೊಂದಿದ್ದಾರೆ.

ನಿನ್ನೆ ತಡರಾತ್ರಿ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೃತರು ತಾಯಿ, ಪತ್ನಿ, ಮಗ, ಇಬ್ಬರು ಸಹೋದರರು, ಓರ್ವ ಸಹೋದರಿ, ಕುಟುಂಬವರ್ಗ ಮತ್ತು ಅಪಾರ ಸ್ನೇಹಿತರನ್ನು ಅಗಲಿದ್ದಾರೆ.

ಮೂಡಿಗೆರೆ ತಾಲ್ಲೂಕಿನ ಮಗ್ಗಮಕ್ಕಿಯವರಾದ ಅಶೋಕ್ ಮಾಜಿ ಸಚಿವೆ ಶ್ರೀಮತಿ ಮೋಟಮ್ಮನವರ ಅಣ್ಣನ ಮಗ. ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಎಂ.ಎಸ್. ಅನಂತು ಅವರ ಸಹೋದರ.

ಇಂಗ್ಲೀಷ್ ಎಂ.ಎ. ಸೇರಿದಂತೆ ಹಲವು ಉನ್ನತ ಪದವಿಗಳನ್ನು ಗಳಿಸಿದ್ದ ಅಶೋಕ್ ಮೂಡಿಗೆರೆ ಡಿ.ಎಸ್.ಬಿ.ಜಿ. ಪದವಿ ಕಾಲೇಜು, ತೋಟಗಾರಿಕಾ ಮಹಾವಿದ್ಯಾಲಯ, ಚಿಕ್ಕಮಗಳೂರು ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಂಗ್ಲೀಷ್ ನಲ್ಲಿ ಅಗಾಧವಾದ ಪಾಂಡಿತ್ಯ ಸಾಧಿಸಿದ್ದ ಇವರು ಉತ್ತಮ ಇಂಗ್ಲೀಷ್ ಉಪನ್ಯಾಸಕರಾಗಿ ವಿದ್ಯಾರ್ಥಿಗಳ ಪ್ರೀತಿಪಾತ್ರರಾಗಿದ್ದರು. ಇವರು ಸ್ನೇಹಜೀವಿಯಾಗಿದ್ದರು.

ಯುವಕರಿಗೆ ಸದಾ ಶಿಕ್ಷಣ ಮತ್ತು ವೃತ್ತಿ ಮಾರ್ಗದರ್ಶನ ನೀಡುತ್ತಾ ಅನೇಕ ಮಂದಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪ್ರೇರಣೆ ನೀಡಿದ್ದರು.

ಅನೇಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ಮೂಡಿಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ತಮ್ಮ ಅವಧಿಯಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಿದ್ದರು.

ಮೂಡಿಗೆರೆ ಜೇಸಿಐ ಸಂಸ್ಥೆಯ ಅಧ್ಯಕ್ಷರಾಗಿ ಮತ್ತು ಪದಾಧಿಕಾರಿಗಳಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು.
ಹೇಮಾವತಿ ಉಗಮ ಹಿತರಕ್ಷಣಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿದ್ದರು.

ರಾಜಕೀಯವಾಗಿ ಆರಂಭದಿಂದಲೂ ಜೆ.ಡಿ.ಎಸ್. ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಮೂಡಿಗೆರೆ ಕ್ಷೇತ್ರದಲ್ಲಿ ಜೆ.ಡಿ.ಎಸ್. ಟಿಕೆಟ್ ಆಕಾಂಕ್ಷಿಯಾಗಿದ್ದರು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಇರುವ ಅವಕಾಶಗಳ ಕುರಿತು ಆಳವಾದ ಅಧ್ಯಯನ ನಡೆಸಿದ್ದರು. ಈ ಬಗ್ಗೆ ಸರ್ಕಾರದ ಗಮನವನ್ನು ಸೆಳೆದಿದ್ದರು. ಮೂಡಿಗೆರೆ ತಾಲ್ಲೂಕಿನ ಅಭಿವೃದ್ಧಿ ವಿಚಾರವಾಗಿ ಸದಾ ಉತ್ತಮ ಸಲಹೆಗಳನ್ನು ಇವರು ನೀಡುತ್ತಿದ್ದರು.

ಅಶೋಕ್ ಅವರ ನಿಧನ ಅವರ ಕುಟುಂಬ ಮತ್ತು ಸ್ನೇಹವಲಯಕ್ಕೆ ಆಘಾತ ತಂದಿದೆ.

ಅವರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಮಗ್ಗಲಮಕ್ಕಿಯ ಅವರ ನಿವಾಸದಲ್ಲಿ ಇರಿಸಿದ್ದು ಅಂತಿಮ ಸಂಸ್ಕಾರ ಇಂದು ಸಂಜೆ 4 ಗಂಟೆಗೆ ನೆರವೇರಲಿದೆ ಎಂದು ಅವರ ಸಹೋದರರಾದ ಎಂ.ಎಸ್. ಅನಂತು ಮತ್ತು ಎಂ.ಎಸ್. ಆನಂದ್ ತಿಳಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ