October 5, 2024

ಶಾಲೆಯ ವೇದಿಕೆಗಳಲ್ಲಿ ನಡೆಯುವ ಸಾಂಸ್ಕøತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಮಹತ್ವದ ಪಾತ್ವವನ್ನು ವಹಿಸುತ್ತವೆ ಎಂದು ಶಾಸಕರಾದ ಎಂ.ಪಿ.ಕುಮಾರಸ್ವಾಮಿ ಹೇಳಿದರು.

ಮೂಡಿಗೆರೆ ತಾಲ್ಲೂಕಿನ ಬಣಕಲ್ ನ ಶ್ರೀವಿದ್ಯಾಭಾರತಿ ಶಾಲೆಯಲ್ಲಿ ಶನಿವಾರ ಸಂಜೆ ನಡೆದ 36ನೇ ಶಾಲಾ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಕೇವಲ ಅಂಕಗಳಿಗಾಗಿ ಮಾತ್ರ ಶಿಕ್ಷಣ ಪಡೆಯದೆ ಜೀವನ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಶಿಕ್ಷಣ ಉದ್ದೇಶ ಸಾರ್ಥಕಗೊಳ್ಳುತ್ತದೆ. ವಿದ್ಯಾರ್ಥಿ ಜೀವನ ಅತ್ಯಮೂಲ್ಯವಾಗಿದ್ದು ಮಕ್ಕಳು ಓದಿನ ಕಡೆಗೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದರು.

ಶಾಲಾ ಸಮಿತಿ ಅಧ್ಯಕ್ಷರಾದ ಬಿ. ಶಿವರಾಮ ಶೆಟ್ಟಿ ಮಾತನಾಡಿ, ಶಾಲಾಭಿವೃದ್ದಿಗೆ ಸರ್ವರ ಸಹಕಾರ ಅಗತ್ಯವಾಗಿದೆ. ಶಾಲೆಯನ್ನು ಪ್ರಗತಿ ಪಥದಲ್ಲಿ ಕೊಂಡೊಯ್ಯಲು ಶಿಕ್ಷಕರು, ಪೋಷಕರು, ಸಾರ್ವಜನಿಕರು ಸಹಕಾರ ನೀಡಬೇಕಿದೆ ಎಂದರು.

ಈ ಸಂದರ್ಭದಲ್ಲಿ ಶಾಲೆಯ ಹಳೆ ವಿದ್ಯಾರ್ಥಿಗಳಾದ ಧನಿಕ್ ಗೌಡ ಕೆ.ಆರ್, ಶ್ವೇತ ಡಿ.ಎಂ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.

ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಹೇಮಂತ್ ರಾಜ್, ಬಣಕಲ್ ಗ್ರಾ.ಪಂ ಅಧ್ಯಕ್ಷೆ ಬಿ.ಬಿ ಲೀಲಾವತಿ, ಕಾಫಿ ಬೆಳೆಗಾರರಾದ ಡಿ.ಎಸ್.ಸಾವಿತ್ರಮ್ಮ, ಶಾಲಾ ಸಮಿತಿಯ ಪದಾಧಿಕಾರಿಗಳಾದ ಬಿ.ಪಿ.ಲಿಂಗಪ್ಪ, ಸುಬ್ಬರಾಯಗೌಡ, ಮಂಜುನಾಥ ಬಿ.ಬಿ, ರಕ್ಷಾ ಪೌಂಡೇಶನ್‍ನ ಸಂಸ್ಥಾಪಕರಾದ ಸುಷ್ಮಾ ಹಾಗೂ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಇದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ