October 5, 2024

ಅಪ್ರಾಪ್ತ ಸ್ಕೂಟರ್ ಚಲಾಯಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನ ಮಾಲೀಕರಿಗೆ ಮೂಡಿಗೆರೆ ನ್ಯಾಯಾಲಯ ರೂ. 5000 ದಂಡ ವಿಧಿಸಿದೆ.

ದಿನಾಂಕ 02-01-2023ರಂದು ಮೂಡಿಗೆರೆ ಪಟ್ಟಣದ ಲಯನ್ಸ್ ವೃತ್ತದಲ್ಲಿ ಮೂಡಿಗೆರೆ ಠಾಣೆಯ ಠಾಣಾಧಿಕಾರಿ ಆದರ್ಶ ರವರು ತಮ್ಮ ಸಿಬ್ಬಂದಿಯೊಂದಿಗೆ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದರು.

ಈ ಸಂದರ್ಭದಲ್ಲಿ ಅಕ್ಟಿವಾ ಹೋಂಡಾ ಸ್ಕೂಟರ್ (KA-18-EE-8288) ನಲ್ಲಿ ಬಂದ ಚಾಲಕನನ್ನು ನಿಲ್ಲಿಸಿ ದಾಖಲೆಗಳನ್ನು ಪರಿಶೀಲಿಸಿದಾಗ ಆತನು 16 ವರ್ಷದ ಅಪ್ರಾಪ್ತ ವಯಸ್ಸಿನವನೆಂದು ತಿಳಿದು ಬಂದಿತ್ತು. ನಂತರ ವಾಹನದ ಮಾಲೀಕರಾದ ಫಾತಿಮಾ ಬಿ. ಯವರಿಗೆ ನ್ಯಾಯಾಲಯಕ್ಕೆ ಹಾಜರಾಗಲು ನೋಟೀಸ್ ನೀಡಲಾಗಿತ್ತು.

ನೋಟೀಸ್ ಗೆ ಸಂಬಂಧಿಸಿದಂತೆ ನಿನ್ನೆ ಮೂಡಿಗೆರೆ ಪ್ರಿನ್ಸಿಪಲ್ ಸಿವಿಲ್ ಜೆ.ಎಂ.ಎಫ್.ಸಿ. ನ್ಯಾಯಾದೀಶರಾದ ವಿಶ್ವನಾಥರವರು ಭಾರತೀಯ ಮೋಟಾರ್ ವಾಹನ ಕಾಯ್ದೆ ಕಲಂ 05 R/W 180 ಪ್ರಕಾರ ಸ್ಕೂಟರ್ ಮಾಲೀಕರಾದ ಫಾತೀಮಾ ಬೀ ರವರಿಗೆ ರೂ. ಐದು ಸಾವಿರ ದಂಡ ವಿಧಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಅಪ್ರಾಪ್ತರು, ಚಾಲನ ಪರವಾನಿಗಿ ಇಲ್ಲದವರು ವಾಹನ ಚಾಲನೆ ಮಾಡುವುದು ಸೇರಿದಂತೆ ಮೋಟಾರ್ ವಾಹನ ಕಾಯ್ದೆ ಉಲ್ಲಂಘನೆ, ರಸ್ತೆ ಸುರಕ್ಷತಾ ನಿಯಮಗಳನ್ನು ಉಲ್ಲಂಘನೆ ಮಾಡುವ ಪ್ರಕರಣಗಳು ಹೆಚ್ಚುತ್ತಿದ್ದು, ಪೊಲೀಸರು ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸುತ್ತಿದ್ದಾರೆ.

ಅಪ್ರಾಪ್ತರಿಗೆ ವಾಹನ ಚಲಾವಣೆಗೆ ನೀಡಿದರೆ ಅದಕ್ಕೆ ಪೋಷಕರು ಅಥವಾ ವಾಹನ ಮಾಲೀಕರು ಹೊಣೆಯಾಗುತ್ತಾರೆ.

ಪೊಲೀಸ್ ಇಲಾಖೆ ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ನಡೆಸುತ್ತಿದೆ. ಸಾರ್ವಜನಿಕರು ವಾಹನ ಕಾಯ್ದೆ ಮತ್ತು ರಸ್ತೆ ಸುರಕ್ಷತಾ ನಿಯಮಗಳಿಗೆ ಆದ್ಯತೆ ನೀಡಿ ಸ್ವಯಂ ಜಾಗೃತಿ ವಹಿಸಬೇಕು.

 

ಚರಿತ್ರೆಯ ಪುಟಗಳಲ್ಲಿ ಚಿಕ್ಕಮಗಳೂರು-ಮಲೆನಾಡು

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ