October 5, 2024

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷೀಪ್ತ ಪರಿಷ್ಕರಣೆ ಕಾರ್ಯ ಮುಕ್ತಾಯಗೊಂಡಿದ್ದು, ಜಿಲ್ಲೆಯಲ್ಲಿ 9,45,151  ಮತದಾರರು ಇದ್ದಾರೆ. 468599 ಪುರುಷರು, 476516 ಮಹಿಳಾ ಹಾಗೂ 39 ಇತರರೆ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಕೆ. ಎನ್. ರಮೇಶ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕಳೆದ ನವೆಂಬರ್ 9 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹಾಗೂ ತೆಗೆದುಹಾಕುವ ಪ್ರಕ್ರಿಯೆ ಮತ್ತು ಆಕ್ಷೇಪಣೆಗೆ ಅವಕಾಶ ನೀಡಲಾಗಿತ್ತು. ತದನಂತರದಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟ ಮಾಡಲಾಗಿದ್ದು, ಬರುವ ವಿಧಾನಸಭಾ ಚುನಾವಣೆಗೆ ಈ  ಮತದಾರರ ಪಟ್ಟಿ ಪರಿಗಣಿಸಲಾಗುವುದು ಎಂದು ಹೇಳಿದರು.

ಕರಡು ಮತದಾರರ ಪಟ್ಟಿಯಲ್ಲಿ 934769 ಮತದಾರರು ಇದ್ದರು, ಈ ಸಂಖ್ಯೆ ಅಂತಿಮ ಮತದಾರರ ಪಟ್ಟಿಯಲ್ಲಿ 945151 ಗೆ ಏರಿಕೆಯಾಗಿದೆ. ಬೇರೆ ಊರುಗಳಲ್ಲಿ ವಾಸವಾಗಿರುವ ಹಾಗೂ ಮೃತಪಟ್ಟವರ ಹೆಸರು ಕೈ ಬಿಡಲಾಗಿದೆ. ಈ ಕೆಲಸ ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ತಾಲೂಕು ತಹಶೀಲ್ದಾರ್ಗಳ ಜತೆಗೆ ತಾಲೂಕು ಪಂಚಾಯ್ತಿಯ ಕಾರ್ಯನಿರ್ವಹಕ ಅಧಿಕಾರಿಗಳನ್ನು ಬಳಸಿಕೊಳ್ಳಲಾಗಿದೆ ಎಂದರು

ಯುವ ಮತದಾರರನ್ನು ಸೇರಿಸಿಕೊಳ್ಳುವ ಉದ್ದೇಶ: 
ಯುವ ಮತದಾರರನ್ನು ಪಟ್ಟಿಗೆ ಸೇರಿಸಿಕೊಳ್ಳುವ ಉದ್ದೇಶದಿಂದ ಕಾಲೇಜುಗಳಿಗೆ ಭೇಟಿ ನೀಡಿ ಮತದಾನದ ಮಹತ್ವ ತಿಳಿಸಿಕೊಡುವ ಕೆಲಸವನ್ನು ಅಧಿಕಾರಿಗಳು ಮಾಡಿದ್ದಾರೆ. ಕರಡು ಮತದಾರರ ಪಟ್ಟಿಯಲ್ಲಿ 18 ಮತ್ತು 19 ವರ್ಷದೊಳಗಿನ ಯುವ ಮತದಾರರ ಸಂಖ್ಯೆ 4114 ಇತ್ತು. ಅಂತಿಮ ಮತದಾರರ ಪಟ್ಟಿಯಲ್ಲಿ ಈ ಸಂಖ್ಯೆ 10, 268 ಕ್ಕೆ ಏರಿಕೆಯಾಗಿದೆ. ಅಂದರೆ, 6951 ಮತದಾರರನ್ನು ಹೊಸದಾಗಿ ಸೇರ್ಪಡೆಗೊಳಿಸಲಾಗಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ 8328 ವಿಕಲಚೇತನ ಮತದಾರರು, 498 ಸೇವಾ ಮತದಾರರು ಇದ್ದು, ವಿಧಾನಸಭಾ ಚುನಾವಣೆ ಘೋಷಣೆಯವರೆಗೆ ಮತದಾರರ ಪಟ್ಟಿಗೆ ಹೆಸರು ಸೇರಿಸಿಕೊಳ್ಳಲು ಅವಕಾಶ ಇದೆ

ಮತದಾನ ಮಾಡಲು ಚುನಾವಣೆ ಗುರುತಿನ ಚೀಟಿಯೇ ಅಂತಿಮ ಎಂದು ಭಾವಿಸಬಾರದು, ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದೆ ಹೋದರೆ ಮತದಾನಕ್ಕೆ ಅವಕಾಶ ಇಲ್ಲ, ಅದ್ದರಿಂದ ಸಾರ್ವಜನಿಕರು ರಾಜ್ಯ ಚುನಾವಣಾ ಆಯೋಗದ ವೆಬ್ ಸೈಟ್ಗೆ ಹೋಗಿ ತಮ್ಮ ಹೆಸರು ಪರಿಶೀಲಿಸಬೇಕು ಎಂದರು.

ಮತದಾರರು ಮಾತ್ರವಲ್ಲ, ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಇಚ್ಛಿಸುವವರು ಕೂಡ ತಮ್ಮ ಮತದಾರರ ಪಟ್ಟಿಯನ್ನು ಪರಿಶೀಲಿಸಿ ತಮ್ಮ ಹೆಸರು ಖಚಿತಪಡಿಸಿಕೊಳ್ಳಬೇಕು ಎಂದ ಅವರು, ಅರ್ಹ ಮತದಾರರು ಕೈಬಿಟ್ಟು ಹೋಗಬಾರದು ಎಂಬುದು ಚುನಾವಣಾ ಆಯೋಗದ ಉದ್ದೇಶವಾಗಿದೆ ಎಂದು ಹೇಳಿದರು.

 

ಚರಿತ್ರೆಯ ಪುಟಗಳಲ್ಲಿ ಚಿಕ್ಕಮಗಳೂರು-ಮಲೆನಾಡು

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ