October 5, 2024

ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಡ್ಡಿಕೆರೆ ಗ್ರಾಮದ ಗ್ರಾಮಸ್ಥರು ರಸ್ತೆ ನಿರ್ಮಾಣಕ್ಕೆ ನಿರ್ಲಕ್ಷ್ಯ ವಹಿಸುತ್ತಿರುವ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಕ್ರಮ ಖಂಡಿಸಿ ಪ್ರತಿಭಟನೆಗೆ ಸಜ್ಜಾಗಿದ್ದಾರೆ.

ಮಡ್ಡೀಕೆರೆ ಗ್ರಾಮದಲ್ಲಿ ಸುಮಾರು 80 ಕುಟುಂಬಗಳು ವಾಸವಾಗಿದ್ದು  ಸುಮಾರು 1 ಕಿ.ಮೀ. ರಸ್ತೆಯ ಕಾಂಕ್ರಿಟ್ ಕಾಮಗಾರಿಗೆ 50ಲಕ್ಷ ಅನುದಾನ ಬಿಡುಗಡೆಯಾಗಿದೆ ಆದರೆ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಕಾಮಗಾರಿ ಮುಂದುವರಿಸಲು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಗ್ರಾಮಸ್ಥರು ; ಮೂಡಿಗೆರೆ ಹೊಸಕೆರೆ ಮುಖ್ಯರಸ್ತೆಯಿಂದ ಮಡ್ಡಿಕೆರೆ ಗ್ರಾಮಕ್ಕೆ ತೆರಳುವ ರಸ್ತೆಯ ಡಾಂಬಾರಿಕರಣಕ್ಕೆ ಗ್ರಾಮಾಭಿವೃದ್ಧಿ ಯೋಜನೆಯಡಿ ಅನುದಾನ ಮಂಜೂರಾಗಿದ್ದು, ಸದರಿ ಕಾಮಗಾರಿಯ ಟೆಂಡರ್ ಕೂಡ ಆಗಿದೆ.

ಕಳೆದ ಡಿಸೆಂಬರ್ 10ರಂದು ಕಾಮಗಾರಿಯನ್ನು ಪ್ರಾರಂಭಿಸಿ ಈಗ ಕಾಮಗಾರಿಯನ್ನು ಮಾಡಲು ಅಧಿಕಾರಿಗಳು ಮತ್ತು ಗುತ್ತಿಗೆದಾರರು ಹಿಂದೇಟು ಹಾಕುತ್ತಿದ್ದಾರೆ. ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಮತ್ತು ಕ್ಷೇತ್ರದ ಶಾಸಕರಿಗೆ ಮನವಿ ಮಾಡಿದರು ಕಾಮಗಾರಿ ಮುಂದುವರಿಸಲು ಕ್ರಮ ಕೈಗೊಳ್ಳುತ್ತಿಲ್ಲ. ಆದುದರಿಂದ ಮೂಡಿಗೆರೆ ಜಿಲ್ಲಾ ಪಂಚಾಯಿತಿ ಇಂಜಿನಿಯರ್ ಕಛೇರಿ ಎದುರು ಮಹಿಳೆಯರು ಸೇರಿದಂತೆ ಗ್ರಾಮಸ್ಥರೆಲ್ಲಾ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಲಿಖಿತವಾಗಿ ಮೂಡಿಗೆರೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಜಿಲ್ಲಾ ಪಂಚಾಯಿತಿ ಇಂಜಿನಿಯರಿಂಗ್ ವಿಭಾಗ, ಮೂಡಿಗೆರೆ ತಹಸೀಲ್ದಾರ್ ಮತ್ತು ಪೊಲೀಸ್ ವೃತ್ತ ನಿರೀಕ್ಷಕರಿಗೆ ಮನವಿಯನ್ನು ಸಹ ಸಲ್ಲಿಸಿ ಎರಡು ಕಾಮಗಾರಿ ಪ್ರಾರಂಭಿಸಲು ಎರಡು ದಿನಗಳ ಗಡುವು ನೀಡಿದ್ದಾರೆ. ಕಾಮಗಾರಿ ಪ್ರಾರಂಭಿಸದೇ ಇದ್ದರೆ ದಿನಾಂಕ : 13-1-2023ನೇ ಶುಕ್ರವಾರ ಮೂಡಿಗೆರೆ ಜಿಲ್ಲಾ ಪಂಚಾಯಿತಿ ಇಂಜಿನಿಯರ್ ಕಛೇರಿ ಎದುರು ಉಗ್ರವಾದ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ