October 5, 2024

ವಿಶ್ವಕಪ್ ಹಾಕಿ ಪಂದ್ಯಾವಳಿ ಈ ಬಾರಿ ಭಾರತದಲ್ಲಿ ನಡೆಯುತ್ತಿದೆ. ನಿನ್ನೆ ಒಡಿಸ್ಸಾದ ಬಾರಾಮತಿ ಕ್ರೀಡಾಂಗಣದಲ್ಲಿ ವಿಶ್ವಕಪ್ ಹಾಕಿ ಪಂದ್ಯಾವಳಿಗೆ ಅದ್ದೂರಿಯಾಗಿ ಚಾಲನೆ ನೀಡಲಾಯಿತು.

ಅಂತರಾಷ್ಟ್ರೀಯ ಹಾಕಿ ಫೆಡರೇಷನ್ ಅಧ್ಯಕ್ಷ ತಯ್ಯಬ್ ಇಕ್ರಂ, ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್, ಒಡಿಸ್ಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮುಂತಾದ ಅತಿಥಿ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈ ಬಾರಿ ವಿಶ್ವಕಪ್ ಹಾಕಿ ಪಂದ್ಯಾವಳಿ ಒಡಿಸ್ಸಾದ ಭುವನೇಶ್ವರ ಮತ್ತ ರೂರ್ಕೆಲಾ ನಗರಗಳಲ್ಲಿ ಜನವರಿ 13 ರಿಂದ 29ರ ವರೆಗೆ ನಡೆಯಲಿದೆ. ಒಟ್ಟು 16 ರಾಷ್ಟ್ರಗಳು ಟೂರ್ನಿಯಲ್ಲಿ ಸೆಣಸುತ್ತಿವೆ.

16 ತಂಡಗಳನ್ನು 4 ಗುಂಪುಗಳಲ್ಲಿ ವಿಂಗಡಿಸಲಾಗಿದೆ. ಭಾರತ ತಂಡ ಡಿ. ಗುಂಪಿನಲ್ಲಿ ಇಂಗ್ಲೇಂಡ್, ಸ್ಪೇನ್ ಮತ್ತು ವೇಲ್ಸ್ ತಂಡದ ಜೊತೆ ಸೆಣಸಲಿದೆ. ನಾಳೆ ಜನವರಿ 13 ರಂದು ಭಾರತ ಆರಂಭಿಕ ಪಂದ್ಯದಲ್ಲಿ ಸ್ಪೇನ್ ವಿರುದ್ಧ ಮುಖಾಮುಖಿಯಾಗಲಿದೆ.

ಭಾರತ ತಂಡ ಒಮ್ಮೆ ಮಾತ್ರ ಹಾಕಿ ವಿಶ್ವಕಪ್ ಟ್ರೋಪಿ ಗೆದ್ದಿದೆ. 1975ರಲ್ಲಿ ಪಾಕಿಸ್ತಾನ ವಿರುದ್ಧ ಫೈನಲ್ ನಲ್ಲಿ ಗೆಲುವು ಪಡೆದು ಹಾಕಿ ವಿಶ್ವಕಪ್ ಗೆ ಮುತ್ತಿಟ್ಟಿದೆ. ಅಲ್ಲಿಂದ ಈಚೆಗೆ ಭಾರತ ತಂಡ ವಿಶ್ವಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಈ ಬಾರಿ ಭಾರತ ತಂಡವೂ ಗೆಲ್ಲುವ ಫೇವರೇಟ್ ತಂಡಗಳಲ್ಲಿ ಒಂದಾಗಿದೆ.

ಹರ್ಮನ್ ಪ್ರೀತ್ ಕೌರ್ ನಾಯಕತ್ವದ ಭಾರತ ತಂಡ ಉತ್ತಮ ತಯಾರಿಯೊಂದಿಗೆ ಕಣಕ್ಕಿಳಿಯುತ್ತಿದ್ದು ಕೋಟ್ಯಾಂತರ ಭಾರತೀಯರು ತಂಡದ ಮೇಲೆ ಅಪಾರ ನೀರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ