October 5, 2024

ಚಿಕ್ಕಮಗಳೂರು ನಗರದಲ್ಲಿ ನಿನ್ನೆ(ಶನಿವಾರ) ಕಾಂಗ್ರೆಸ್ ಪಕ್ಷದಿಂದ ಪ್ರಜಾಧ್ವನಿ ಬಸ್ ಯಾತ್ರೆ ಸಮಾವೇಶ ನಡೆಯಿತು. ನಗರದ ಬೈಪಾಸ್ ರಸ್ತೆಯ ಆಶ್ರಯ ಬಡಾವಣೆಯ ಜಾಗದಲ್ಲಿ ನಡೆದ ಬಹಿರಂಗ ಸಮಾವೇಶದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಭಾಗವಹಿಸಿ ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ನಾನು ನಿಮ್ಮವನೆ ನನಗೂ ಒಂದು ಚಾನ್ಸ್ ಕೊಡಿ: ಡಿಕೆಶಿ
ನಾನು ನಿಮ್ಮವನೆ, ನನಗೂ ಒಂದು ಚಾನ್ಸ್ ಕೊಡಿ, ಇಲ್ಲಿಂದ ನೆಂಟಸ್ಥನವನ್ನು ಮಾಡಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ.ಶಿವಕುಮಾರ್ ಹೇಳಿದರು.

ಕರಾವಳಿ ಹಾಗೂ ಮಲೆನಾಡಿಗೆ ನಮ್ಮ ಆಧ್ಯತೆ ಇದೆ. ಮಲೆನಾಡು ಹಾಗೂ ಕರಾವಳಿ ಭಾಗದ ಅಭಿವೃದ್ಧಿಗೆ ಕಾಂಗ್ರೆಸ್ ಪ್ರತ್ಯೇಕ ಪ್ರಣಾಳಿಕೆ ಸಿದ್ಧಪಡಿಸಲಿದೆ ಎಂದು ತಿಳಿಸಿದರು.

ಇದಲ್ಲದೆ ರಾಜ್ಯದ ಪ್ರತಿ ಮನೆಗಳಿಗೆ ಪ್ರತಿ ತಿಂಗಳು 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವುದು ಮತ್ತು ಪ್ರತಿ ಮನೆಯ ಹೆಣ್ಣು ಮಕ್ಕಳಿಗೆ ಪ್ರತಿ ತಿಂಗಳಿಗೆ 2 ಸಾವಿರ ರೂ.ನಂತೆ ವರ್ಷಕ್ಕೆ 24ಸಾವಿರ ರೂ. ಹಣ ಹಾಗೂ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು 10ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿದ್ದೇವೆ ಎಂದರು.
ನಮ್ಮ ಕಾರ್ಯಕರ್ತರು, ಸ್ಥಳೀಯ ಮುಖಂಡರು ಪ್ರತಿ ಮನೆ ಮನೆಗೆ ತೆರೆಳಿ ಮಹಿಳೆಯರಿಂದ ಬ್ಯಾಂಕ್ಗೆ ಅರ್ಜಿ ಹಾಕಿಸಿ ಖಾತೆಗಳನ್ನು ತೆರೆಸುವ ಕೆಲಸ ಮಾಡಬೇಕು  ಎಂದು ಸೂಚಿಸಿದರು.

ಬಿಜೆಪಿ ಸರ್ಕಾರ ಅತಿದೊಡ್ಡ ಭ್ರಷ್ಟ ಸರ್ಕಾರವಾಗಿದೆ. ಶೇ.40 ರಷ್ಟು ಕಮಿಷನ್, ಎಲ್ಲಾ ಹುದ್ದೆಗಳ ಮಾರಾಟ ನಡೆಯುತ್ತಿದೆ ಎಂದು ಕಂಟ್ರಾಕ್ಟರ್ ಸಂಘ ದೂರು ನೀಡಿದೆ. ವಿಧಾನ ಸೌಧದ ಪ್ರತಿ ಗೋಡೆಗಳು ಹಣಕ್ಕೆ ಬಾಯಿ ಬಿಡುತ್ತವೆ. ಇಷ್ಟಾದರೂ ಮುಖ್ಯಮಂತ್ರಿಗಳು ಇದಕ್ಕೆಲ್ಲಾ ಸಾಕ್ಷಿ ಕೊಡಿ ಅಂತಾರೆ. ಇದಾವ ಅಕ್ರಮಗಳೂ ನಡೆದಿಲ್ಲವಾದರೆ ಐಎಎಸ್, ಐಪಿಎಸ್ ಅಧಿಕಾರಿಗಳು ಜೈಲಿಗೆ ಯಾಕೆ ಹೋಗುತ್ತಿದ್ದರು ಎಂದು ಪ್ರಶ್ನಿಸಿದರು.

5 ವರ್ಷಗಳ ಕಾಲ ಸಿದ್ದರಾಮಯ್ಯ ಅವರ ಆಡಳಿತದಲ್ಲಿ ಸರ್ಕಾರಕ್ಕೆ ಒಂದೇ ಒಂದು ಕಳಂಕ ಬಂದಿರಲಿಲ್ಲ. ನಾವೂ ಇಂಧನ ಇಲಾಖೆಯಲ್ಲಿ ಸಾವಿರಾರು ಲೈನ್ಮೆನ್ ಇನ್ನಿತರೆ ಹುದ್ದೆ ತುಂಬಿದೆವು ಒಂದೇ ಒಂದರಲ್ಲಿ ಲಂಚ ಪಡೆದಿದ್ದರೆ ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ ಎಂದರು. ಇದೇ ಜಿಲ್ಲೆಯಿಂದ ನಾನು ನೆಂಟಸ್ಥನವನ್ನು ಬೆಳೆಸಿದ್ದು ಜಿಲ್ಲೆಯಲ್ಲಿ ಐದಕ್ಕೆ ಐದು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕೆಂದು ಕೇಳಿಕೊಂಡರು.

ಸಿ.ಟಿ ರವಿ ವಿರುದ್ಧ ಕಿಡಿಕಾರಿದ ಬಿ ಕೆ ಹರಿಪ್ರಸಾದ್

ಸಮಾವೇಶದಲ್ಲಿ ಮಾತಾಡಿದ ಸಿದ್ದರಾಮಯ್ಯ ಹಾಗೂ ಬಿ ಕೆ ಹರಿಪ್ರಸಾದ್ ಕೇಂದ್ರ , ರಾಜ್ಯ ಸರ್ಕಾರದ ವಿರುದ್ಧ ವಾಗ್ದಳಿ ನಡೆಸಿದ್ದಲ್ಲದೆ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಸಿಟಿ ರವಿ ವಿರುದ್ಧ ಕಿಡಿ ಕಾರಿದರು.ವಿಧಾನ ಪರಿಷತ್ ನ ನಾಯಕ ಬಿ ಕೆ ಹರಿಪ್ರಸಾದ್ ಮಾತಾಡುವ ವೇಳೆಯಲ್ಲಿ ಈ ಜಿಲ್ಲೆ ಭಾವೈಕ್ಯತೆಯ ಜಿಲ್ಲೆ, ಇಲ್ಲಿ ಶ್ರೀಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಇದ್ದು ದೇಶದಲ್ಲೇ ಸಾಮರಸ್ಯದ ಸಂಕೇತವಾಗಿದ್ದು, ಧರ್ಮದ ಹೆಸರಿನಲ್ಲಿ ವಿಷಬೀಜ ಬಿತ್ತುವ ಕೆಲಸವನ್ನು ಇಲ್ಲಿನ ಶಾಸಕ ಸಿ.ಟಿ ರವಿ ಮಾಡುತ್ತಿದ್ದಾರೆ. ಇಲ್ಲಿನ ರಸ್ತೆಗಳೆಲ್ಲ ಡಾಂಬರ್ ಕಿತ್ತು ಬಂದಿದ್ದು, ರಸ್ತೆಗಳಲ್ಲಿ ಶೇ.4೦ ಕಮಿಷನ್ ಹೊಡೆಯುತ್ತಿದ್ದಾರೋ ಎಂದು ವ್ಯಂಗ್ಯ ಮಾಡಿದರು. ಇಂತಹ ಶಾಸಕರ ಅವಶ್ಯಕತೆ ಈ ಜಿಲ್ಲೆಗೆ ಇಲ್ಲ ಇಂತವರನ್ನು ಬದಲಿಸುವ ಕೆಲಸವಾಗಬೇಕು, ಈ ನಿಟ್ಟಿನಲ್ಲಿ ಮುಂಬರುವ ಚುನಾವಣೆಯಲ್ಲಿ ಬದಲಾವಣೆಗೆ ಇಲ್ಲಿನ ಜನರು ಮುಂದಾಗಬೇಕು. ಹಿಂದಿನ ಕಾಂಗ್ರೆಸ್ ಭದ್ರಕೋಟೆ ಮರುಕುಳಿಸಬೇಕು ಎಂದರು.

ಜೆ.ಡಿ.ಎಸ್. ಅವಕಾಶವಾದಿ ಪಕ್ಷ : ಸಿದ್ದರಾಮಯ್ಯ

ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ ಜೆಡಿಎಸ್ ಪಕ್ಷ ಸಿದ್ಧಾಂತಗಳಿಗೆ ಬದ್ಧವಾಗಿರುವ ಪಕ್ಷವಲ್ಲ ಅಧಿಕಾರಕ್ಕಾಗಿ ಯಾವ ಪಕ್ಷದ ಜೊತೆಗೆ ಬೇಕಾದರೂ ಹೋಗುತ್ತಾರೆ. ಆದರೆ ಕಾಂಗ್ರೆಸ್ ಪಕ್ಷ ಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡ ಪಕ್ಷ. ಕೋಮುವಾದದೊಂದಿಗೆ ರಾಜಿ ಮಾಡಿಕೊಳ್ಳದ ಪಕ್ಷ ಇದ್ದರೇ ಅದು ಕಾಂಗ್ರೆಸ್ ಪಕ್ಷ ಎಂದರು.
ವಿಧಾನ ಪರಿಷತ್ ಮಾಜಿ ಅಧ್ಯಕ್ಷ ಬಿ.ಎಲ್.ಶಂಕರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣಜೀತ್ ಸಿಂಗ್ ಸುರ್ಜೇವಾಲ, ಎಐಸಿಸಿ ಕಾರ್ಯದರ್ಶಿ ರೋಜಿ ಜಾರ್ಜ್, ಮಾಜಿ ಸಚಿವೆ ಮೋಟಮ್ಮ, ಡಿ.ಕೆ.ತಾರಾದೇವಿ ಸಿದ್ಧಾರ್ಥ, ಗಾಯತ್ರಿ ಶಾಂತೇಗೌಡ, ಶಾಸಕ ಟಿ.ಡಿ.ರಾಜೇಗೌಡ, ಮಾಜಿ ಶಾಸಕ ಎಸ್.ಎಂ.ನಾಗರಾಜ್, ವೈಎಸ್ವಿದತ್ತ, ಬಿ.ಎಂ. ಸಂದೀಪ್, ಜಿ.ಹೆಚ್. ಶ್ರೀನಿವಾಸ್, ಜಿಲ್ಲಾಧ್ಯಕ್ಷ ಡಾ.ಅಂಶುಮಂತ್ ಇತರರು ಇದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ