October 5, 2024

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಗೌಡಹಳ್ಳಿ ವತಿಯಿಂದ ಊರುಬಗೆ ಗ್ರಾಮದಲ್ಲಿ ನೂತನ ಗೋದಾಮು ಸೋಮವಾರ ಉದ್ಘಾಟನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಹಕಾರ ಸಂಘದ ಅಧ್ಯಕ್ಷ ಜಿ.ಕೆ. ದಿವಾಕರ್ ಅವರು ಸಹಕಾರ ಸಂಘಗಳು ಗ್ರಾಮೀಣ ಭಾಗದ ರೈತಾಪಿ ವರ್ಗಕ್ಕೆ ಹಲವು ರೀತಿಯಲ್ಲಿ ಆರ್ಥಿಕ ಚುಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿದ್ದು, ಸದಸ್ಯರು ಸಂಘದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಸಾಲವನ್ನು ಸಕಾಲದಲ್ಲಿ ಕಟ್ಟಿದರೆ ಸಂಘದ ಏಳಿಗೆಗೆ ಸಹಕಾರಿಯಾಗುತ್ತದೆ. ಗೌಡಹಳ್ಳಿ ಸಹಕಾರ ಸಂಘವು ಜಿಲ್ಲೆಯ ಹಿರಿಯ ಸಹಕಾರ ಸಂಘಗಳಲ್ಲಿ ಒಂದಾಗಿದೆ. ಸಂಘವು ತನ್ನ ಸದಸ್ಯರಿಗೆ ಹಲವು ರೀತಿಯ ಸೇವೆಗಳನ್ನು ಒದಗಿಸುತ್ತಿದೆ. ಇದೀಗ ಊರುಬಗೆಯಲ್ಲಿ ನಿರ್ಮಿಸಿರುವ ನೂತನ ಗೋದಾಮು ಕಟ್ಟದದಲ್ಲಿ ರಸಗೊಬ್ಬರ, ಪಡಿತರ, ಹಿಟ್ಟಿನ ಮಿಲ್ ಪ್ರಾರಂಭಿಸುವ ಉದ್ದೇಶ ಹೊಂದಲಾಗಿದೆ. ಈ ಭಾಗದ ರೈತರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಉದ್ಘಾಟನಾ ಸಮಾರಂಭದಲ್ಲಿ ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ, ಮೂಡಿಗೆರೆ ಪಿ.ಸಿ.ಎ.ಆರ್.ಡಿ.ಬ್ಯಾಂಕ್ ಅಧ್ಯಕ್ಷರಾದ ಹಳಸೆ ಶಿವಣ್ಣ, ರಾಜ್ಯ ಸಹಕಾರಿ ಮಹಾಮಂಡಳಿ ನಿರ್ದೇಶಕ ಬಿ.ಸಿ.ಲೋಕಪ್ಪಗೌಡ, ಅಮೇರಿಕಾ ಅಕ್ಕಾ ಸಂಸ್ಥೆಯ ಮಾಜಿ ಅಧ್ಯಕ್ಷ ಹಳೇಕೋಟೆ ವಿಶ್ವಾಮಿತ್ರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ಗೌಡಹಳ್ಳಿ ಸಹಕಾರ ಸಂಘದ ಬೆಳವಣಿಗೆಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಊರುಬಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ನಚ್ಚಿ, ಉಪಾಧ್ಯಕ್ಷೆ ಕೆ.ಪಿ. ಭಾರತಿ, ಗ್ರಾ.ಪಂ. ಸದಸ್ಯರುಗಳು, ಗೌಡಹಳ್ಳಿ ಸಹಕಾರ ಸಂಘದ ಉಪಾಧ್ಯಕ್ಷ ಮತ್ತು ನೂತನ ಕಟ್ಟಡ ಸಮಿತಿಯ ಅಧ್ಯಕ್ಷ ಹೆಚ್.ಬಿ. ಜಗನ್ನಾಥಗೌಡ, ಸಂಘದ ನಿರ್ದೇಶಕರುಗಳಾದ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಆರ್. ರವೀಂದ್ರ ಮುಂತಾದವರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ