October 5, 2024

ಫೆಬ್ರುವರಿ 11ರಿಂದ 14ರವರೆಗೆ ನಾಲ್ಕು ದಿನಗಳ ಕಾಲ ಮೂಡಿಗೆರೆ ತಾಲ್ಲೂಕು ಉತ್ಸವದ ಅಂಗವಾಗಿ ಪಟ್ಟಣದ ಹೊಯ್ಸಳ ಕ್ರೀಡಾಂಗಣದಲ್ಲಿ ಪ್ರತಿದಿನ ಸಂಜೆ 6ರಿಂದ ವೈವಿದ್ಯಮಯಸಾಂಸ್ಕೃತಿಕ ಪ್ರದರ್ಶನ ಏರ್ಪಡಿಸಲಾಗಿದೆ.

ಉತ್ಸವದ ಕುರಿತು ಸ್ವಾಗತ ಸಮಿತಿ ಅಧ್ಯಕ್ಷರಾದ ಶಾಸಕ ಎಂ.ಪಿ. ಕುಮಾರಸ್ವಾಮಿಯವರು ನಿನ್ನೆ ಮೂಡಿಗೆರೆಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಮೂಡಿಗೆರೆಯಲ್ಲಿ ಕಳೆದ ನಾಲ್ಕೈದು ವರ್ಷಗಳಿಂದ ಅತಿವೃಷ್ಟಿ ಮತ್ತು ಕೋವಿಡ್ ಕಾರಣದಿಂದ ಯಾವುದೇ ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಈ ಬಾರಿ ಜನರ ಅಪೇಕ್ಷೆಯ ಮೇರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಫೆ.11ರಿಂದ 14 ವರೆಗೆ ಪಟ್ಟಣದ ಹೊಯ್ಸಳ ಕ್ರೀಡಾಂಗಣದಲ್ಲಿ ಮೂಡಿಗೆರೆ ತಾಲ್ಲೂಕು ಆಚರಿಸಲು ಸಕಲ ಸಿದ್ಧತೆ ನಡೆದಿದೆ. ಜನರಿಗೆ ಮನೋರಂಜನೆಯ ಜೊತೆಗೆ ಮಲೆನಾಡಿನ ಆಹಾರ ಪದ್ಧತಿ, ಉಡುಗೆ-ತೊಡುಗೆ, ಸಂಸ್ಕೃತಿ ಪರಿಚಯಿಸಿ ಪ್ರವಾಸೋಧ್ಯಮ ಅಭಿವೃದ್ಧಿಪಡಿಸುವುದು ಉತ್ಸವದ ಉದ್ದೇಶವಾಗಿದೆ.

ಮೂಡಿಗೆರೆ ಉತ್ಸವ ಸರ್ವ ಪಕ್ಷಗಳೊಂದಿಗೆ ಮತ್ತು ಸಂಘಸಂಸ್ಥೆಗಳೊಂದಿಗೆ ಸೇರಿ ಪಕ್ಷಾತೀತವಾಗಿ ಆಚರಿಸಲಾಗುತ್ತಿದೆ.  ಫೆ.11ರಂದು ಆರಂಭದ ದಿನ ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಸಾಂಸ್ಕೃತಿಕ ಮೆರವಣಿಗೆ ನಡೆಯುತ್ತದೆ. ನಂತರ ಹೊಯ್ಸಳ ಕ್ರೀಡಾಂಗಣದ ಬೃಹತ್ ಹೇಮಾವತಿ ವೇದಿಕೆಯಲ್ಲಿ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ, 2ನೇ ದಿನ ಉಡುಪಿಯ ಭಾರ್ಗವಿ ತಂಡದಿಂದ ಮನಮೋಹಕ ಸಾಂಸ್ಕೃತಿಕ ವೈಭವ, 3ನೇ ದಿನ ಕಾಂತಾರ ಚಲನಚಿತ್ರದ ಕಲಾವಿದರಿಂದ ಹಾಸ್ಯ ಸಂಜೆ, 4 ನೇ ದಿನ ಕ್ರಿಯೇಟಿವ್ ಮೈಂಡ್ ಮೂಡಿಗೆರೆ ಸಹಯೋಗದಲ್ಲಿ “ರಂಗ ನೆನಪು” ರಾಜ್ಯಮಟ್ಟದ ಸಮೂಹ ನೃತ್ಯ ಸ್ಪರ್ಧೆ ಕಾರ್ಯಕ್ರಮ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಆಹ್ವಾನ ನೀಡಿದ್ದಾರೆ.

ಸಮಿತಿ ಕಾರ್ಯಾಧ್ಯಕ್ಷ ಜೆ.ಎಸ್.ರಘು ಮಾತನಾಡಿ, ಮೂಡಿಗೆರೆ ಪಟ್ಟಣ ಪ್ರವೇಶಿಸುವ 5 ಪ್ರಮುಖ ರಸ್ತೆಗಳಿಗೆ ಪ್ರಮುಖ ನಾಯಕರ ಹೆಸರಿನೊಂದಿಗೆ ಪ್ರವೇಶ ದ್ವಾರ ನಿರ್ಮಿಸಲಾಗಿದೆ. ವಿಶೇಷವಾಗಿ ಆಹಾರ ಮೇಳ, ವಸ್ತು ಪ್ರದರ್ಶನ, ಸಾಧಕರಿಗೆ ಸನ್ಮಾನ, ನಗರ ದೀಪಾಲಂಕಾರ ಏರ್ಪಡಿಸಲಾಗಿದೆ. ಉತ್ಸವ ಸಮಿತಿ ಸದಸ್ಯರು ಪ್ರತಿ ಗ್ರಾ.ಪಂ.ಗಳು ಆಯಾ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಹಾಗೂ ಕರಪತ್ರ ವಿತರಣೆ ಮೂಲಕ ಕಾರ್ಯಕ್ರಮದ ಯಶಸ್ಸಿಗಾಗಿ ತಯಾರಿ ನಡೆದಿದೆ ಉತ್ಸವಕ್ಕೆ ತಾಲೂಕಿನ ಎಲ್ಲಾ ಸಾರ್ವಜನಿಕರು ಆಗಮಿಸಿ ಯಶಸ್ವಿಗೊಳಿಸಬೇಕಾಗಿ ಮನವಿ ಮಾಡಿದರು.

ಸಮಿತಿ ಗೌರವ ಸಲಹೆಗಾರರಾದ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಿ.ಬಿ.ಧರ್ಮಪಾಲ್ ಹೆಲಿಟೂರಿಸಂ ಬಗ್ಗೆ ಮಾಹಿತಿ ನೀಡಿ ಉತ್ಸವದ 4 ದಿನ ಮೂಡಿಗೆರೆ ಜನತೆಗೆ ಪ್ರವಾಸಿ ತಾಣ ವೀಕ್ಷಿಸಲು ಹೆಲಿಟೂರಿಸಂ ವ್ಯವಸ್ಥೆ ಕಲ್ಪಿಸಿದ್ದು, ನೊಂದಣಿ ಪ್ರಾರಂಭಿಸಲಾಗಿದೆ. ಫೆಬ್ರುವರಿ 11ರಿಂದ ಬೆಳಿಗ್ಗೆ 9-30ರಿಂದ ಸಂಜೆ 5 ರವರೆಗೆ ಮೂಡಿಗೆರೆ ಬಿ.ಜಿ.ಎಸ್. ಕ್ರೀಡಾಂಗಣದಿಂದ ಪ್ರಾರಂಭಿಸಿ ತಾಲ್ಲೂಕಿನ ಪ್ರವಾಸಿ ತಾಣಗಳಿಗೆ 9 ನಿಮಿಷಗಳ ಹೆಲಿ ಟೂರಿಸಂ ಏರ್ಪಡಿಸಲಾಗಿದೆ. ಪ್ರತಿಯೊಬ್ಬರಿಗೆ ರೂ. 3500-00 ಟಿಕೆಟ್ ದರ ನಿಗದಿಪಡಿಸಲಾಗಿದೆ ಎಂದಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಸ್ವಾಗತ ಸಮಿತಿ ಪ್ರಧಾನ ಸಂಚಾಲಕ ಪ್ರಸನ್ನ ಗೌಡಹಳ್ಳಿ, ಪಟ್ಟಣ ಪಂಚಾಯಿತಿ ಸದಸ್ಯರಾದ ಹೆಚ್.ಜೆ. ಸಂದರ್ಶ, ಮನೋಜ್ ಕುಮಾರ್, ಸ್ವಾಗತ ಸಮಿತಿ ಸದಸ್ಯರಾದ ಪರೀಕ್ಷಿತ್ ಜಾವಳಿ, ಪಂಚಾಕ್ಷರಿ ಹಾಲೂರು ಮುಂತಾದವರು ಉಪಸ್ಥಿತರಿದ್ದರು.

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ