October 5, 2024

ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿ ಮತ್ತೀಕಟ್ಟೆ ಗ್ರಾಮದಲ್ಲಿ ಹುಲಿ ದಾಳಿಗೆ ಸಿಂಧಿ ಹಸುವೊಂದು ಬಲಿಯಾಗಿದೆ.

ಮತ್ತೀಕಟ್ಟೇ ಬ್ಲೂ ಮೌಂಟೇನ್ ಎಸ್ಟೇಟ್ ಆನಂದ್ ಮಿಸ್ಕಿತ್ ಎಂಬುವವರಿಗೆ ಸೇರಿದ ಕಾಫಿ ಎಸ್ಟೇಟ್ ನಲ್ಲಿ ಹುಲಿ ಹಸುವಿನ ಮೇಲೆ ದಾಳಿ ಮಾಡಿ ಕೊಂದು ತಿಂದಿದೆ. ಗ್ರಾಮದ ಮದುಸೂದನ್ ಚಂದ್ರಾವತಿ ಪೂಜಾರಿ ಎನ್ನುವವರಿಗೆ ಸೇರಿದ ಸಿಂಧಿ ಹಸು ಎಂದು ತಿಳಿದುಬಂದಿದೆ.

ಹಸು ಬಲಿಯಾಗಿರುವ ಸ್ಥಳಕ್ಕೆ ಉಪವಲಯ ಅಧಿಕಾರಿ ಉಮೇಶ್ ಮತ್ತು ಅರಣ್ಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೈನುಗಾರಿಕೆಯಿಂದ ಜೀವನ ನಡೆಸುತ್ತಿದ್ದ ಕುಟುಂಬ ಈಗ ಬೆಲೆಬಾಳುವ ಸಿಂಧಿ ಹಸುವನ್ನು ಕಳೆದುಕೊಂಡು ಅಪಾರ ನಷ್ಟ ಅನುಭವಿಸುತ್ತಿದ್ದಾರೆ. ಅವರಿಗೆ ಅರಣ್ಯ ಇಲಾಖೆ ಸೂಕ್ತ ಪರಿಹಾರ ನೀಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಪ್ರೀತಿಯಿಂದ ಸಾಕಿದ್ದ ಹಸುವನ್ನು ಹುಲಿ ಬಗೆದು ತಿಂದಿರುವ ಭಯಾನಕ ದೃಶ್ಯಕಂಡು ಹಸುವಿನ ಮಾಲೀಕರು ಕಣ್ಣೀರು ಸುರಿಸಿದ್ದಾರೆ.

ಬಣಕಲ್ ಹೋಬಳಿ ಹೆಗ್ಗುಡ್ಲು, ಮತ್ತೀಕಟ್ಟೆ, ಬಿ.ಹೊಸಳ್ಳಿ, ಬೆಳಗೋಡು, ತಳವಾರ, ಭಾರತೀಬೈಲ್ ಸುತ್ತಮುತ್ತಲ ಪ್ರದೇಶಗಳಲ್ಲಿ ಹುಲಿಗಳ ದಾಳಿಗೆ ಹತ್ತಾರು ಜಾನುವಾರುಗಳು ಬಲಿಯಾಗಿವೆ. ಇತ್ತೀಚೆಗೆ ಕನ್ನಗೆರೆ ಸಮೀಪ ಒಂದೇ ದಿನ ಮೂರು ಹಸುಗಳು ಹುಲಿದಾಳಿಗೆ ಬಲಿಯಾಗಿದ್ದವು. ಈ ಬಗ್ಗೆ ಸಾರ್ವಜನಿಕರು ಪ್ರತಿಭಟನೆಯನ್ನು ಸಹ ಮಾಡಿದ್ದಾರೆ. ನಿರಂತರವಾಗಿ ಗೋವುಗಳನ್ನು ಹಿಡಿದು ತಿನ್ನುತ್ತಿರುವ ಹುಲಿಗಳನ್ನು ಹಿಡಿದು ಸ್ಥಳಾಂತರಿಸಬೇಕು ಎಂದು ಸ್ಥಳೀಯ ರೈತರು ಒತ್ತಾಯಿಸುತ್ತಲೇ ಇದ್ದಾರೆ. ಆದರೆ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ