October 5, 2024

ಬಾಳೆಹೊನ್ನೂರು ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಜೋಡಿ ಕೊಲೆ ಪ್ರಕರಣದ ನಂತರ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಬಂದೂಕು ದುರಸ್ತಿಪಡಿಸುವ ಅಂಗಡಿಗಳಿಗೆ ದಾಳಿ ನಡೆಸಿ ಭಾರಿ ಪ್ರಮಾಣದ ಅಕ್ರಮ ಬಂದೂಕು, ರಿವಾಲ್ವರ್ ಪತ್ತೆ ಹಚ್ಚಿದ್ದು ಆರು ಜನರನ್ನು ಬಂಧಿಸಿದ್ದಾರೆ.

ಜಿಲ್ಲೆಯ ಬಾಳೆಹೊನ್ನೂರು , ಬಾಳೂರು, ಕಳಸ ಹಾಗು ಎನ್ ಆರ್ ಪುರ ಠಾಣೆ ವ್ಯಾಪ್ತಿಯಲ್ಲಿ ದಾಳಿ ನಡೆದಿದೆ.

ಪರವಾನಿಗೆ ರಹಿತ 41 , ಪರವಾನಿಗೆ ಸಹಿತ 10 ಬಂದೂಕು, 2 ರಿವಾಲ್ವರ್, 22 ರೈಫಲ್ ಗುಂಡು, 40 ಬುಕ್ ಶಾಟ್ ಗುಂಡು, ಬಂದೂಕು ನಳಿಕೆ, ಕಾರ್ಟ್ರೆಜ್ ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಈ ಸಂಬಂಧ ನೇತ್ರಕುಂಡ ಎಸ್ಟೇಟಿನ ಸದಾಶಿವಾಚಾರ್, ಬಾಳೂರಿನ ಸುಧಾಕರ್ ಆಚಾರಿ , ಬಾಳೆಹೊನ್ನೂರಿನ ರಾಮಚಂದ್ರ ಆಚಾರಿ, ಮಾವಿನಕೆರೆಯ ಸುಂದರ, ಗಂಗಾಧರ, ಆಡುವಳ್ಳಿಯ ಶಿವರಾಜ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಬಾಳೆಹೊನ್ನೂರು ಠಾಣಾ ವ್ಯಾಪ್ತಿಯ ಖಾಂಡ್ಯ ಸಮೀಪದ ಬಿದಿರೆ ಎಂಬಲ್ಲಿ ವ್ಯಕ್ತಿಯೊಬ್ಬ ಬಂದೂಕಿನಿಂದ ಗುಂಡು ಹಾರಿಸಿದ ಪರಿಣಾಮ ಇಬ್ಬರು ಅಮಾಯಕ ಯುವಕರು ತಮ್ಮ ಪ್ರಾಣ ಕಳೆದುಕೊಂಡಿದ್ದರು. ರಮೇಶ್ ಎಂಬಾತ ಈ ಕೃತ್ಯ ನಡೆಸಿದ್ದ. ಆತನು ಅಕ್ರಮ ಬಂದೂಕು ಬಳಸಿ ಬಿದಿರೆ ಗ್ರಾಮದಲ್ಲಿ ಬೈಕಿನಲ್ಲಿ ಸಾಗುತ್ತಿದ್ದ ಪ್ರವೀಣ್ ಮತ್ತು ಪ್ರಕಾಶ್ ಎಂಬ ಇಬ್ಬರು ಯುವಕರನ್ನು ಗುಂಡು ಹಾರಿಸಿ ಕೊಲೆ ಮಾಡಿದ್ದ.

ಜಿಲ್ಲೆಯಲ್ಲಿ ಪರವಾನಗಿ ರಹಿತ ಬಂದೂಕು ವ್ಯಾಪಕ ಪ್ರಮಾಣದಲ್ಲಿದ್ದು, ಅನೇಕ ಮಂದಿ ಬಂದೂಕು ದುರಸ್ತಿ ಅಂಗಡಿಯವರು ತಾವೇ ಸ್ಥಳೀಯವಾಗಿ ಅಕ್ರಮವಾಗಿ ಬಂದೂಕು ತಯಾರಿಸಿ ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸ್ ಇಲಾಖೆಗೆ ಬಂದಿರುವ ಮಾಹಿತಿ ಆದರಿಸಿ ವಿವಿದೆಡೆ ದಾಳಿ ನಡೆಸಿ ಅಕ್ರಮ ಬಂದೂಕುಗಳನ್ನು ವಶಪಡಿಸಿಕೊಂಡಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ