October 5, 2024

ದಕ್ಷಿಣ ಕಾಶಿ ಕಳಸದಲ್ಲಿ 18ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಳೆಯಿಂದ ಎರಡು ದಿನಗಳ ಕಾಲ ಕಳಸದಲ್ಲಿ ಕನ್ನಡ ಸಾಹಿತ್ಯ  ಸಾಂಸ್ಕೃತಿಕ ಸಂಭ್ರಮದ ಕಲರವ.

ಕಳಸ ನೂತನ ತಾಲ್ಲೂಕು ಘೋಷಣೆಯಾದ ಮೇಲೆ ಇದೇ ಪ್ರಥಮ ಬಾರಿಗೆ ತಾಲ್ಲೂಕು ಕೇಂದ್ರ ಕಳಸದಲ್ಲಿ ಸಾಹಿತ್ಯ ಜಾತ್ರೆ ನಡೆಯುತ್ತಿದೆ.

ಕಳಸ ಪಟ್ಟಣದ ಪ್ಲಾಂಟರ್ಸ್ ಕ್ಲಬ್ ಆವರಣದಲ್ಲಿ ಚಿಕ್ಕಮಗಳೂರು ಜಿಲ್ಲಾ 18ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವೇದಿಕೆ ಸಿದ್ದವಾಗಿದೆ.
ಕಳಸ ತಾಲ್ಲೂಕಿನ ಜನತೆ ಸಾಹಿತ್ಯ ಜಾತ್ರೆಯನ್ನು ಸಂಭ್ರಮದಿಂದ ಸ್ವಾಗತಿಸಲು ಸಜ್ಜಾಗಿದ್ದಾರೆ.

ಜಿಲ್ಲಾ ಸಾಹಿತ್ಯ ಪರಿಷತ್ತು ಮತ್ತು ಸಮ್ಮೇಳನ ಸ್ವಾಗತ ಸಮಿತಿ ವ್ಯವಸ್ಥಿತ ರೀತಿಯಲ್ಲಿ ಸಮ್ಮೇಳನಕ್ಕೆ ಸಿದ್ಧತೆ ಮಾಡಿಕೊಂಡಿದೆ.

ಜಿಲ್ಲೆಯ ಹಿರಿಯ ಜಾನಪದ ಸಾಹಿತಿ, ವಾಗ್ಮಿ ಚಟ್ನಳ್ಳಿ ಮಹೇಶ್ ಅವರು ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದಾರೆ.

ನಾಳೆ ಬೆಳಿಗ್ಗೆ ಕಳಸ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಮ್ಮೇಳನಾಧ್ಯಕ್ಷರ ಭವ್ಯ ಮೆರವಣಿಗೆ ನಡೆಯಲಿದೆ. ಮೆರವಣಿಗೆಯ ನಂತರ ಸಮ್ಮೇಳನ ಉದ್ಘಾಟನೆ ಸಮಾರಂಭ ನೆರವೇರಲಿದೆ.

ಉದ್ಘಾಟನೆಯ ನಂತರ ಎರಡು ದಿನಗಳ ಕಾಲ ವಿವಿಧ ಸಾಹಿತ್ಯ ಗೋಷ್ಠಿಗಳು, ಕವಿಗೋಷ್ಠಿ, ಬಹಿರಂಗ ಅಧಿವೇಶನ,ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ.

ಸಮ್ಮೇಳನದಲ್ಲಿ ಸಾಹಿತ್ಯ ಸಿರಿ ಪ್ರಶಸ್ತಿ ಪ್ರಧಾನ, ಸಾಧಕರಿಗೆ ಗೌರವ ಸಮರ್ಪಣೆ, ಪುಸ್ತಕಗಳ ಬಿಡುಗಡೆ, ‘ನುಡಿ ಕಳಸ’ ಸ್ಮರಣ ಸಂಚಿಕೆ ಬಿಡುಗಡೆ, ಪುಸ್ತಕ ಪ್ರದರ್ಶನ ಮತ್ತು ಮಾರಾಟ ಹೀಗೆ ವೈವಿದ್ಯಮಯ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

ಜಿಲ್ಲೆಯ ಸಾಹಿತ್ಯ ಅಭಿಮಾನಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಮ್ಮೇಳನದಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಸೂರಿ ಶ್ರೀನಿವಾಸ್ ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಆದರದ ಸ್ವಾಗತ ಕೋರಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ