October 5, 2024

ಚಿಕ್ಕಮಗಳೂರು ಜಿಲ್ಲೆ ಆಲ್ದೂರು ವಲಯದ ಸಾರಾಗೋಡು ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದ ಬಳಸಿ ಎಸೆದ ಬಂದೂಕಿನ ಗುಂಡುಗಳು ಪತ್ತೆಯಾಗಿವೆ.

ರಸ್ತೆಬದಿಯಲ್ಲಿ ರಾಶಿಹಾಕಿದ್ದ ಬಂದೂಕಿನ ಖಾಲಿ ಕಾಟ್ರೇಜ್ ಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಸಾರಗೋಡು ಮೀಸಲು ಅರಣ್ಯ ವ್ಯಾಪ್ತಿಯ ಮೂಡಿಗೆರೆ ತಾಲ್ಲೂಕಿಗೆ ಸೇರಿದ ಕುಂದೂರು ಗ್ರಾಮ ಪಂಚಾಯಿತಿ   ಕಣೇಗದ್ದೆ-ವಗರ್ ರಸ್ತೆಯ ಬದಿಯಲ್ಲಿ ಸುಮಾರು 50ಕ್ಕೂ ಹೆಚ್ಚು ಬಂದೂಕಿಗೆ ಬಳಸಿದ ಕಾಟ್ರೇಜ್ ಗಳ ಪತ್ತೆಯಾಗಿದ್ದವು. ದಾರಿಹೋಕರ ಮೊಬೈಲ್ ನಲ್ಲಿ ಸೆರೆಯಾಗಿದ್ದ ಈ ದೃಶ್ಯ ನಿನ್ನೆ ಮಾಧ್ಯಮಗಳಲ್ಲಿ ವರದಿಯಾಗಿತ್ತು.

ಇದೀಗ ಪ್ರಕರಣದ ಬಗ್ಗೆ ತನಿಖೆಗೆ ಮುಂದಾಗಿರುವ ಅರಣ್ಯ ಇಲಾಖೆ ಸ್ಥಳಪರಿಶೀಲನೆ ನಡೆಸಿ ಖಾಲಿ ಕಾಟ್ರೇಜ್ ಗಳನ್ನು ವಶಕ್ಕೆ ಪಡೆದುಕೊಂಡಿದೆ.

ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಮೂಡಿಗೆರೆ ಎ.ಸಿ.ಎಫ್. ಡಾ. ರಾಜೇಶ್ ನಾಯ್ಕ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ಮುಂದಾಗಿದ್ದೇವೆ. ಇದು ಆರ್ಮ್ ಆಕ್ಟ್ ಅಡಿಯಲ್ಲಿ ಬರುವುದರಿಂದ ಆಲ್ದೂರು ಪೊಲೀಸರಿಗೆ ಮಾಹಿತಿ ನೀಡಿದ್ದು ಅವರು ಸಹ ಈ ಬಗ್ಗೆ ತನಿಖೆ ನಡೆಸಲಿದ್ದಾರೆ. ಇಷ್ಟೊಂದು ಸಂಖ್ಯೆಯ ಬಂದೂಕು ಗುಂಡುಗಳನ್ನು ಯಾರು ಬಳಸಿದ್ದಾರೆ ? ಯಾತಕ್ಕೆ ಬಳಸಿದ್ದಾರೆ ? ಎಂಬುದನ್ನು ತನಿಖೆ ನಡೆಸಲಾಗುವುದು ಎಂದಿದ್ದಾರೆ.

ಲೈಸೆನ್ಸ್ ಬಂದೂಕು ಹೊಂದಿದವರು ತಾವು ಎಷ್ಟು ಗುಂಡುಗಳನ್ನು ಖರೀದಿಸಿದ್ದೇವೆ ಮತ್ತು ಅದರಲ್ಲಿ ಎಷ್ಟನ್ನು ಯಾವ ಉದ್ದೇಶಕ್ಕೆ ಬಳಸಿದ್ದೇವೆ ಎಂಬುದನ್ನು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕಾಗುತ್ತದೆ. ಆದರೆ ಒಂದೇ ಪ್ರದೇಶದಲ್ಲಿ ಇಷ್ಟೊಂದು ಖಾಲಿ ಕಾಟ್ರಿಡ್ಜ್ ಗಳು ಪತ್ತೆಯಾಗಿರುವುದು ಅನುಮಾನಕ್ಕೆ ಕಾರಣವಾಗಿವೆ. ತನಿಖೆಯಿಂದಷ್ಟೆ ವಿಷಯದ ಬಗ್ಗೆ ಸ್ಪಷ್ಟತೆ ಸಿಗಬೇಕು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ