October 5, 2024

ಮೂಡಿಗೆರೆ ಬಿ.ಜೆ.ಪಿ.ಯೊಳಗಿನ ಬಣ ರಾಜಕೀಯ ದಿನದಿಂದ ದಿನಕ್ಕೆ ತಾರಕ್ಕಕ್ಕೇರುತ್ತಿದೆ. ಕ್ಷೇತ್ರದ ಹಾಲಿ ಶಾಸಕರಾದ ಎಂ.ಪಿ.ಕುಮಾರಸ್ವಾಮಿಯವರಿಗೆ ಟಿಕೆಟ್ ನೀಡಬಾರದು ಹೊಸ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಆಗ್ರಹಿಸುತ್ತಿರುವ ಪಕ್ಷದ ನೂರಾರು ಕಾರ್ಯಕರ್ತರು ನಿನ್ನೆ ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿಯವರ ಮನೆಗೆ ಮುತ್ತಿಗೆ ಹಾಕಿ ತಮ್ಮ ಅಹವಾಲು ಸಲ್ಲಿಸಿದ್ದಾರೆ.

ಮೂಡಿಗೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಹೋಬಳಿಗಳ ವ್ಯಾಪ್ತಿಯಿಂದ ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ್ದ ಮುಖಂಡರು ಮತ್ತು ಕಾರ್ಯಕರ್ತರು ಬಸವನಹಳ್ಳಿಯ ಸಿ.ಟಿ.ರವಿಯವರ ನಿವಾಸದೆದುರು ಜಮಾಯಿಸಿದ್ದರು.

ಯುಗಾದಿ ಹಬ್ಬದ ಸಂಭ್ರಮದಲ್ಲಿ ನಿನ್ನೆ ತಮ್ಮ ನಿವಾಸದಲ್ಲೇ ಇದ್ದ ಸಿ.ಟಿ.ರವಿಯವರು ತಮ್ಮ ಮನೆಗೆ ಮುತ್ತಿಗೆ ಹಾಕಿದ್ದ ಕಾರ್ಯಕರ್ತರ ಅಹವಾಲು ಆಲಿಸಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ ಕುಮಾರಸ್ವಾಮಿಯವರಿಗೆ ಯಾವುದೇ ಕಾರಣಕ್ಕೂ ಮುಂದಿನ ಚುನಾವಣೆಯಲ್ಲಿ ಬಿ.ಜೆ.ಪಿ. ಟಿಕೆಟ್ ನೀಡಬಾರದು, ಹೊಸ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು.

ಕಾರ್ಯಕರ್ತರ ಅಹವಾಲು ಆಲಿಸಿ ಮಾತನಾಡಿದ ಸಿ.ಟಿ.ರವಿಯವರು ಪಕ್ಷದ ಸಂಸದೀಯ ಮಂಡಳಿ ಅಭ್ಯರ್ಥಿಗಳ ಬಗ್ಗೆ ತೀರ್ಮಾನ ಕೈಗೊಳ್ಳುತ್ತದೆ. ಪಕ್ಷ ಯಾರನ್ನೇ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದರು ಎಲ್ಲರು ಒಟ್ಟಾಗಿ ಅವರ ಗೆಲುವಿಗೆ ಕೆಲಸ ಮಾಡಬೇಕು. ಎಲ್ಲರ ಭಾವನೆಗಳನ್ನು ಪಕ್ಷ ಗಣನೆಗೆ ತೆಗೆದುಕೊಂಡು ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ. ಎಲ್ಲರು ಪಕ್ಷಕ್ಕಾಗಿ ಕೆಲಸ ಮಾಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮೂಡಿಗೆರೆ ಕ್ಷೇತ್ರದ ಬಿ.ಜೆ.ಪಿ.ಯೊಳಗೆ ದಿನದಿಂದ ದಿನಕ್ಕೆ ಭಿನ್ನಾಭಿಪ್ರಾಯ ಹೆಚ್ಚಾಗುತ್ತಿದೆ. ಕಳೆದ ವಾರ ಮೂಡಿಗೆರೆ ಪಟ್ಟಣದಲ್ಲಿ ನಿಗದಿಯಾಗಿದ್ದ ಬಿ.ಜೆ.ಪಿ. ವಿಜಯಸಂಕಲ್ಪ ಯಾತ್ರೆಯಲ್ಲಿ ಬಿ.ಜೆ.ಪಿ. ಬಣ ರಾಜಕೀಯ ಸ್ಪೋಟಗೊಂಡಿತ್ತು. ಅಂದು ಕಾರ್ಯಕ್ರಮಕ್ಕೆಂದು ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕಾರ್ಯಕರ್ತರ ಗೊಂದಲದ ನಡುವೆ ಸಿಲುಕಿ ಯಾತ್ರೆಯಲ್ಲಿ ಭಾಗವಹಿಸದೇ ವಾಪಾಸ್ಸು ತೆರಳಿದ್ದರು. ಮೂಡಿಗೆರೆ ಬಿ.ಜೆ.ಪಿ.ಯಲ್ಲಿ ಒಂದು ಬಣ ಕುಮಾರಸ್ವಾಮಿಯವರ ಪರ ವಕಾಲತ್ತು ವಹಿಸುತ್ತಿದ್ದರೆ ಮತ್ತೊಂದು ಬಣ ಅವರಿಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ