October 5, 2024

ಮೂಡಿಗೆರೆ ಪಟ್ಟಣ ಇಂದು ದೊಡ್ಡ ವಿವಾದಕ್ಕೆ ಸಾಕ್ಷಿಯಾಯಿತು. ಪಟ್ಟಣದಲ್ಲಿ ಆಟೋ ನಿಲ್ದಾಣವೊಂದರ ನಿರ್ಮಾಣ ವಿಚಾರವಾಗಿ ಉಂಟಾಗಿದ್ದ ವಿವಾದ ಕೊನೆಗೆ ಕೈ ಕೈ ಮಿಲಾಯಿಸುವ ಹಂತಕ್ಕೆ ಮುಟ್ಟಿತು.

ಮೂಡಿಗೆರೆ ಪೊಲೀಸ್ ಠಾಣೆ ಸಮೀಪ ಹಳೇ ತಾಲ್ಲೂಕು ಕಛೇರಿ ಎದುರು ಆಟೋ ನಿಲ್ದಾಣ ನಿರ್ಮಾಣ ವಿಚಾರವಾಗಿ ನಿನ್ನೆಯಿಂದ ಮೂಡಿಗೆರೆಯಲ್ಲಿ ವಿವಾದದ ಹೊಗೆಯಾಡುತ್ತಿತ್ತು. ಅದು ಇವತ್ತು ಸ್ಪೋಟಗೊಂಡು ಬಿ.ಜೆ.ಪಿ. ಪಕ್ಷದ ಪಟ್ಟಣ ಪಂಚಾಯಿತಿ ಸದಸ್ಯರು, ಬಿ.ಜೆ.ಪಿ. ಕಾರ್ಯಕರ್ತರು ಪರಸ್ಪರ ತಮ್ಮಲ್ಲೇ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು.

ಮೂಡಿಗೆರೆ ಪೊಲೀಸ್ ಠಾಣೆಯ ಆವರಣದಲ್ಲಿಯೇ ಬಿ.ಜೆ.ಪಿ. ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಗಲಭೆ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

ಮೂಡಿಗೆರೆ ಪಟ್ಟಣದ ಹಳೇತಾಲ್ಲೂಕು ಕಛೇರಿ ಎದುರು ಹಾಲಿ ಆಟೋ ನಿಲ್ಲಿಸುತ್ತಿರುವ ಜಾಗದಲ್ಲಿ ಆಟೋ ನಿಲ್ದಾಣ ನಿರ್ಮಿಸಲು ವಿಧಾನಪರಿಷತ್ ಸದಸ್ಯರಾದ ಎಂ.ಕೆ. ಪ್ರಾಣೇಶ್ ಅವರು 4.5 ಲಕ್ಷ ಅನುದಾನ ನೀಡಿದ್ದರು.

ಇಲ್ಲಿ ಆಟೋ ನಿಲ್ದಾಣ ನಿರ್ಮಾಣ ಮಾಡುವ ಬಗ್ಗೆ ಪಟ್ಟಣ ಪಂಚಾಯಿತಿ ಬಿ.ಜೆ.ಪಿ. ಸದಸ್ಯರ ನಡುವೆ ಭಿನ್ನಾಭಿಪ್ರಾಯ ವ್ಯಕ್ತವಾಗಿತ್ತು. ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಜಿ.ಬಿ.ಧರ್ಮಪಾಲ್ ಅವರು ಪಟ್ಟಣ ಪಂಚಾಯಿತಿಯಲ್ಲಿ ಆಟೋ ನಿಲ್ದಾಣ ನಿರ್ಮಾಣಕ್ಕೆ ನಿರ್ಣಯವಾಗಿಲ್ಲ ಎಂದು ಇಲ್ಲಿ ಆಟೋ ನಿಲ್ದಾಣ ನಿರ್ಮಾಣಕ್ಕೆ ತಮ್ಮ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಪ.ಪಂ. ಮಾಜಿ ಅಧ್ಯಕ್ಷರಾದ ಪಿ.ಜಿ.ಅನುಕುಮಾರ್ ಅವರು ಆಟೋ ನಿಲ್ದಾಣ ನಿರ್ಮಾಣಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದರು.

ನಿನ್ನೆಯಿಂದ ನಡೆಯುತ್ತಿದ್ದ ಈ ವಿವಾದ ಇಂದು ತಾರಕ್ಕಕ್ಕೇರಿ ಪರಸ್ಪರ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಇಂದು ಜೆ.ಸಿ.ಬಿ. ಯಂತ್ರವನ್ನು ತಂದು ಶೆಡ್ ತೆರವುಗೊಳಿಸಲು ಮುಂದಾದಾಗ ಎರಡು ಬಣಗಳ ನಡುವೆ ಗಲಾಟೆ ಪ್ರಾರಂಭವಾಗಿ ಕೈ.ಕೈ. ಮಿಲಾಯಿಸುವ ಹಂತಕ್ಕೆ ತಲುಪಿದೆ.

ಕಳೆದ ಕೆಲವು ದಿನಗಳಿಂದ ಮೂಡಿಗೆರೆಯಲ್ಲಿ ಬಿ.ಜೆ.ಪಿ. ಪಕ್ಷದೊಳಗೆ ಬಣ ರಾಜಕೀಯ ಸ್ಪೋಟಗೊಂಡಿದ್ದು ಅದರ ಮುಂದುವರಿದ ಭಾಗವಾಗಿ ಇವತ್ತು ಎರಡು ಬಣಗಳ ಕಾರ್ಯಕರ್ತರು ಪರಸ್ಪರ ಬಡಿದಾಡಿಕೊಳ್ಳುವ ಹಂತಕ್ಕೆ ತಲುಪಿದೆ.

ಪೊಲೀಸ್ ಠಾಣೆಯ ಆವರಣದಲ್ಲಿಯೇ ನಡೆದಿರುವ ಗಲಾಟೆಯಿಂದ ಮೂಡಿಗೆರೆ ಪಟ್ಟಣದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ