October 5, 2024

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮೂಡಿಗೆರೆ ಮೀಸಲು ಕ್ಷೇತ್ರದಿಂದ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಿದೆ.
ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಯನ್ನಾಗಿ ಎಲ್. ಬಿ. ರಮೇಶ್  ಲೋಕವಳ್ಳಿ ಅವರ ಹೆಸರನ್ನು ಪಕ್ಷ ಘೋಷಣೆ ಮಾಡಿದೆ.

ಬಿಎಸ್ಪಿ ಪಕ್ಷ ಇಂದು ರಾಜ್ಯದ 53 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಮೂಡಿಗೆರೆ ಕ್ಷೇತ್ರದಿಂದ ರಮೇಶ್ ಅವರ ಹೆಸರನ್ನು ಘೋಷಣೆ ಮಾಡಿದೆ.

ಮೂಡಿಗೆರೆ ಪಟ್ಟಣ ಸಮೀಪದ ಲೋಕವಳ್ಳಿಯವರಾದ ರಮೇಶ್ ಅವರು ಅನೇಕ ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಗುರುತಿಸಿಕೊಂಡಿದ್ದಾರೆ. ದಲಿತ ಮತ್ತು ಜನಪರ ಹೋರಾಟಗಳಲ್ಲಿ ತೊಡಗಿಸಿಕೊಂಡ ಅವರು ರಾಜಕೀಯವಾಗಿ ಬಿಎಸ್ಪಿಯಲ್ಲಿ ಗುರುತಿಸಿಕೊಂಡಿದ್ದಾರೆ. ಅನೇಕ ವರ್ಷಗಳಿಂದ ಬಿಎಸ್ಪಿಯಲ್ಲಿ ತೊಡಗಿಸಿಕೊಂಡಿದ್ದು, ಪಕ್ಷದ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ.

ಇದೀಗ ಮೂಡಿಗೆರೆ ಕ್ಷೇತ್ರದಿಂದ ಪ್ರಥಮ ಬಾರಿಗೆ ಬಿಎಸ್ಪಿ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿಯಲಿದ್ದಾರೆ.

ಮೂಡಿಗೆರೆ ಕ್ಷೇತ್ರದಲ್ಲಿ ಎಸ್ಪಿ ಪಕ್ಷ ತನ್ನದೆ ನೆಲೆ ಹೊಂದಿದೆ. ಈ ಹಿಂದೆ ಇಲ್ಲಿ ಯು.ಬಿ. ಮಂಜಯ್ಯ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗಮನಾರ್ಹ ಮತಗಳನ್ನು ಗಳಿಸಿದ್ದರು. ಕಳೆದ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಎಸ್ಪಿ ಜೆ.ಡಿ.ಎಸ್. ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡಿತ್ತು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ