October 5, 2024

ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾದ ಮರುದಿನವೇ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲಾಗಿದೆ.

ಸ್ವಸಹಾಯ ಗುಂಪುಗಳಿಗೆ ಸರಕಾರದ ಚೆಕ್ ವಿತರಣೆಗಾಗಿ ಗುರುವಾರ ಬೆಳಗ್ಗೆ ತಾಲೂಕಿನ ವಿವಿಧ ಗ್ರಾಮಗಳಿಂದ ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಕೆಲ್ಲೂರು ಗ್ರಾಮದ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರ ನಿವಾಸಕ್ಕೆ ಆಗಮಿಸಿದ್ದರು.

ಬುಧವಾರ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಶಾಸಕರ ನಿವಾಸದಲ್ಲಿ ಜನ ಸೇರಿದ್ದಾರೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ಆಯೋಗದ ತಂಡ ಕೂಡಲೇ ಭೇಟಿ ನೀಡಿ ಪರಿಶೀಲಿಸಿದೆ.

ಅಲ್ಲಿ ಚೆಕ್ ವಿತರಣೆ ಕಂಡು ಬಂದಿಲ್ಲ. ಬದಲಾಗಿ ನೂರಾರು ಮಹಿಳೆಯರಿಗೆ ಬೆಳಗ್ಗಿನ ಉಪಹಾರ ನೀಡಲಾಗುತ್ತಿತ್ತು. ಘಟನೆ ಸಂಬಂಧ ವೀಡಿಯೋ ಚಿತ್ರೀಕರಿಸಿ ನೀತಿಸಂಹಿತೆ ಉಲ್ಲಂಘನೆಯಾಗಿದೆ ಎಂದು ಚುನಾವಣಾ ಆಯೋಗ ಪ್ರಕರಣ ದಾಖಲಿಸಿಕೊಂಡಿದೆ.
*****
ಶಾಸಕ ಎಂ.ಪಿ.ಕುಮಾರಸ್ವಾಮಿ ಅವರ ನಿವಾಸದಲ್ಲಿ ಚುನಾವಣಾ ಪ್ರಚಾರ ನಡೆಯುತ್ತಿದೆ ಎಂದು ಮಾಹಿತಿ ದೊರೆತ ಕೂಡಲೇ ನಮ್ಮ ತಂಡ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಲ್ಲಿ ಯಾವುದೇ ಚೆಕ್ ದೊರೆತಿಲ್ಲ. ಉಪಹಾರ ನೀಡುವುದು ನೀತಿ ಸಂಹಿತೆ ಉಲ್ಲಂಘನೆಯಾಗಿದ್ದರಿಂದ ಪ್ರಕರಣ ದಾಖಲು ಮಾಡಲಾಗಿದೆ.

ಎಚ್.ಡಿ.ರಾಜೇಶ್, ಚುನಾವಣಾಧಿಕಾರಿಗಳು. ಮೂಡಿಗೆರೆ.

*****
ಮಹಿಳಾ ಸಂಘಗಳಿಗೆ ಗುರುವಾರ ಚೆಕ್ ವಿತರಣೆ ಮಾಡಬೇಕೆಂದು ಕಳೆದ 2 ದಿನದ ಹಿಂದೆ ಸಂಬಂಧಿಸಿದ ಅಧಿಕಾರಿಗಳಿಗೆ ಚೆಕ್ ತರಲು ತಿಳಿಸಿದ್ದೆ. ಆದರೆ ಧಿಡೀರ್ ಎಂಬಂತೆ ಬುಧವಾರ ನೀತಿ ಸಂಹಿತೆ ಜಾರಿಯಾಯಿತು. ಕಾರ್ಯಕ್ರಮ ರದ್ದುಗೊಳಿಸಿರುವ ಬಗ್ಗೆ ಬುಧವಾರವೇ ಅನೇಕ ಸ್ವ ಸಹಾಯ ಸಂಘಗಳಿಗೆ ತಿಳಿಸಲಾಗಿತ್ತು. ಕೆಲವರಿಗೆ ಮಾಹಿತಿ ಸಿಗದೇ ಬೆಳಗ್ಗೆ ತನ್ನ ನಿವಾಸಕ್ಕೆ ಆಗಮಿಸಿದ್ದಾರೆ. ದೂರದ ಊರಿನಿಂದ ಹಸಿವಿನಿಂದ ಬಂದಿದ್ದಾರೆಂದು ತಿಂಡಿ ನೀಡಲಾಯಿತು. ಇಲ್ಲಿ ಯಾವುದೇ ಚುನಾವಣೆ ಪ್ರಚಾರ ನಡೆಸಿಲ್ಲ:

ಎಂ.ಪಿ.ಕುಮಾರಸ್ವಾಮಿ, ಶಾಸಕರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ