October 5, 2024

ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳ ವಿರುದ್ಧ ಕಾಂಗ್ರೇಸ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಡಿ.ಸಿ. ಮತ್ತು ಎಸ್ಪಿ ಯವರು ಜಿಲ್ಲೆಯಲ್ಲಿ ಬಿ.ಜೆ.ಪಿ.ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೇಸ್ ಆರೋಪಿಸಿದೆ.

ಜಿಲ್ಲೆಯಲ್ಲಿ ನಿಷ್ಪಕ್ಷಪಾತ ಚುನಾವಣೆ ನಡೆಯಬೇಕಾದರೆ ಹಾಲಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳನ್ನು ಇಲ್ಲಿಂದ ಬೇರೆಡೆಗೆ ವರ್ಗಾವಣೆ ಮಾಡಬೇಕು ಎಂದು ಕಾಂಗ್ರೇಸ್ ಮುಖಂಡ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ಬಿ.ಕೆ. ಹರಿಪ್ರಸಾದ್

ಈ ಸಂಬಂಧ ಹರಿಪ್ರಸಾದ್ ಅವರು ಮಾರ್ಚ್ 10ರಂದು ಚುನಾವಣಾ ಆಯೋಗಕ್ಕೆ ಬರೆದಿರುವ ಪತ್ರ ಮಾಧ್ಯಮಕ್ಕೆ ತಲುಪಿದ್ದು ಪತ್ರದಲ್ಲಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ರಮೇಶ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರ ಮೇಲೆ ಕಾಂಗ್ರೇಸ್ ಆರೋಪಗಳನ್ನು ಮಾಡಿದೆ.

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಜಿಲ್ಲೆಯಲ್ಲಿ ಬಿ.ಜೆ.ಪಿ. ಮುಖಂಡರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ. ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸ ರಾಜಕೀಯ ಚಟುವಟಿಕೆಗಳ ತಾಣವಾಗಿದೆ. ಜಿಲ್ಲಾಧಿಕಾರಿಗಳು ತಮ್ಮ ಪತ್ನಿಯನ್ನು ಬಿ.ಜೆ.ಪಿ. ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಲ್ಲಿ ಸಹಕಾರ ನೀಡಿರುವ ಬಗ್ಗೆ ವ್ಯಾಪಕ ದೂರುಗಳು ಇವೆ. ಜಿಲ್ಲೆಯಲ್ಲಿ ನಿಷ್ಪಕ್ಷಪಾತ ಚುನಾವಣೆ ನಡೆಯುವ ಬಗ್ಗೆ ಸಂಶಯಗಳಿವೆ. ಹಾಗಾಗಿ ಈ ಇಬ್ಬರು ಅಧಿಕಾರಿಗಳನ್ನು ಬೇರೆಡೆಗೆ ವರ್ಗಾವಣೆ ಮಾಡಬೇಕು ಎಂದು ಬಿ.ಕೆ.ಹರಿಪ್ರಸಾದ್ ತಮ್ಮ ದೂರಿನಲ್ಲಿ ಒತ್ತಾಯಿಸಿದ್ದಾರೆ.

ಬಿ.ಕೆ.ಹರಿಪ್ರಸಾದ್ ನೀಡಿರುವ ದೂರಿನ ಬಗ್ಗೆ ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಆಯೋಗದ ಮುಖ್ಯಸ್ಥ ಮನೋಜ್ ಕುಮಾರ್ ಮೀನಾ ಅವರನ್ನು ಮಾಧ್ಯಮದವರು ಪ್ರಶ್ನಿಸಿದಾಗ. ಹರಿಪ್ರಸಾದ್ ಅವರು ನೀಡಿರುವ ದೂರು ಸ್ವೀಕರಿಸಲಾಗಿದೆ. ದೂರಿನ ಬಗ್ಗೆ ಅಧಿಕಾರಿಗಳನ್ನು ವಿವರಣೆ ಕೇಳಲಾಗಿದೆ. ತನಿಖೆ ಪೂರ್ಣ ಆಗಬೇಕೆಂದಿಲ್ಲ. ಮೇಲ್ನೋಟಕ್ಕೆ ಆರೋಪದ ಬಗ್ಗೆ ಖಾತ್ರಿಯಾದಲ್ಲಿ ಕ್ರಮ ಆಗಲಿದೆ. ಜಿಲ್ಲಾಧಿಕಾರಿ, ಎಸ್ಪಿ ಸೇರಿದಂತೆ ಯಾವುದೇ ಅಧಿಕಾರಿಗಳು ರಾಜಕೀಯ ಪಕ್ಷಗಳಿಗೆ ಬೆಂಬಲ ನೀಡುವಂತಿಲ್ಲ. ಅಂತಹ ದೂರುಗಳು ಕೇಳಿಬಂದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳಿಕೆ ನೀಡಿದ್ದಾರೆಂದು ಮಾಧ್ಯಮಗಳು ವರದಿ ಮಾಡಿವೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ