October 5, 2024

ಜಾತ್ಯಾತೀತ ಜನತಾದಳ(ಜೆ.ಡಿ.ಎಸ್) ರಾಜ್ಯ ಹಿಂದುಳಿದ ವರ್ಗಗಳ ವಿಭಾಗದ ಕಾರ್ಯಾಧ್ಯಕ್ಷರಾಗಿ ನಿಡುವಾಳೆ ಚಂದ್ರು ಅವರು ನೇಮಕವಾಗಿದ್ದಾರೆ.

ಜೆ.ಡಿ.ಎಸ್. ರಾಜ್ಯಾಧ್ಯಕ್ಷರಾದ ಸಿ.ಎಂ. ಇಬ್ರಾಹಿಂ ಅವರು ನಿಡುವಾಳೆ ಚಂದ್ರು ಅವರನ್ನು ಕಾರ್ಯಾಧ್ಯಕ್ಷ ಹುದ್ದೆಗೆ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಮೂಡಿಗೆರೆ ತಾಲ್ಲೂಕಿನ ನಿಡುವಾಳೆ ಚಂದ್ರು ಪ್ರಸ್ತುತ ತಾಲ್ಲೂಕಿನ ಮಡ್ಡಿಕೆರೆ ಗ್ರಾಮದಲ್ಲಿ ನೆಲೆಸಿದ್ದಾರೆ. ಚಂದ್ರು ಅವರು ಅನೇಕ ವರ್ಷಗಳಿಂದ ಜೆ.ಡಿ.ಎಸ್.ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಮೂಡಿಗೆರೆ ಕ್ಷೇತ್ರದ ಪದಾಧಿಕಾರಿಯಾಗಿ, ಹಿಂದುಳಿದ ವರ್ಗದ ಜಿಲ್ಲಾ ಉಪಾಧ್ಯಕ್ಷರಾಗಿ, ರಾಜ್ಯ ಕಾರ್ಯದರ್ಶಿಯಾಗಿ, ರಾಜ್ಯ ಉಪಾಧ್ಯಕ್ಷರಾಗಿ ಹೀಗೆ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಇದೀಗ ಪಕ್ಷದ ಹಿಂದುಳಿದ ವರ್ಗಗಳ ವಿಭಾಗದ ಕಾರ್ಯಾಧ್ಯಕ್ಷರಾಗಿ ನೇಮಕವಾಗಿದ್ದಾರೆ.

ತಮ್ಮನ್ನು ರಾಜ್ಯ ಹಿಂದುಳಿದ ವರ್ಗಗಳ ವಿಭಾಗದ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವ ಪಕ್ಷದ ವರಿಷ್ಠರಾದ ಹೆಚ್.ಡಿ.ದೇವೇಗೌಡರು, ಹೆಚ್.ಡಿ. ಕುಮಾರಸ್ವಾಮಿಯವರು, ರಾಜ್ಯಾಧ್ಯಕ್ಷರಾದ ಸಿ.ಎಂ. ಇಬ್ರಾಹಿಂ, ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಜಯರಾಮುರವರು, ವಿಧಾನಪರಿಷತ್ ಸದಸ್ಯರಾದ ಎಸ್.ಎಲ್. ಬೋಜೇಗೌಡರು, ಜೆ.ಡಿ.ಎಸ್. ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾದ ರಂಜನ್ ಅಜಿತ್ ಕುಮಾರ್ ರವರು, ಮಾಜಿ ಸಚಿವರಾದ ಬಿ.ಬಿ.ನಿಂಗಯ್ಯನವರು, ಮೂಡಿಗೆರೆ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಡಿ.ಜೆ.ಸುರೇಶ್‍ಗೌಡ ಹಾಗೂ ಕ್ಷೇತ್ರ ಸಮಿತಿಯ ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರಿಗೆ ತಮ್ಮ ಧನ್ಯವಾದ ತಿಳಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ