October 5, 2024

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಸಭೆಯಲ್ಲಿ ಕಾರ್ಯಕರ್ತರು ಪರಸ್ಪರ ಕೈ ಕೈ ಮಿಲಾಯಿಸಿದ ಘಟನೆ ನಡೆದಿದೆ.

ಚಿಕ್ಕಮಗಳೂರು ಕ್ಷೇತ್ರದಿಂದ ಪಕ್ಷದ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿರುವ ಆರು ಮಂದಿ ಅಭ್ಯರ್ಥಿಗಳನ್ನು ಒಳಗೊಂಡಂತೆ ಪಕ್ಷದ ಪ್ರಮುಖರ ಸಭೆ ಇಂದು ಕಾಂಗ್ರೇಸ್ ಕಛೇರಿಯಲ್ಲಿ ಏರ್ಪಡಿಸಲಾಗಿತ್ತು.

ಸಭೆಯಲ್ಲಿ ಪಕ್ಷದ ಟಿಕೆಟ್ ಆಕಾಂಕ್ಷಿಗಳು ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ ತಮಗೆ ಟಿಕೆಟ್ ನೀಡಬೇಕು ಎಂದು ಹಕ್ಕೋತ್ತಾಯ ಮಾಡಿದರು. ನೆರೆದಿದ್ದ ಕಾರ್ಯಕರ್ತರು ಸಹ ತಮ್ಮ ತಮ್ಮ ಬೆಂಬಲಿಗ ಟಿಕೆಟ್ ಆಕಾಂಕ್ಷಿಗಳ ಪರವಾಗಿ ಘೋಷಣೆಗಳನ್ನು ಕೂಗುತ್ತಿದ್ದರು.

ಹೆಚ್.ಡಿ. ತಮ್ಮಯ್ಯ ವಿರುದ್ದ ಕಿಡಿ: ಸಭೆಯಲ್ಲಿ ಅರ್ಜಿ ಸಲ್ಲಿಸಿರುವವರನ್ನು ಬಿಟ್ಟು ಇತ್ತೀಚೆಗೆ ಪಕ್ಷಕ್ಕೆ ಬಂದವರಿಗೆ ಟಿಕೆಟ್ ನೀಡಬಾರದು ಎಂದು ಪರೋಕ್ಷವಾಗಿ ಹೆಚ್.ಡಿ. ತಮ್ಮಯ್ಯ ಉಲ್ಲೇಖಿಸಿ ನಾಯಕರು ಅನಿಸಿಕೆಗಳನ್ನು ಹಂಚಿಕೊಂಡರು. ಇನ್ನೂ ಕೆಲವರು ಯಾರೇ ಅಭ್ಯರ್ಥಿ ಆದರೂ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದರು. ತಮ್ಮಯ್ಯ ಅವರಿಗೆ ಮಣೆ ಹಾಕಿದ್ದೇ ಆದಲ್ಲಿ ಈ ಬಾರಿಯೂ ಸೋಲು ಪುನರಾವರ್ತನೆ ಆಗುತ್ತದೆ. ನಮಗೆ ವಲಸೆ ಅಭ್ಯರ್ಥಿ ಬೇಡ, ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದವರೇ ಬೇಕು. ಈ ಎಲ್ಲಾ ವಿಚಾರವನ್ನು ಕೆಪಿಸಿಸಿ ಅಧ್ಯಕ್ಷರ ಗಮನಕ್ಕೆ ಹಲವು ಬಾರಿ ತರಲಾಗಿದೆ. ಇಷ್ಟಾದರೂ ಅವರಿಗೆ ಟಿಕೆಟ್ ನೀಡುವುದು ಸರಿಯಲ್ಲ ಎಂದು ಟಿಕೆಟ್ಗಾಗಿ ಅರ್ಜಿ ಸಲ್ಲಿಸಿರುವ ಡಾ. ಡಿ.ಎಲ್.ವಿಜಯಕುಮಾರ್, ಮಹಡಿಮನೆ ಸತೀಶ್, ಎ.ಎನ್.ಮಹೇಶ್, ಬಿ.ಹೆಚ್.ಹರೀಶ್ ಹಾಗೂ ನಯಾಜ್ ಅವರು ಅಭಿಪ್ರಾಯ ಮಂಡಿಸಿದರು.

ಸಭೆಯ ಕೊನೆಯಲ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಮಂಜೇಗೌಡ ಅವರು ಮಾತನಾಡುತ್ತಾ ಪಕ್ಷದಲ್ಲಿ ಯಾರಿಗೇ ಟಿಕೆಟ್ ನೀಡಿದರು ಎಲ್ಲರು ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದರು. ಆಗ ಕೆಲ ಕಾರ್ಯಕರ್ತರು ತಾವು ತಮ್ಮಯ್ಯ ಅವರ ಪರವಾಗಿ ಮಾತನಾಡುತ್ತಿದ್ದೀರಿ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಕಾರ್ಯಕರ್ತರು ಪರಸ್ಪರ ಕೈ ಕೈ ಮಿಲಾಯಿಸಿದ್ದಾರೆ. ಗಲಾಟೆಯಲ್ಲಿ ಪಕ್ಷದ ಯುವ ಮುಖಂಡ ಜಿ.ಬಿ. ಪವನ್ ಅವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಒಟ್ಟಾರೆ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ಪಕ್ಷದಲ್ಲಿ ಟಿಕೆಟ್ ಫೈಟ್ ಜೋರಾಗಿದ್ದು ಅದು ಈಗ ಬಡಿದಾಟದ ಹಂತಕ್ಕೆ ತಲುಪಿದೆ. ಕ್ಷೇತ್ರದಲ್ಲ ಶಾಸಕ ಸಿ.ಟಿ.ರವಿಯವರ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಒತ್ತಡದಲ್ಲಿದ್ದು, ಮೂಲ ಕಾಂಗ್ರೇಸಿಗರು ಅಥವಾ ವಲಸೆ ಕಾಂಗ್ರೇಸಿಗರ ನಡುವೆ ಯಾರಿಗೇ ಮಣೆ ಹಾಕುವುದು ಎಂಬ ಗೊಂದಲದಲ್ಲಿ ಹೈಕಮಾಂಡ್ ಇದ್ದಂತೆ ಕಾಣುತ್ತದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ