October 5, 2024

ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿ.ಜೆ.ಪಿ. ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ನಿನ್ನೆ ತಡರಾತ್ರಿ ಬಿ.ಜೆ.ಪಿ. ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಎರಡನೇ ಪಟ್ಟಿಯಲ್ಲಿ ಒಟ್ಟು 23 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಮೊನ್ನೆ 189 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿತ್ತು. ಇದರೊಂದಿಗೆ ಬಿ.ಜೆ.ಪಿ. ಒಟ್ಟು 212 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದಂತಾಗಿದೆ. ಇನ್ನೂ 12 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲು ಬಾಕಿ ಉಳಿಸಿಕೊಂಡಿದೆ.

 

ಮೂಡಿಗೆರೆ ಕ್ಷೇತ್ರದಿಂದ ದೀಪಕ್ ದೊಡ್ಡಯ್ಯ ಕಣಕ್ಕೆ :

ಬಹು ಕುತೂಹಲ ಕೆರಳಿಸಿದ್ದ ಮೂಡಿಗೆರೆ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಬಿ.ಜೆ.ಪಿ. ಅಭ್ಯರ್ಥಿಯಾಗಿ ದೀಪಕ್ ದೊಡ್ಡಯ್ಯ ಅವರ ಹೆಸರನ್ನು ಘೋಷಣೆ ಮಾಡಿದೆ.

ಇಲ್ಲಿ ಪಕ್ಷದ ಹಾಲಿ ಶಾಸಕ ಎಂ.ಪಿ. ಕುಮಾರಸ್ವಾಮಿಯವರಿಗೆ ಬಿ.ಜೆ.ಪಿ. ಈ ಬಾರಿ ಟಿಕೆಟ್ ನಿರಾಕರಿಸಿ ಹೊಸ ಅಭ್ಯರ್ಥಿಗೆ ಮಣೆ ಹಾಕಿದೆ. 1999ರಿಂದ ಇಲ್ಲಿ ಸತತವಾಗಿ ಸತತವಾಗಿ ಕಳೆದ ಐದು ಚುನಾವಣೆಗಳಲ್ಲಿ ಬಿ.ಜೆ.ಪಿ. ಅಭ್ಯರ್ಥಿಯಾಗಿ ಸ್ಪರ್ಧಿಸಿ 3 ಬಾರಿ ಶಾಸಕರಾಗಿದ್ದ ಎಂ.ಪಿ. ಕುಮಾರಸ್ವಾಮಿಯವರಿಗೆ ಈ ಬಾರಿ ಟಿಕೆಟ್ ನೀಡಿಲ್ಲ.

ಕ್ಷೇತ್ರದಲ್ಲಿ ದೀಪಕ್ ದೊಡ್ಡಯ್ಯ ಸೇರಿದಂತೆ ಐದಾರು ಜನ ಆಕಾಂಕ್ಷಿಗಳು ಟಿಕೆಟ್ ಗಾಗಿ ಪೈಪೋಟಿ ನಡೆಸಿದ್ದರು. ಆದರೆ ಅಂತಿಮವಾಗಿ ಹೈಕಮಾಂಡ್ ದೀಪಕ್ ದೊಡ್ಡಯ್ಯ ಅವರ ಹೆಸರನ್ನು ಘೋಷಣೆ ಮಾಡಿದೆ.

ಕಳೆದ 15 ವರ್ಷಗಳಿಂದ ಇಲ್ಲಿ ಟಕೆಟ್ ಆಕಾಂಕ್ಷಿಯಾಗಿ ಪಕ್ಷದಲ್ಲಿ ತೊಡಗಿಸಿಕೊಂಡಿದ್ದ ದೀಪಕ್ ದೊಡ್ಡಯ್ಯ ಅವರಿಗೆ ಈ ಬಾರಿ ಬಿ.ಜೆ.ಪಿ. ಅಭ್ಯರ್ಥಿಯಾಗಿ ಸ್ಪರ್ಧಿಸುವ ಸುಯೋಗ ದೊರಕಿದೆ.

ಹಾಲಿ ಬಿ.ಜೆ.ಪಿ. ಜಿಲ್ಲಾ ವಕ್ತಾರರಾಗಿರುವ ದೀಪಕ್ ದೊಡ್ಡಯ್ಯ ಬೀದರ್ ನ ಕರ್ನಾಟಕ ರಾಜ್ಯ ಪಶುಸಂಗೋಪನಾ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ನಿರ್ದೇಶಕರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.

ಈ ಬಾರಿ ಕುಮಾರಸ್ವಾಮಿಯವರಿಗೆ ಕ್ಷೇತ್ರದಲ್ಲಿ ಟಿಕೆಟ್ ನೀಡಬಾರದು ಎಂದು ದೊಡ್ಡ ಸಂಖ್ಯೆಯ ಬಿ.ಜೆ.ಪಿ. ಮುಖಂಡರು ಮತ್ತು ಕಾರ್ಯಕರ್ತರು ತಮ್ಮ ವಿರೋಧ ವ್ಯಕ್ತಪಡಿಸಿದ್ದರು. ಬದಲಾವಣೆ ಬೇಕು, ಹೊಸ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಎಂದು ಪ್ರಬಲವಾಗಿ ಹೋರಾಟ ನಡೆಸಿ ಒತ್ತಾಯಿಸಿದ್ದರು.

ಇದರೊಂದಿಗೆ ಮೂಡಿಗೆರೆ ರಾಜಕೀಯ ತನ್ನ ಮಗ್ಗಲು ಬದಲಿಸಿದ್ದು, ಮುಂದಿನ ಬೆಳವಣಿಗೆಗಳು ಕುತೂಹಲಕ್ಕೆ ಕಾರಣವಾಗಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ