October 5, 2024

ಮಹಿಳೆಯೊಬ್ಬರು ಪೊಲೀಸ್ ಠಾಣೆ ಕಟ್ಟಡದ ಮೇಲೇರಿ ಮೇಲಿಂದ ಜಿಗಿಯಲು ಯತ್ನಿಸಿದ ಘಟನೆ ಮೂಡಿಗೆರೆ ಠಾಣೆಯಲ್ಲಿ ನಿನ್ನೆ ನಡೆದಿದೆ.
ಪೊಲೀಸ್ ಸಿಬ್ಬಂದಿಯೊಬ್ಬರು ಸಕಾಲಿಕ ಸಮಯಪ್ರಜ್ಞೆಯಿಂದ ಮಹಿಳೆಯನ್ನು ರಕ್ಷಿಸಿ ಅವಘಡವನ್ನು ತಡೆದಿದ್ದಾರೆ.

ಹಳೇಮೂಡಿಗೆರೆ ಸಮೀಪದ ಸರ್ವೋದಯ ನಗರದ ಶಿಲ್ಪ ಎನ್ನುವ ಮಹಿಳೆ ಪೊಲೀಸ್ ಠಾಣೆಯ ಕಟ್ಟಡವನ್ನು ಏರಿ ಅಲ್ಲಿಂದ ನೆಗೆದು ಆತ್ಮಹತ್ಯೆಗೆ ಯತ್ನಿಸಿದವರು. ಇವರು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.

ಶಿಲ್ಪ ಹಾಗೂ ಅವರ ಸಹೋದರಿಯ ನಡುವಿನ ವಾಜ್ಯವೊಂದಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೇ ಅವಧಿಯಲ್ಲಿ ಶಿಲ್ಪ  ಮೂಡಿಗೆರೆ ಠಾಣೆಯ ಮಹಿಳಾ ಸಿಬ್ಬಂದಿ ಸುಜಾತ ಎನ್ನುವವರ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಆಕೆಯ ಮೇಲೆ ಕೇಸು ದಾಖಲಾಗಿ ಜೈಲಿಗೂ ಹೋಗಿ ಬಂದಿದ್ದರು ಎನ್ನಲಾಗಿದೆ.

https://youtu.be/5HDcQh8KmN8

ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿದ್ದು, ನಿನ್ನೆ ಮೂಡಿಗೆರೆ ನ್ಯಾಯಾಲಯದಲ್ಲಿಯೂ ನ್ಯಾಯಾದೀಶರ ಎದುರು ನನ್ನ ಪ್ರಕರಣವನ್ನು ಒಂದೇ ದಿನದಲ್ಲಿ ಮುಗಿಸಿಕೊಡಿ, ಪೊಲೀಸರನ್ನು ನ್ಯಾಯಾಲಯಕ್ಕೆ ಕರೆಸಿ ಪ್ರಕರಣವನ್ನು ಮುಗಿಸಿ ಎಂದೆಲ್ಲಾ ಮಾನಸಿಕ ಸ್ಥಿಮಿತ ಕಳೆದುಕೊಂಡು ಮಾತನಾಡಿದ್ದು, ನ್ಯಾಯಾದೀಶರು ಬುದ್ದಿಹೇಳಿ ಕಳುಹಿಸಿದ್ದರು ಎಂದು ತಿಳಿದುಬಂದಿದೆ.

ಅಲ್ಲಿಂದ ನೇರವಾಗಿ ಮೂಡಿಗೆರೆ ಠಾಣೆಗೆ ಬಂದು ಅಲ್ಲಿ ಸಿಬ್ಬಂದಿಗಳ ಜೊತೆ ಜಗಳವಾಡಿದ್ದು, ನೀವೆಲ್ಲಾ ಈಗಲೇ ನ್ಯಾಯಾಲಯಕ್ಕೆ ಬರಬೇಕು, ನನ್ನ ಕೇಸು ಇತ್ಯರ್ಥ ಮಾಡಿಕೊಡಬೇಕು ಎಂದೆಲ್ಲಾ ಕೂಗಾಡಿದ್ದು, ನಂತರ ಠಾಣೆಯ ಹಿಂಬದಿಯಿಂದ ಏಣಿಯ ಮೂಲಕ ಕಟ್ಟಡದ ಮೇಲ್ಭಾಗಕ್ಕೆ ತೆರಳಿ ನಾನು ಇಲ್ಲಿಂದ ನೆಗೆದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಕಟ್ಟಡದ ತುದಿಗೆ ಬಂದು ಬೆದರಿಕೆ ಹಾಕಿದ್ದಾರೆ.

ಈ ಸಂದರ್ಭದಲ್ಲಿ ಠಾಣೆಯ ಸಿಬ್ಬಂದಿಯೊಬ್ಬರು ಹಿಂದಿನಿಂದ ಬಂದು ಅವರನ್ನು ರಕ್ಷಣೆ ಮಾಡಿದ್ದಾರೆ.

ಇದರಿಂದಾಗಿ ಕೆಲಹೊತ್ತು ಮೂಡಿಗೆರೆ ಠಾಣೆಯ ಆವರಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಸದರಿ ಶಿಲ್ಪ ಒಂದಲ್ಲ ಒಂದು ಸಮಸ್ಯೆ ಹೊತ್ತು ಸದಾ ಠಾಣೆಗೆ ಬರುವುದು, ಸಿಬ್ಬಂದಿಗಳೊಂದಿಗೆ ಕಿರಿಕಿರಿ ಮಾಡುವುದು ಸರ್ವೇ ಸಾಮಾನ್ಯವಾಗಿದೆ ಎನ್ನಲಾಗಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ