October 5, 2024

ಕಾಂಗ್ರೇಸ್ ಪಕ್ಷವು ವಿಧಾನಸಭಾ ಚುನಾವಣೆಗೆ ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ರಾಜ್ಯದ 43 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳಿಗೆ ಎರಡನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದ ಕಾಂಗ್ರೇಸ್ ಇಂದು 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಇನ್ನೂ 15 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆಗೆ ಬಾಕಿ ಉಳಿಸಿಕೊಂಡಿದೆ.

ಇಂದು ಬಿಡುಗಡೆ ಮಾಡಲಾದ ಪಟ್ಟಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಬಾಕಿ ಉಳಿದಿದ್ದ ಮೂರು ಕ್ಷೇತ್ರಗಳಲ್ಲಿ ಎರಡು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಯನ್ನು ಘೊಷಣೆ ಮಾಡಿದೆ.

ಕುತೂಹಲ ಕೆರಳಿಸಿದ್ದ ಮೂಡಿಗೆರೆ ವಿಧಾನಸಭಾ ಕ್ಷೇತ್ರದಿಂದ ನಯನ ಮೋಟಮ್ಮ(ನಯನ ಜ್ಯೋತಿ ಜವಾರ್) ಮತ್ತು ತರೀಕೆರೆ ಕ್ಷೇತ್ರದಿಂದ ಮಾಜಿ ಶಾಸಕ ಜಿ.ಹೆಚ್. ಶ್ರೀನಿವಾಸ್ ಅವರಿಗೆ ಟಿಕೆಟ್ ನೀಡಿದೆ. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಇನ್ನೂ ಘೋಷಣೆ ಮಾಡಿಲ್ಲ.

ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವೆ ಮೋಟಮ್ಮನವರ ಪುತ್ರಿ ನಯನ ಸೇರಿದಂತೆ ಐದಾರು ಮಂದಿ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕಮಾಂಡ್ ಅಂತಿಮವಾಗಿ ನಯನ ಅವರಿಗೆ ಅವಕಾಶ ನೀಡಿದೆ. ಇದರೊಂದಿಗೆ ಯುವ ನಾಯಕಿ ನಯನ ಮೋಟಮ್ಮ ಮೂಡಿಗೆರೆ ಯಲ್ಲಿ ತಮ್ಮ ರಾಜಕೀಯ ಭವಿಷ್ಯದ ಅದೃಷ್ಟ ಪರೀಕ್ಷೆಗೆ ಸಜ್ಜಾಗಿದ್ದಾರೆ.

ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ಗೆ ತೀವ್ರ ಪೈಪೋಟಿ ಇರುವುದರಿಂದ ಇನ್ನೂ ಸಹ ಅಭ್ಯರ್ಥಿಯನ್ನು ಅಂತಿಮಗೊಳಿಸಲು ಹೈಕಮಾಂಡ್ ಗೆ ಸಾಧ್ಯವಾಗಿಲ್ಲ.

ಉಳಿದಂತೆ ಅಥಣಿ ಕ್ಷೇತ್ರದಿಂದ ನಿನ್ನೆ ತಾನೇ ಬಿ.ಜೆ.ಪಿ. ತೊರೆದು ಕಾಂಗ್ರೇಸ್ ಸೇರಿದ ಲಕ್ಷ್ಮಣ್ ಸವದಿಯವರಿಗೆ, ಅರಸಿಕೆರೆಯಲ್ಲಿ ಜೆ.ಡಿ.ಎಸ್. ತೊರೆದು ಕಾಂಗ್ರೇಸ್ ಸೇರಿಸ ಶಿವಲಿಂಗೇಗೌಡ ಅವರಿಗೆ ಟಿಕೆಟ್ ನೀಡಲಾಗಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ