October 5, 2024

ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 11 ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.

ನಿನ್ನೆ ದಕ್ಷಿಣ ಕನ್ನಡ, ಮಡಿಕೆರಿ ಜಿಲ್ಲೆಗಳ ಗಡಿಭಾಗದ ಸಂಪಾಜೆ ಗ್ರಾಮದ ಬಳಿ ಕೆ.ಎಸ್.ಆರ್.ಟಿ.ಸಿ. ಬಸ್ ಮತ್ತು ಸ್ವಿಫ್ಟ್ ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂರು ಮಕ್ಕಳು ಸೇರಿದಂತೆ 6 ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಮಗು ಸೇರಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಸುಳ್ಯದಿಂದ ವಿರಾಜಪೇಟೆಗೆ ಕಡೆಗೆ ತೆರಳುತ್ತಿದ್ದ ಸಾರಿಗೆ ಬಸ್ ಮತ್ತು ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಸ್ವಿಫ್ಟ್ ಕಾರುಗಳು ಸಂಪಾಜೆ ಬಳಿ ಮುಖಾಮುಖಿ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರು ಮಂಡ್ಯ ಜಿಲ್ಲೆಯ ಮಳವಳ್ಳಿ ಮೂಲದ ಒಂದೇ ಕುಟುಂಬದ ಸದಸ್ಯರುಗಳು ಎಂದು ತಿಳಿದುಬಂದಿದೆ. ಕಾರಿನಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಎಂಟು ಮಂದಿ ಪ್ರಾಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಮತ್ತೊಂದು ಪ್ರಕರಣದಲ್ಲಿ ತುಮಕೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಮತ್ತು ಇನ್ನೋವ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ 5 ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.

ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿರೇಹಳ್ಳಿ ಎಂಬಲ್ಲಿ ಸಂಭವಿಸಿದ ಅಪಘಾತದಲ್ಲಿ ಇನ್ನೋವ ಕಾರಿನಲ್ಲಿದ್ದ ಮಗು ಸೇರಿದಂತೆ ಐದು ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.

ತುಮಕೂರು ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ಇನ್ನೋವಾ ಕಾರಿಗೆ ತುಮಕೂರು ಕಡೆ ಬರುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇನ್ನೋವ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಐದು ಮಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಬಸ್ಸಿನಲ್ಲಿದ್ದ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಬೆಂಗಳೂರಿನಲ್ಲಿ ನೆಲೆಸಿರುವ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಮೂಲದ ಗೋವಿಂದ ನಾಯ್ಕ ಕುಟುಂಬದವರು ಚಳ್ಳಕೆರೆಯಿಂದ ಬೆಂಗಳೂರಿಗೆ ಮರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಗೋವಿಂದ ನಾಯ್ಕ, ಅವರ ಪತ್ನಿ, ಒಂದು ಮಗು ಸೇರಿದಂತೆ ಐವರು ಪ್ರಾಣ ಕಳೆದುಕೊಂಡಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ