October 5, 2024

ರಾಜ್ಯ ರಾಜಕೀಯದ ಬಹುದೊಡ್ಡ ಬೆಳವಣಿಗೆಯೊಂದರಲ್ಲಿ ಬಿ.ಜೆ.ಪಿ. ಹಿರಿಯ ಮುಖಂಡ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿ.ಜೆ.ಪಿ. ಪಕ್ಷವನ್ನು ತೊರೆಯುವ ನಿರ್ಧಾರ ಪ್ರಕಟಿಸಿದ್ದಾರೆ.

ಈ ಬಾರಿ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನಿರಾಕರಿಸಿರುವ ಹಿನ್ನಲೆಯಲ್ಲಿ ಮನನೊಂದು ಜಗದೀಶ್ ಶೆಟ್ಟರ್ ಬಿ.ಜೆ.ಪಿ. ಪಕ್ಷವನ್ನೇ ತೊರೆಯುವ ಕಠಿಣ ನಿರ್ಧಾರಕ್ಕೆ ಬಂದಿದ್ದಾರೆ.

ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದಿಂದ ಶಾಸಕರಾಗಿ ಸತತವಾಗಿ ಆಯ್ಕೆಯಾಗುತ್ತಾ ಬಂದಿದ್ದ ಜಗದೀಶ್ ಶೆಟ್ಟರ್ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಲಾಗುತ್ತಿದೆ. ಇದರಿಂದ ತೀವ್ರ ಮನನೊಂದಿರುವ ಜಗದೀಶ್ ಶೆಟ್ಟರ್ ತಮ್ಮ ಬೆಂಬಲಿಗರ ಸಭೆ ಕರೆದು ಅಭಿಪ್ರಾಯ ಸಂಗ್ರಹಿಸಿ ಬಿ.ಜೆ.ಪಿ. ಪಕ್ಷವನ್ನು ತೊರೆಯಲು ನಿರ್ಧರಿಸಿದ್ದಾರೆ.

ಈ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿರುವ ಶೆಟ್ಟರ್ ನನಗೆ ಪಕ್ಷದ ಟಿಕೆಟ್ ನೀಡದೇ ಇರಲು ಯಾವುದೇ ಕಾರಣ ತಿಳಿಸುತ್ತಿಲ್ಲ. ನನಗೀಗ 67 ವರ್ಷಗಳಷ್ಟೇ, ನನಗಿಂತ ವಯಸ್ಸಾದವರಿಗೆ ಟಿಕೆಟ್ ನೀಡಲಾಗಿದೆ. ಭ್ರಷ್ಟಾಚಾರದ ಆರೋಪ ಸೇರಿದಂತೆ ವಿವಿಧ ಆರೋಪಗಳು ಇರುವವರಿಗೆ ಟಿಕೆಟ್ ನೀಡಲಾಗಿದೆ. ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುವಲ್ಲಿ ನನ್ನದೂ ಪಾತ್ರವಿದೆ. ಪಕ್ಷದ ಅಧ್ಯಕ್ಷನಾಗಿ, ಮುಖ್ಯಮಂತ್ರಿಯಾಗಿ, ವಿರೋಧ ಪಕ್ಷದ ನಾಯಕನಾಗಿ ಹೀಗೆ ಮಹತ್ವದ ಹುದ್ದೆಗಳನ್ನು ನಿಭಾಯಿಸಿರುವ ನನಗೆ ಯಾವುದೇ ಸ್ಪಷ್ಟ ಕಾರಣ ನೀಡದೇ ಟಿಕೆಟ್ ನಿರಾಕರಿಸುತ್ತಿರುವುದು ಬಹಳ ಆಶ್ಚರ್ಯ ತಂದಿದೆ. ನನ್ನ ಬದಲಿಗೆ ನನ್ನ ಕುಟುಂಬದವರೊಬ್ಬರಿಗೆ ಟಿಕೆಟ್ ನೀಡುತ್ತೇವೆ ಎಂದು ಹೇಳುತ್ತಿದ್ದಾರೆ. ಇದರ ಅರ್ಥ ಏನು ? ನನಗೆ ಟಿಕೆಟ್ ನೀಡಲು ಇವರಿಗೆ ಹಿಂಜರಿಕೆ ಏಕೆ ? ಇದರ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ.

ನಾನು ನನ್ನ ಶಾಸಕ ಸ್ಥಾನಕ್ಕೆ ಮತ್ತು ಬಿ.ಜೆ.ಪಿ. ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಮುಂದಿನ ರಾಜಕೀಯ ನಿರ್ಧಾರವನ್ನು ನಾಳೆ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.

ಮೂಲಗಳ ಪ್ರಕಾರ ಜಗದೀಶ್ ಶೆಟ್ಟರ್ ಕಾಂಗ್ರೇಸ್ ಪಕ್ಷ ಸೇರುವ, ಇಲ್ಲದೇ ಹೋದರೆ ಪಕ್ಷೇತರರಾಗಿ ಕಣಕ್ಕಿಳಿದು ಬಿ.ಜೆ.ಪಿ. ಸಡ್ಡು ಹೊಡೆಯುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಜಗದೀಶ್ ಶೆಟ್ಟರ್ ಪಕ್ಷ ತೊರೆಯುತ್ತಿರುವುದು ಬಿ.ಜೆ.ಪಿ. ದೊಡ್ಡ ನಷ್ಟವಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಪ್ರಬಲ ನಾಯಕರಾಗಿರುವ ಜಗದೀಶ್ ಶೆಟ್ಟರ್ ಮುಂದಿನ ರಾಜಕೀಯ ನಡೆ ಏನೆಂಬುದು ಕಾದು ನೋಡಬೇಕು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ