October 5, 2024

ಹೊರಾಟದ ಮೂಲಕವೇ ಜಿಲ್ಲೆಯಲ್ಲಿ ಸಾವಿರಾರು ಮಂದಿಗೆ ನಿವೇಶನ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಯಶಸ್ಸಿಯಾಗಿರುವ ಮೂಡಿಗೆರೆ ಮೀಸಲು ಕ್ಷೇತ್ರದ ಸಿಪಿಐ ಅಭ್ಯರ್ಥಿ ಕೆಳಗೂರು ರಮೇಶ್ ಅವರನ್ನು ಬೆಂಬಲಿಸಬೇಕು ಎಂದು ಸಿಪಿಐ ಹಿರಿಯ ಮುಖಂಡ ಪಿ.ವಿ.ಲೋಕೇಶ್ ಹೇಳಿದರು.

ಸೋಮವಾರ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಅಶಾಂತಿ, ಆರ್ಥಿಕ ಕುಸಿತ, ಭ್ರಷ್ಟಾಚಾರ, ಸರ್ವಾಧಿಕಾರಿ ಆಡಳಿತದಿಂದ ಸಂವಿಧಾನಕ್ಕೆ ಗಂಡಾಂತರ ತಂದಿಟ್ಟಿರುವ ಬಿಜೆಪಿಯ ಆತಂಕಕಾರಿ ನಡೆಯಿಂದ ಜನತೆ ನೆಮ್ಮದಿ ಕಳೆದುಕೊಂಡಿದ್ದಾರೆ. ಅಲ್ಲದೇ ಎಲ್ಲಾ ಪಕ್ಷದಲ್ಲಿ ಕೇವಲ ಜಾತಿ ಲೆಕ್ಕಾಚಾರ ಮತ್ತು ಅಭ್ಯರ್ಥಿಗಳ ಬಗ್ಗೆಯೇ ಚಿಂತನೆ ನಡೆಸುತ್ತಿದೆಯೇ ಹೊರತು ಜನ ಸಾಮಾನ್ಯರ ಸಮಸ್ಯೆ ಬಗ್ಗೆ ಕಿಂಚಿತ್ತೂ ಚಿಂತನೆಯಿಲ್ಲ. ಇದರಿಂದ ಜನತೆ ಬದಲಾವಣೆ ಬಯಸುತ್ತಿದ್ದಾರೆ. ಮೂಡಿಗೆರೆ ಕ್ಷೇತ್ರದಲ್ಲಿ ಈ ಬಾರಿ ಸಿಪಿಐ ಗೆಲುವು ಸಾಧಿಸುವುದು ಶತಸಿದ್ದ. ಹಾಗಾಗಿ ಸಿಪಿಐಯಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿದೆ ಎಂದು ಹೇಳಿದರು.

ಸಿ.ಪಿ.ಐ. ಜಿಲ್ಲಾ ಕಾರ್ಯದರ್ಶಿ ರಾಧಾ ಸುಂದರೇಶ್ ಅವರು ಮಾತನಾಡಿ ರಾಷ್ಟ್ರದಲ್ಲಿ ಕೋಮುವಾದಿ ಬಿ.ಜೆ.ಪಿ. ಪಕ್ಷವನ್ನು ಮಣಿಸಬೇಕು ಎಂಬ ಉದ್ದೇಶದಿಂದ ಅನೇಕ ಕಡೆ ಬಿ.ಜೆ.ಪಿ.ಗೆ ಪೈಪೋಟಿ ನೀಡುವ ಪಕ್ಷಗಳಿಗೆ ಸಿ.ಪಿ.ಐ. ಬೆಂಬಲ ನೀಡುತ್ತಿದೆ. ರಾಜ್ಯದಲ್ಲಿ ಗೆಲ್ಲುವ ಅವಕಾಶ ಇರುವ 7 ವಿಧಾನಸಭಾ ಕ್ಷೇತ್ರಗಳಲ್ಲಿ ಸಿ.ಪಿ.ಐ. ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮೂಡಿಗೆರೆ ಕ್ಷೇತ್ರದಲ್ಲಿ ನಮ್ಮ ಪಕ್ಷ ಉತ್ತಮ ಸಂಘಟನೆ ಹೊಂದಿದ್ದು, ಇಲ್ಲಿ ನಮ್ಮ ಅಭ್ಯರ್ಥಿ ಗೆಲುವಿಗೆ ಉತ್ತಮ ಅವಕಾಶವಿದೆ ಎಂದಿದ್ದಾರೆ.

ಮೂಡಿಗೆರೆ ಸಿ.ಪಿ.ಐ. ಚುನಾವಣಾ ಸಮಿತಿ ಸದಸ್ಯ ಎಂ.ಎಸ್. ನಾಗೇಶ್ ಮಡ್ಡೀಕೆರೆ ಮಾತನಾಡಿ, ಕ್ಷೇತ್ರದಲ್ಲಿ ಎಷ್ಟೋ ಕುಟುಂಬಕ್ಕೆ ಸ್ವಂತ ಸೂರಿಲ್ಲದೇ ಮೂಲ ವಿಳಾಸವಿಲ್ಲದಂತಾಗಿದೆ. ತಾಲೂಕಿನಲ್ಲಿ ಜಾಗದ ಕೊರತೆಯಿಲ್ಲ. ಕ್ಷೇತ್ರದ ಶಾಸಕರು ಮನಸ್ಸು ಮಾಡಿದರೆ ಎಲ್ಲರಿಗೂ ನಿವೇಶನ ನೀಡಲು ಸಾಧ್ಯವಿದೆ. ಜನರಿಗೆ ಕುಡಿಯುವ ನೀರು, ವಿದ್ಯುತ್, ರಸ್ತೆ, ನಿವೇಶನ, ಆಸ್ಪತ್ರೆ, ಶಿಕ್ಷಣ ವ್ಯವಸ್ಥೆ ಮಾಡಲು ಸ್ಥಳೀಯ ಶಾಸಕರಿಂದಲೇ ಸಾಧ್ಯವಿದೆ. ಹಾಗಾಗಿ ಜನಪರ ಕೆಲಸ ಮಾಡುವ ನಮ್ಮ ಅಭ್ಯರ್ಥಿಯನ್ನು ಮತದಾರರು ಬೆಂಬಲಿಸಬೇಕೆಂದು ಮನವಿ ಮಾಡಿದರು.

ಸಿಪಿಐ ಅಭ್ಯರ್ಥಿ ರಮೇಶ್ ಕೆಳಗೂರು, ಸಿಪಿಐ ಮುಖಂಡರಾದ ಎಚ್.ಎಂ.ರೇಣುಕಾರಾದ್ಯ, ರಮೇಶ್ ಕೆರೆಮಕ್ಕಿ, ಗುಣಶೇಖರ್, ದೇವವೃಂದ ರವಿ ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ