October 5, 2024

ಮೂಡಿಗೆರೆ ಮೀಸಲು ಕ್ಷೇತ್ರಕ್ಕೆ ಈ ಬಾರಿ ಎಂ.ಪಿ.ಕುಮಾರಸ್ವಾಮಿ ಅವರೇ ಜೆ.ಡಿ.ಎಸ್. ಅಭ್ಯರ್ಥಿ ಎಂದು ವರಿಷ್ಟರು ಘೋಷಿಸಿದ್ದಾರೆ. ಹಾಗಾಗಿ ಅವರ ಗೆಲುವಿಗೆ ಶ್ರಮಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ, ಎಂ.ಪಿ. ಕುಮಾರಸ್ವಾಮಿ ಕ್ಷೇತ್ರದಲ್ಲಿ ಅತ್ಯಂತ ಜನಪ್ರಿಯ ಅಭ್ಯರ್ಥಿಯಾಗಿದ್ದು, ಅವರ ಗೆಲುವು ನಿಶ್ಚಿತ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್ ಹೇಳಿದರು.

ಅವರು ಮಂಗಳವಾರ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿ.ಬಿ.ನಿಂಗಯ್ಯ ಅವರಿಗೆ 4 ತಿಂಗಳ ಹಿಂದೆ ಟಿಕೇಟ್ ಘೋಷಣೆ ಮಾಡಿ ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಕೆಲವೊಂದು ಕಾರ್ಯಯೋಜನೆಗಳನ್ನು ನೀಡಲಾಗಿತ್ತು. ಆದರೆ ಅವರು ಅವುಗಳನ್ನು ಕಾರ್ಯರೂಪಕ್ಕೆ ತಾರದ ಹಿನ್ನಲೆಯಲ್ಲಿ ಅವರಿಗೆ ಟಿಕೇಟ್ ತಪ್ಪಿರಬಹುದು. ಇಲ್ಲಿ ಯಾರೂ ಸಹ ಮೋಸ ಮಾಡಿಲ್ಲ. ಬಿ.ಬಿ.ನಿಂಗಯ್ಯ ನಮ್ಮ ಹಿರಿಯ ನಾಯಕರು. ಅವರ ವಿಶ್ವಾಸ ತೆಗೆದುಕೊಂಡು ಚುನಾವಣೆಗೆ ತೆರಳುತ್ತೇವೆ. ನಮ್ಮ ಸರಕಾರ ಆಡಳಿತಕ್ಕೆ ಬಂದೇ ಬರುತ್ತದೆ. ಬಿ.ಬಿ.ನಿಂಗಯ್ಯ ಅವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನ ಮಾನ ಕೂಡ ಸಿಗುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿ ಜೆ.ಡಿ.ಎಸ್. ಪರವಾಗಿ ಉತ್ತಮ ಪ್ರತಿಕ್ರಿಯೆ ಇದೆ. ಮತದಾರರು ಜನಪರ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ಆಶಿಸುತ್ತಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿಯವರು ಮುಖ್ಯಮಂತ್ರಿಗಳಾಗಿದ್ದಾಗ ಮಾಡಿದ ಕಾರ್ಯಗಳನ್ನು ಜನರು ಮರೆತಿಲ್ಲ. ಮತ್ತೊಮ್ಮೆ ಕುಮಾರಸ್ವಾಮಿಯವರೇ ಮುಖ್ಯಮಂತ್ರಿ ಆಗಬೇಕು ಎಂಬ ಅಪೇಕ್ಷೆ ಜನರ ಭಾವನೆಗಳಲ್ಲಿ ಕಂಡುಬರುತ್ತಿದೆ.

ಚಿಕ್ಕಮಗಳೂರು ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಜೆ.ಡಿ.ಎಸ್. ಅಭ್ಯರ್ಥಿಗಳು ಗೆಲುವು ಪಡೆಯುವ ವಿಶ್ವಾಸವಿದೆ. ಬಿ.ಜೆ.ಪಿ. ಮತ್ತು ಕಾಂಗ್ರೇಸ್ ತೊರೆದು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಜೆ.ಡಿ.ಎಸ್. ಸೇರ್ಪಡೆಯಾಗುತ್ತಿದ್ದಾರೆ ಎಂದರು.

ಜೆಡಿಎಸ್ ಕ್ಷೇತ್ರ ಸಮಿತಿ ಅಧ್ಯಕ್ಷ ಡಿ.ಎಸ್.ಸುರೇಶ್ ಮಾತನಾಡಿ, ರಾಜಕೀಯ ಬೆಳವಣಿಗೆಯಿಂದ ನಿಂಗಯ್ಯ ಅವರಿಗೆ ಬೇಸರ ತಂದಿರಬಹುದು. ಎಂಎಲ್‍ಸಿ ಎಸ್.ಎಲ್.ಭೋಜೇಗೌಡ, ಜಿಲ್ಲಾಧ್ಯಕ್ಷರು ಹಾಗೂ ರಾಷ್ಟ್ರೀಯ ಅಧ್ಯಕ್ಷರು ಮಾತುಕತೆ ನಡೆಸಿ ನಿಂಗಯ್ಯ ಅವರ ನೇತೃತ್ವದಲ್ಲಿಯೇ ಕುಮಾರಸ್ವಾಮಿಯವರನ್ನು ಅಭ್ಯರ್ಥಿಯನ್ನಾಗಿ ಮಾಡಿ, ಇಲ್ಲಿನ ಅಭ್ಯರ್ಥಿಯನ್ನು ಗೆಲ್ಲಿಸಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಈ ಬಾರಿ ಮುಖ್ಯಮಂತ್ರಿಯನ್ನಾಗಿ ಮಾಡಲಾಗುವುದು. ನಮ್ಮದು ಜಾತ್ಯಾತೀತ ಪಕ್ಷ ಎಲ್ಲರ ವಿಶ್ವಾಸಕ್ಕೆ ದಕ್ಕೆಯಾಗದಂತೆ ಮನವೊಲಿಸಿ ಚುನಾವಣೆ ಎದುರಿಸಲಾಗುವುದು ಎಂದು ಹೇಳಿದರು.

ಮುಖಂಡರಾದ ಗಬ್ಬಳ್ಳಿ ಚಂದ್ರೇಗೌಡ, ಡಿ.ಬಿ.ಅಶೋಕ್‍ಕುಮಾರ್, ವಾಜೀದ್, ಶಾಖೀರ್, ಸುರೇಶ್, ಬಾಳೂರು ಲಕ್ಷ್ಮಣ್‍ಗೌಡ ಮತ್ತಿತರರಿದ್ದರು.

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ