October 5, 2024

ಮೂಡಿಗೆರೆ ವಿಧಾನಸಭಾ ಕ್ಷೇತ್ರದ ನಾಲ್ವರು ಕಾಂಗ್ರೇಸ್ ಮುಖಂಡರು ಪಕ್ಷಕ್ಕೆ ತಮ್ಮ ರಾಜೀನಾಮೆ ನೀಡಿದ್ದು, ಜೆ.ಡಿ.ಎಸ್. ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಹೇಳಿಕೆ ನೀಡಿದ್ದಾರೆ.

ಇಂದು ಮೂಡಿಗೆರೆಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮೂಡಿಗೆರೆ ಬ್ಲಾಕ್ ಕಾಂಗ್ರೇಸ್ ಉಪಾಧ್ಯಕ್ಷ ಪ್ರಭಾಕರ್ ಬಿನ್ನಡಿ, ಜಿಲ್ಲಾ ಕಾಂಗ್ರೇಸ್ ಕಾರ್ಯದರ್ಶಿ ಆಲ್ದೂರು ಅಶೋಕ್, ಅವತಿ ಹೋಬಳಿ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಜಗದೀಶ್, ಜಿಲ್ಲಾ ಯುವ ಕಾಂಗ್ರೇಸ್ ಉಪಾಧ್ಯಕ್ಷ ಮಂಜು ಇವರುಗಳು ತಾವು ಕಾಂಗ್ರೇಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ. ಬಿನ್ನಡಿ ಪ್ರಭಾಕರ್ ಅವರು ಮೂಡಿಗೆರೆ ಕ್ಷೇತ್ರದ ಕಾಂಗ್ರೇಸ್ ಟಿಕೆಟ್ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಸಿದ್ದರು.

ಕಾಂಗ್ರೇಸ್ ಪಕ್ಷದಲ್ಲಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಸ್ಥಳೀಯರ ಅಭಿಪ್ರಾಯಕ್ಕೆ ಮನ್ನಣೆ ನೀಡದೇ ಇರುವ ಕಾರಣ ಬೇಸತ್ತು ಕಾಂಗ್ರೇಸ್ ತೊರೆಯುತ್ತಿರುವುದಾಗಿ ಹೇಳಿದ್ದಾರೆ. ಪಕ್ಷದಲ್ಲಿ ಸಂಘಟನೆ ಮತ್ತು ಕೆಲಸ ಮಾಡುವ ಹಿರಿಯ ಕಾರ್ಯಕರ್ತರಿಗೆ ಬೆಲೆ ಇಲ್ಲದಂತಾಗಿದೆ. ಭಿನ್ನಾಭಿಪ್ರಾಯ ವ್ಯಕ್ತಪಡಿಸಿದವರನ್ನು ಸೌಜನ್ಯಕ್ಕಾದರೂ ಕರೆದು ಮಾತನಾಡಿಸುವ ಪ್ರಯತ್ನ ನಡೆಸಿಲ್ಲ. ಕೆಲವರ ಸ್ವಯಂಕೃತ ತಪ್ಪುಗಳಿಂದ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೇಸ್ ಮೂರನೇ ಸ್ಥಾನಕ್ಕೆ ದೂಡಲ್ಪಡುತ್ತದೆ ಎಂದು ದೂರಿದ್ದಾರೆ.

ತಮ್ಮ ಅಪಾರ ಬೆಂಗಲಿಗರೊಂದಿಗೆ ಜೆ.ಡಿ.ಎಸ್. ಪಕ್ಷವನ್ನು ಸೇರಿ ಜೆ.ಡಿ.ಎಸ್. ಅಭ್ಯರ್ಥಿ ಎಂ.ಪಿ. ಕುಮಾರಸ್ವಾಮಿಯವರ ಪರವಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.

 

ಈ ಸರ್ತಿ ನೀವೆಲ್ಲಾ ಸೇರಿ ಕಾಂಗ್ರೇಸ್ ಗೆ ಓಟ್ ಹಾಕ್ಬೇಕು : ಜೆ.ಡಿ.ಎಸ್. ನ ಎಸ್.ಎಲ್. ಬೋಜೇಗೌಡರ ವಿಡಿಯೋ ವೈರಲ್

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ