October 5, 2024

ಕಳಸ ತಾಲ್ಲೂಕು ಕೇಂದ್ರವನ್ನಾಗಿ ಮಾಡುವುದರಲ್ಲಿ ಬಿ.ಜೆ.ಪಿ. ಪ್ರಮುಖ ಪಾತ್ರ ವಹಿಸಿದೆ. ಬಿ.ಜೆ.ಪಿ. ಅಭ್ಯರ್ಥಿ ದೀಪಕ್ ದೊಡ್ಡಯ್ಯ ನೇತೃತ್ವದಲ್ಲಿ ಕಳಸದಿಂದ ಚಿಕ್ಕಮಗಳೂರು ವರೆಗೆ ಪಾದಯಾತ್ರೆ ನಡೆಸಿ ತಾಲ್ಲೂಕು ಕೇಂದ್ರ ಮಾಡುವ ಬಗ್ಗೆ ರಾಜ್ಯದ ಗಮನಸೆಳೆಯಲಾಗಿತ್ತು. ಕಳಸ ಸೇರಿದಂತೆ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಈ ಬಾರಿ ಬಿ.ಜೆ.ಪಿ. ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ವಿಧಾನಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಮನವಿ ಮಾಡಿದ್ದಾರೆ.

ಕಳಸ ತಾಲ್ಲೂಕಿನ ಬಾಳೆಹೊಳೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮೂಡಿಗೆರೆ ಕ್ಷೇತ್ರ ಸೇರಿದಂತೆ ರಾಜ್ಯದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಪಕ್ಷವು ಬಡವರು ದಲಿತರು ಹಿಂದುಳಿದವರು ಮಹಿಳೆಯರು ಸೇರಿದಂತೆ ಎಲ್ಲರಿಗೂ ಅನೇಕ ಯೋಜನೆಗಳನ್ನು ಘೋಷಿಸಿ ಅವುಗಳನ್ನು ಕಾರ್ಯರೂಪಕ್ಕೆ ತಂದು ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವ ಕಾರಣ ಮತ್ತೊಮ್ಮೆ ಅಧಿಕಾರ ಹಿಡಿಯಲಿದೆ.

ಅಲ್ಲದೆ ಕ್ಷೇತ್ರಕ್ಕೆ ಬಿಜೆಪಿ ಸರ್ಕಾರ ಹೆಚ್ಚಿನ ಅನುದಾನ ನೀಡಿ ಪ್ರತೀ ಗ್ರಾಮಗಳ ರಸ್ತೆ ಕುಡಿಯ ನೀರು ಮತ್ತು ವಸತಿಗೆ ಆದ್ಯತೆ ನೀಡಿದ್ದು. ಕಳಸವನ್ನು ಸುಸಜ್ಜಿತ ತಾಲೂಕು ಕೇಂದ್ರ ಮಾಡುವುದು ನಮ್ಮ ಪ್ರಮುಖ ಗುರಿಯಾಗಿದ್ದು. ನಮಗೆ ಶಕ್ತಿ ನೀಡಿ ಎಂದ ಇವರು. ನಮ್ಮ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಚಾರಿತ್ರಿವಂತ ಮತ್ತು ವಿದ್ಯಾವಂತರಾಗಿದ್ದು. ಈ ಕಾರಣದಿಂದ ಮತ್ತಷ್ಟು ಅಭಿವೃದ್ಧಿ ಕ್ಷೇತ್ರದಲ್ಲಿ ಸಾಧ್ಯವಾಗಲಿದ್ದು ವಿರೋಧಪಕ್ಷಗಳ ಯಾವುದೇ ಅಪಪ್ರಚಾರ ಇಲ್ಲಿ ನಡೆಯುವುದಿಲ್ಲ ಕಾರ್ಯಕರ್ತರು ಮತದಾರರ ಮನೆ ಮನೆಗೆ ತೆರಳಿ ಗೆಲುವಿನ ಅಂತರವನ್ನು ಹೆಚ್ಚಿಸಬೇಕಾಗಿ ಮನವಿ ಮಾಡಿಕೊಂಡರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ