October 5, 2024

ಕಾಂಗ್ರೆಸ್ ಪಕ್ಷ ಬಹುಮತ ಪಡೆಯುವಲ್ಲಿ ಶ್ರಮ ವಹಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕೆಂಪೇಗೌಡ ಒಕ್ಕಲಿಗರ ವೇದಿಕೆ ಮೂಡಿಗೆರೆ ತಾಲ್ಲೂಕು ಅಧ್ಯಕ್ಷ ಬ್ರಿಜೇಶ್ ಕಡಿದಾಳು ಒತ್ತಾಯಿಸಿದರು.

ಸೋಮವಾರ ಮೂಡಿಗೆರೆ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಕಾಂಗ್ರೆಸ್ ಬಹುಮತ ಪಡೆದಾಗ ಕೆ.ಪಿ.ಸಿ.ಸಿ. ಅಧ್ಯಕ್ಷರಾಗಿದ್ದ ಎಸ್.ಎಂ.ಕೃಷ್ಣ ಅವರ ಪಾತ್ರ ಹೆಚ್ಚಿದ್ದರಿಂದ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಲಾಗಿತ್ತು. ಅದೇ ರೀತಿಯಲ್ಲಿ ಈ ಬಾರಿಯೂ ಡಿ.ಕೆ.ಶಿವಕುಮಾರ್ ಅವರು ರಾಜ್ಯಾಧ್ಯಂತ ಪ್ರವಾಸ ಮಾಡಿ, ಪಕ್ಷವನ್ನು ಸಂಘಟಿಸಿ ಕಾಂಗ್ರೇಸ್ ಬಹುಮತ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕಾರಣದಿಂದ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು.

ಮುಖಂಡರಾದ ಎಂ.ಎನ್.ಅಶ್ವಥ್ ಮಾಕೋನಹಳ್ಳಿ ಮಾತನಾಡಿ, ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷರಾದವರಿಗೆ ಮುಖ್ಯಮಂತ್ರಿ ಸ್ಥಾನವನ್ನು ಹಿಂದಿನಿಂದಲೂ ನೀಡುತ್ತಾ ಬರಲಾಗಿದೆ. ಡಿ.ಕೆ.ಶಿವಕುಮಾರ್ ಅವರು ಮಾಡಿದ ಪಕ್ಷ ಸಂಘಟನೆಯಿಂದ ಚುನಾವಣೆಗೂ ಮುನ್ನವೇ 136 ಸ್ಥಾನ ಗ್ಯಾರಂಟಿ ಪಡೆಯುತ್ತೇವೆಂದು ಭವಿಷ್ಯ ನುಡಿದಿದ್ದರು. ಅದರಂತೆ ರಾಜ್ಯದಲ್ಲಿ 135 ಸ್ಥಾನ ಪಡೆದಿದೆ. ಹಾಗಾಗಿ ಪಕ್ಷದ ಬಗ್ಗೆ ಅತ್ಯಂತ ತಿಳುವಳಿಕೆ ಇರುವ ಹಾಗೂ ಜನರ ಸಂಕಷ್ಟ ನಿವಾರಿಸುವ ಮೊನೋಭಾದ ಹೊಂದಿರುವ ಡಿಕೆಶಿ ಅವರಿಗೆ ಸಿಎಂ ಸ್ಥಾನ ದಕ್ಕಲೇಬೇಕೆಂದು ಆಗ್ರಹಿಸಿದರು.

ಕೆಂಪೇಗೌಡ ಒಕ್ಕಲಿಗರ ವೇದಿಕೆ ಕಾರ್ಯದರ್ಶಿ ಪ್ರಸಾಧ್ ಬಕ್ಕಿ, ಮುಖಂಡರಾದ ಪುನೀತ್ ಪಟ್ಟದೂರು, ಸವಿನ್ ಬಿಳಗುಳ, ಅಕ್ಷತ್ ಪಟ್ಟದೂರು, ಸುಧಾಕರ್ ಪಟ್ಟದೂರು, ಹರೀಶ್ ಊರುಬಗೆ, ಪುನೀತ್ ಕಡಿದಾಳ್, ಶಮಂತ್, ಸುಂದರೇಶ್ ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ