October 5, 2024

ಕಳೆದ ನಾಲ್ಕು ದಿನಗಳಿಂದ ದೆಹಲಿಯಲ್ಲಿ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ತೆರೆಬಿದ್ದಿದ್ದು ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರ ಹೆಸರನ್ನು ಅಂತಿಮಗೊಳಿಸಲಾಗಿದೆ.

ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಟ್ಟುಹಿಡಿದಿದ್ದ ಡಿ.ಕೆ. ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿ ಹುದ್ದೆ ಒಪ್ಪಿಕೊಳ್ಳುವಂತೆ ಹೈಕಮಾಂಡ್ ಮನವೊಲಿಸಿದ್ದಾರೆ ಎನ್ನಲಾಗಿದೆ. ನಿನ್ನೆ ತಡರಾತ್ರಿ ವರಿಷ್ಟರು ಅಂತಿಮ ನಿರ್ಣಯ ಕೈಗೊಂಡು ಮುಖ್ಯಮಂತ್ರಿ ಹುದ್ದೆಗೆ ಸಿದ್ದರಾಮಯ್ಯನವರ ಹೆಸರನ್ನು ಅಂತಿಮಗೊಳಿಸಿದ್ದಾರೆ.

ಮುಖ್ಯಮಂತ್ರಿ ಸ್ಥಾನದ ಅವಧಿ ಹಂಚಿಕೆ ಮಾಡಲಾಗಿದೆಯೇ ಅಥವಾ ಪೂರ್ಣ ಅವಧಿಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿರುತ್ತಾರೆಯೇ ? ಏನೇನು ಷರತ್ತುಗಳ ಮೇಲೆ ಡಿ.ಕೆ. ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಲು ಒಪ್ಪಿಕೊಂಡಿದ್ದಾರೆ ಎಂಬುದರ ಬಗ್ಗೆ ಯಾವುದೇ ಮಾಹಿತಿಗಳು ಇದುವರೆಗೂ ಲಭ್ಯವಾಗಿಲ್ಲ.

ಇಂದು ಸಂಜೆ ಬೆಂಗಳೂರಿನಲ್ಲಿ ಕಾಂಗ್ರೇಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದು ಅಲ್ಲಿ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಸಿದ್ದರಾಮಯ್ಯನವರನ್ನು ಸರ್ವಾನುಮತದಿಂದ ಆಯ್ಕೆಮಾಡಲಾಗುತ್ತದೆ ಎನ್ನಲಾಗಿದೆ. ಮೇ 20ರಂದು ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

 

ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಮತಗಟ್ಟೆವಾರು ಮತಗಳಿಕೆ ವಿವರ

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ