October 5, 2024

ವಿಧಾನಸಭಾ ಚುನಾವಣೆಯ ಸೋಲಿನಿಂದ ವಿಚಲಿತನಾಗಿಲ್ಲ ಎಂದು ಮೂಡಿಗೆರೆ ಕ್ಷೇತ್ರದ ಬಿ.ಜೆ.ಪಿ. ಅಭ್ಯರ್ಥಿ ದೀಪಕ್ ದೊಡ್ಡಯ್ಯ ತಿಳಿಸಿದ್ದಾರೆ.

ಅವರು ಮಾಧ್ಯಮದೊಂದಿಗೆ ಮಾತನಾಡಿ ಮೂಡಿಗೆರೆ ಕ್ಷೇತ್ರದ ಜನ ನನಗೆ ಐವತ್ತು ಸಾವಿರಕ್ಕೂ ಅಧಿಕ ಮತಗಳನ್ನು ನೀಡಿದ್ದಾರೆ. ನನಗೆ 722 ಮತಗಳ ಅಂತದಿಂದ ಸೋಲಾಗಿದೆ. ಸೋಲನ್ನು ನಾನು ಸವಾಲಾಗಿ ಸ್ವೀಕರಿಸುತ್ತೇನೆ. ಸೋಲಿಗೆ ನಾನೇ ವೈಯುಕ್ತಿಕವಾಗಿ ನೈತಿಕ ಹೊಣೆ ಹೊರುತ್ತೇನೆ. ಮುಂದೆಯೂ ಕ್ಷೇತ್ರದ ಜನರ ಮಧ್ಯೆ ಇದ್ದು ಕೆಲಸ ಮಾಡುತ್ತೇನೆ ಎಂದಿದ್ದಾರೆ.

ಬಿ.ಜೆ.ಪಿ. ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಚುನಾವಣೆಯಲ್ಲಿ ನಿಸ್ವಾರ್ಥ ಭಾವದಿಂದ ಕೆಲಸ ಮಾಡಿದ್ದಾರೆ. ಅವರ ಪ್ರೀತಿ ವಿಶ್ವಾಸವನ್ನು ಎಂದಿಗೂ ಮರೆಯುವುದಿಲ್ಲ. ನಾನು ಕ್ಷೇತ್ರದಿಂದ ಪಲಾಯನ ಮಾಡುವುದಿಲ್ಲ.

ಕ್ಷೇತ್ರದಲ್ಲಿ ಗೆಲುವು ಪಡೆದಿರುವ ಸಹೋದರಿ ನಯನ ಮೋಟಮ್ಮ ಅವರನ್ನು ಅಭಿನಂದಿಸುತ್ತೇನೆ. ಮೂಡಿಗೆರೆ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ರಸ್ತೆ, ಕುಡಿಯುವ ನೀರು, ನಿವೇಶನ, ಫಾರಂ ನಂ 53, 94ಸಿ ಹೀಗೆ ಜನರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ನೂತನ ಶಾಸಕರು ಜನರ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಿ ಎಂದು ಆಶಿಸುತ್ತೇನೆ. ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ರಚನಾತ್ಮಕ ಸಲಹೆಗಳನ್ನು ನೀಡಲಿದ್ದು, ಆಡಳಿತ ಹಳಿತಪ್ಪಿದಾಗ ಜನರ ಧ್ವನಿಯಾಗಿ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷ ನೀಡಿದ್ದ ಐದು ಗ್ರಾರಂಟಿ ಭರವಸೆಗಳನ್ನು ನೋಡಿ ಜನ ಮತಹಾಕಿದ್ದಾರೆ. ರಾಜ್ಯ ಸರ್ಕಾರ ತಾನು ನೀಡಿರುವ ವಾಗ್ದಾನವನ್ನು ಈಡೇರಿಸಬೇಕು. ಈ ಹಿಂದೆ ಬೇರೆ ಬೇರೆ ರಾಜ್ಯಗಳಲ್ಲಿ ಕಾಂಗ್ರೇಸ್ ನೀಡಿದ್ದ ಉಚಿತ ಗ್ಯಾರಂಟಿಗಳನ್ನು ಈಡೇರಿಸಿಲ್ಲ. ನಿರುದ್ಯೋಗಿ ಯುವಕರಿಗೆ ಭತ್ಯೆ ನೀಡುವುದಾಗಿ ಹೇಳಿದ್ದರಿಂದ ಬಹಳಷ್ಟು ನಿರುದ್ಯೋಗಿ ಯುವಕರು ಕಾಂಗ್ರೇಸ್ ಗೆ ಮತ ನೀಡಿದ್ದಾರೆ. ಆದರೆ ಈಗ ಕೇವಲ 2022-23ನೇ ಸಾಲಿನಲ್ಲಿ ಪದವಿ ಪಡೆದ ನಿರುದ್ಯೋಗಿಗಳಿಗೆ ಮಾತ್ರ ಭತ್ಯೆ ನೀಡುವುದಾಗಿ ಹೇಳುತ್ತಿದ್ದಾರೆ. ಕಾಂಗ್ರೇಸ್ ರಾಜ್ಯದಲ್ಲಿ ಜನರ ಕಿವಿಗೆ ಹೂ ಇಡದೇ ನುಡಿದಂತೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ