ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ನೂತನ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಯುವಕನೋರ್ವನ ಕೊಲೆಯಾಗಿದೆ.
ತರೀಕೆರೆ ನೂತನ ಕಾಂಗ್ರೇಸ್ ಶಾಸಕ ಜಿ.ಹೆಚ್.ಶ್ರೀನಿವಾಸ್ ಅವರಿಗೆ ತರೀಕೆರೆ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಈ ಘಟನೆ ನಡೆದಿದೆ.
ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಹಾಡು ಬದಲಿಸುವ ವಿಚಾರದಲ್ಲಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗಿದೆ.
ವರುಣ್ (28ವರ್ಷ) ಚಾಕು ಇರಿತಕ್ಕೊಳಗಾಗಿ ಕೊಲೆಗೀಡಾದ ಯುವಕ. ಮಂಜು ಮತ್ತು ಸಂಜು ಎಂಬುವವರಿಗೂ ತೀವ್ರ ಗಾಯಗಳಾಗಿವೆ ಎನ್ನಲಾಗಿದೆ.
ಆರ್ಕೇಸ್ಟ್ರಾ ವಿಚಾರದಲ್ಲಿ ಕಬಾಬ್ ಮೂರ್ತಿ ಮತ್ತು ವರುಣ್ ಮಧ್ಯೆ ಗಲಾಟೆಯಾಗಿತ್ತೆಂದು ತಿಳಿದುಬಂದಿದೆ. ಮಾತಿಗೆ ಮಾತು ಬೆಳೆದು ಎರಡು ಗುಂಪುಗಳ ನಡುವೆ ಗಲಾಟೆ ಜೋರಾಗಿದೆ. ಆರ್ಕೆಸ್ಟ್ರಾ ಮುಗಿಯುತ್ತಿದ್ದಂತೆ ಕಬಾಬ್ ಮೂರ್ತಿ ವರುಣ್ ಹೊಟ್ಟೆಗೆ ಚಾಕುವಿನಿಂದ ಇರಿದ್ದಿದ್ದಾನೆ ಎನ್ನಲಾಗಿದೆ. ಇದರಿಂದ ತೀವ್ರ ಗಾಯ ಮತ್ತು ರಕ್ತಸ್ರಾವದಿಂದ ವರುಣ್ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ತಕ್ಷಣ ಶಿವಮೊಗ್ಗ ಆಸ್ಪತ್ರೆಗೆ ಕೊಂಡೊಯ್ದಿದ್ದರೂ ಕೂಡ ವರುಣ್ ಜೀವ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.
ತರೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿಕ್ಕಮಗಳೂರು ಎಸ್ಪಿ ಉಮಾಪ್ರಶಾಂತ್ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.
ಘಟನೆಯಿಂದ ತರೀಕೆರೆ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.
ಒಟ್ಟಾರೆ ಶಾಸಕರ ಗೆಲುವನ್ನು ಸಂಭ್ರಮಿಸಲು ಅವರ ಅಭಿಮಾನಿಗಳು ಏರ್ಪಡಿಸಿದ್ದ ಸಮಾರಂಭದಲ್ಲಿ ದುರ್ಘಟನೆ ನಡೆದಿದೆ.
ಒಡಿಸ್ಸಾ ರೈಲು ದುರಂತ ; ಮೃತರ ಸಂಖ್ಯೆ 288ಕ್ಕೆ ಏರಿಕೆ ; ಕಳಸದ 110 ಮಂದಿ ಬದುಕುಳಿದದ್ದೇ ಪವಾಡ
ದರ್ಪಣ ನ್ಯೂಸ್ ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಒತ್ತಿ
https://chat.whatsapp.com/IkFCXal7O5ODMBHsmKv9ak