ಹೃದಯ ಶಸ್ತ್ರಚಿಕಿತ್ಸೆಯ ಮೂಲಕ ಸಾವಿರಾರು ಜನರ ಜೀವ ಉಳಿಸಿದ್ದ ಗುಜರಾತಿನ ಖ್ಯಾತ ಹೃದ್ರೋಗ ತಜ್ಞ ಡಾ. ಗೌರವ್ ಗಾಂಧಿ (41 ವರ್ಷ) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಡಾ. ಗಾಂಧಿಯವರು ಸಾವಿರಾರು ಆಂಜಿಯೋಗ್ರಫಿ ಮತ್ತು ಹೃದಯ ಶಸ್ತ್ರಚಿಕಿತ್ಸೆಗಳನ್ನು ಮಾಡುವ ಮೂಲಕ ಗುಜರಾತ್ ರಾಜ್ಯದಾದ್ಯಂತ ಹೆಸರುವಾಸಿಯಾಗಿದ್ದರು.
ಗುಜರಾತಿನ ಜಾಮ್ ನಗರದ ಗುರುಗೋವಿಂದಸಿಂಹ ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಾ. ಗೌರವ್ ಗಾಂಧಿ ಹೃದಯ ಶಸ್ತ್ರಚಿಕಿತ್ಸೆಯಲ್ಲಿ ಹೆಚ್ಚು ಪರಿಣತಿ ಹೊಂದಿದ್ದರು ಮತ್ತು ಅವರು ಹೆಚ್ಚಿನ ಸಂಖ್ಯೆಯ ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದಾರೆ ಎಂದು ಆಸ್ಪತ್ರೆಯ ಮುಖ್ಯಸ್ಥ ಡಾ. ಹೆಚ್.ಕೆ. ವಾಸವಾಡ ತಿಳಿಸಿದ್ದಾರೆ.
ಸೋಮವಾರ ರಾತ್ರಿ ತಮ್ಮ ಡ್ಯೂಟಿ ಮುಗಿಸಿ ಮನೆಗೆ ಬಂದು ಊಟ ಮಾಡಿ ಮಲಗಿದ್ದ ಡಾ. ಗೌರವ್ ಬೆಳಿಗ್ಗೆ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇವರು ಕೊನೆಯುಸಿರೆಳೆದಿದ್ದಾರೆ. ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ನಿರಂತರ ಸುದ್ದಿಗಳಿಗೆ ದರ್ಪಣ ನ್ಯೂಸ್ ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಒತ್ತಿ
https://chat.whatsapp.com/IkFCXal7O5ODMBHsmKv9ak
ಫೆಸ್ಬುಕ್ ಗೆಳತಿಯಿಂದ ಸ್ವಾಮೀಜಿಗೆ ಲಕ್ಷಾಂತರ ರುಪಾಯಿ ಪಂಗನಾಮ ; ದೂರು ದಾಖಲು