October 5, 2024

ಚಿಕ್ಕಮಗಳೂರು ನಗರಸಭೆಯಲ್ಲಿ ಅಕ್ರಮ ಖಾತೆಗಳನ್ನು ಸೃಷ್ಟಿಮಾಡಿ ವಂಚನೆಯಲ್ಲಿ ಭಾಗಿಯಾಗಿದ್ದ ಇಬ್ಬರು ಸಿಬ್ಬಂದಿಗಳನ್ನು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಅವರು ಅಮಾನತು ಮಾಡಿದ್ದಾರೆ. ಅಕ್ರಮದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ನಗರಸಭೆ ದ್ವಿತೀಯ ದರ್ಜೆ ಸಹಾಯಕ ಮಹಾದೇವ ಮತ್ತು ಆಶಾ ಎಂಬುವವರನ್ನು ಅಮಾನತು ಮಾಡಲಾಗಿದೆ.

ಚಿಕ್ಕಮಗಳೂರು ನಗರಕ್ಕೆ ಹೊಂದಿಕೊಂಡಂತೆ ಇರುವ ಇಂದಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿದ್ದ ಉಪ್ಪಳ್ಳಿ ಸುತ್ತಮುತ್ತಲ ಕೆಲವು ಭಾಗಗಳನ್ನು 1995ರಲ್ಲಿ ನಗರಸಭೆಗೆ ಹಸ್ತಾಂತರ ಮಾಡಲಾಗಿದೆ. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯಲ್ಲಿ ನೊಂದಣಿಯಾಗಿದ್ದ ಆಸ್ತಿ ದಾಖಲೆಗಳನ್ನು ನಗರಸಭೆಗೆ ಹಸ್ತಾಂತರ ಮಾಡಲಾಗಿದೆ. ಆದರೆ ಗ್ರಾಮಪಂಚಾಯಿತಿ ಹಸ್ತಾಂತರ ಮಾಡದೇ ಇದ್ದ 51 ಆಸ್ತಿಗಳ ದಾಖಲೆಗಳನ್ನು ಆ ನಂತರದ ದಿನಗಳಲ್ಲಿ ನಗರಸಭೆ ರಿಜಿಸ್ಟರ್ ನಲ್ಲಿ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಈ ಆಸ್ತಿಗಳನ್ನು ಅಕ್ರಮವಾಗಿ ನೊಂದಣಿ ಮಾಡಲಾಗಿದ್ದು, ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಆಸ್ತಿಗಳನ್ನು ಬೇರೆಯವರಿಗೆ ವರ್ಗಾವಣೆ ಮಾಡಲಾಗಿದೆ.

ಈ ಸಂಬಂಧ ಸಲ್ಲಿಕೆಯಾಗಿದ್ದ ದೂರು ಆಧರಿಸಿ ನಗರಸಭೆ ಆಯುಕ್ತರಿಂದ ಜಿಲ್ಲಾಧಿಕಾರಿ ವರದಿ ಕೇಳಿದ್ದರು. ಕೆಲವು ಆಸ್ತಿ ಖಾತೆಗಳನು ಅಕ್ರಮವಾಗಿ ಸೇರ್ಪಡೆಯಾಗಿವೆ ಎಂದು ಆಯುಕ್ತರು ತಮ್ಮ ವರದಿಯಲ್ಲಿ ತಿಳಿಸಿದ್ದರು. ನಂತರ ಜಿಲ್ಲಾಧಿಕಾರಿಗಳ ಕಛೇರಿಯಿಂದಲೂ ತನಿಖೆ ನಡೆಸಲಾಗಿತ್ತು.

ಅಕ್ರಮದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ನಗರಸಭೆ ದ್ವಿತೀಯ ದರ್ಜೆ ಸಹಾಯಕ ಮಹಾದೇವ ಮತ್ತು ಆಶಾ ಎಂಬುವವರನ್ನು ಅಮಾನತು ಮಾಡಲಾಗಿದೆ. ನಗರಸಭೆ ಪ್ರಥಮದರ್ಜೆ ಸಹಾಯಕ ರಮೇಶ್ ಬಾಬು, ಶಿವಾನಂದಪ್ಪ, ಈ ಹಿಂದೆ ಇಲ್ಲಿ ಕಾರ್ಯನಿರ್ವಹಿಸಿ ಈಗ ಬೇರೆಡೆ ವರ್ಗವಾಗಿರುವ ಕಡೂರು ಪುರಸಭೆ ಕಂದಾಯ ನಿರೀಕ್ಷಕಿ ಮಮತಾ, ಬೆಂಗಳೂರು ಜಿಗಣಿ ಪುರಸಭೆ ದ್ವಿತೀಯ ದರ್ಜೆ ಸಹಾಯಕ ರವಿ, ಕೆ.ಆರ್. ಪೇಟೆ ಪುರಸಭೆ ಮುಖ್ಯಾಧಿಕಾರಿ ಬಸವರಾಜು ವಿರುದ್ಧ ಶಿಸ್ತುಕ್ರಮಕ್ಕೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಿಂದ ಇಷ್ಟು ಕಡತಗಳು ಅಕ್ರಮವಾಗಿರುವುದು ಕಂಡುಬಂದಿವೆ. ಸಮಗ್ರ ತನಿಖೆ ನಡೆಸಿದರೆ ಇನ್ನಷ್ಟು ಅಕ್ರಮಗಳು ಹೊರಬರಬಹುದು, ಆದ್ದರಿಂದ ಹೆಚ್ಚಿನ ತನಿಖೆಗೆ ನಗರಾಭಿವೃದ್ಧಿ ಇಲಾಖೆ ನಿರ್ದೇಶಕರಿಗೆ ಶಿಫಾರಸ್ಸು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಫೆಸ್ಬುಕ್ ಗೆಳತಿಯಿಂದ ಸ್ವಾಮೀಜಿಗೆ ಲಕ್ಷಾಂತರ ರುಪಾಯಿ ಪಂಗನಾಮ ; ದೂರು ದಾಖಲು

ನಿರಂತರ ಸುದ್ದಿಗಳಿಗೆ ದರ್ಪಣ ನ್ಯೂಸ್ ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಒತ್ತಿ

https://chat.whatsapp.com/IkFCXal7O5ODMBHsmKv9ak

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ