October 5, 2024

ಅಮೇರಿಕಾ ದೇಶದಲ್ಲಿ ಆರ್ಥಿಕವಾಗಿ ದುರ್ಬಲರಾದವರ ಕ್ಷೇಮಕ್ಕಾಗಿ 600 ಡಾಲರ್ ನೀಡುತ್ತಿದೆ. ಅದೇ ಮಾದರಿ ರಾಜ್ಯದಲ್ಲೂ ಕಾಂಗ್ರೆಸ್ ಮಾಡಲು ಮುಂದಾಗಿದೆ. ಇಂತಹ ಮಹಾನ್ ಕಾರ್ಯ ಮಾಡುವುದು ಎಲ್ಲಾ ಆಳುವ ಸರಕಾರದ ಜವಾಬ್ದಾರಿ ಎಂದು ಮಾಜಿ ಸಭಾಪತಿ ಬಿ.ಎಲ್.ಶಂಕರ್ ಹೇಳಿದರು.

ಅವರು ಭಾನುವಾರ ಪಟ್ಟಣದ ಹೊಯ್ಸಳ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಮೂಡಿಗೆರೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ನಮ್ಮ ದೇಶದಲ್ಲಿ 137 ಕೋಟಿ ಜನಸಂಖ್ಯೆಯಿದೆ. ಅದರಲ್ಲಿ ಶೇ.80 ಭಾಗ ಕೂಲಿಕಾರ್ಮಿಕರು, ಬಡವರೇ ಹೆಚ್ಚಾಗಿದ್ದಾರೆ. ಇವರೆಲ್ಲರೂ ಪರೋಕ್ಷವಾದ ತೆರಿಗೆ ಕಟ್ಟುತ್ತಿದ್ದಾರೆ. ಜಿಎಸ್‌ಟಿ ಇಲ್ಲದ ಯಾವ ವಸ್ತುವೂ ಖರೀದಿ ಮಾಡಲು ಸಾಧ್ಯವಿಲ್ಲ. ಇದನ್ನು ಬಿಜೆಪಿಯವರು ಅಪಪ್ರಚಾರ ಮಾಡುವ ಮುನ್ನ ಅರಿತುಕೊಳ್ಳಬೇಕು.

ಕಾಂಗ್ರೆಸ್ ರೈತರ, ಕೂಲಿ ಕಾರ್ಮಿಕರ, ಬಡವರ ಏಳಿಗೆಗೆ ಶ್ರಮಿಸುವ ಪಕ್ಷ. ಹಾಗಾಗಿ 5 ಗ್ಯಾರಂಟಿ ನೀಡುವ ಮೂಲಕ ಸರಕಾರ ತನ್ನ ಜವಾಬ್ದಾರಿ ಕೆಲಸ ಮಾಡುತ್ತಿದೆ. ಹಿಂದೆಯೂ ಕಾಂಗ್ರೆಸ್ ನುಡಿದಂತೆ ನಡೆದುಕೊಂಡಿದೆ. ಇದನ್ನು ಮನಗೊಂಡ ರಾಜ್ಯದ ಜನತೆ ಭ್ರಷ್ಟ ಬಿಜೆಪಿ ಸರಕಾರವನ್ನು ಕಿತ್ತೊಗೆದಿದ್ದಾರೆಂದು ಹೇಳಿದರು.

ಮಾಜಿ ಎಂಎಲ್‌ಸಿ ಗಾಯಿತ್ರಿ ಶಾಂತೇಗೌಡ ಮಾತನಾಡಿ, ಜಿಲ್ಲೆಯಲ್ಲಿ 5 ಸ್ಥಾನ ಗೆದ್ದಿದ್ದೇವೆ. ಅದಕ್ಕಾಗಿ ಜಿಲ್ಲೆಯವರೊಬ್ಬರಿಗೆ ಉಸ್ತುವಾರಿ ಸಚಿವ ಸ್ಥಾನ ನೀಡಬೇಕೆಂದು ಎಲ್ಲಾ ಶಾಸಕರು ಪ್ರಯತ್ನಿಸಬೇಕು. ತರಿಕೆರೆ, ಕಡೂರು ಹೊರತುಪಡಿಸಿದರೆ ಉಳಿದ ಕ್ಷೇತ್ರ ಕಡಿಮೆ ಅಂತರದಲ್ಲಿ ಗೆಲುವು ಸಾಧಿಸಿದ್ದೇವೆ. ಹಾಗಾಗಿ ಪಕ್ಷ ಇನ್ನಷ್ಟು ಸಂಘಟಿತರಾಗಬೇಕೆಂದು ಹೇಳಿದರು.

ಶಾಸಕಿ ನಯನಾ ಮೋಟಮ್ಮ ಮಾತನಾಡಿ, ಚುನಾವಣೆಗೂ ಮುನ್ನ ಜನಪರ ಕೆಲಸ ಮಾಡಿದ್ದೇನೆ. ಇನ್ನಷ್ಟು ಜನಪರವಾದ ಕೆಲಸ ಮಾಡಲು ಜನತೆ ಅಧಿಕಾರ ನೀಡಿದ್ದಾರೆ. ಕ್ಷೇತ್ರದಲ್ಲಿ 20 ವರ್ಷದಿಂದ ಕಾಣದ ಅಭಿವೃದ್ಧಿಯನ್ನು ತನ್ನ ಅವದಿಯಲ್ಲಿ ಶಕ್ತಿ ಮೀರಿ ಪ್ರಯತ್ನಿಸುತ್ತೇನೆಂದು ಹೇಳಿದರು.

ಮಾಜಿ ಸಚಿವೆ ಮೋಟಮ್ಮ ಮಾತನಾಡಿ, ನಯನಾ ಅವಳನ್ನು ಹೆತ್ತಾಗ ಆಗದಿದ್ದ ನೋವು, ಈ ಚುನಾವಣೆಯಲ್ಲಿ ಟಿಕೇಟ್‌ಗಾಗಿ ಪ್ರಯತ್ನ, ಕೆಲವರಿಂದ ನಡೆದ ಅಪಪ್ರಚಾರ ಬಹಳ ನೋವು ತಂದಿತ್ತು. ಆದರೆ ಕಾರ್ಯಕರ್ತರ ಹುಮ್ಮಸ್ಸು ಬಲವಾಗಿದ್ದರಿಂದ ಗೆಲುವು ಸಾಧ್ಯವಾಯಿತು ಎಂದು ಅಳಲು ತೋಡಿಕೊಂಡರು.

ಮಾಜಿ ಸಚಿವ ಬಿ.ಬಿ.ನಿಂಗಯ್ಯ ಮಾತನಾಡಿ, ಹಿಂದೆ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸಲು ಸಾಧ್ಯವಾಗಿರಲಿಲ್ಲ. ಆದರೆ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ 5 ಸ್ಥಾನ ಗೆಲ್ಲಿಸುವಲ್ಲಿ ಕಾರ್ಯಕರ್ತರು ಶ್ರಮ ವಹಿಸಿದ್ದಾರೆ. ಅಲ್ಲದೇ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಾಗಿದೆ. ಈ ಯಶಸ್ಸಿಗೆ ಕಾರ್ಯಕರ್ತರ ಶ್ರಮದಿಂದ ಸಾಧ್ಯವಾಗಿದೆ ಎಂದು ಹೇಳಿದರು.

ಹೆಚ್.ಹೆಚ್.ದೇವರಾಜು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಅಂಶುಮಂತ್ ಮಾತನಾಢಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಜಿ.ಸುರೇಂದ್ರ ಮುಖಂಡರಾರ ಎಂ.ಪಿ.ಮನು, ಜಿ.ಎಚ್.ಹಾಲಪ್ಪಗೌಡ, ಬಿ.ಎಂ.ಸಂದೀಪ್, ಎ.ಎನ್.ಮಹೇಶ್, ಕೆ.ಮಹಮ್ಮದ್, ಕೆ.ಬಿ.ಮಂಜುನಾಥ್, ಬಿ.ಆರ್.ಪರಮೇಶ್, ಕೆ.ಆರ್.ಪ್ರಭಾಕರ್, ನಾರ್ಬಟ್ ಸಾಲ್ಡಾನ, ಪಿ.ಆರ್. ವಿನಯ್‌ಕುಮಾರ್ ಸೇರಿದಂತೆ ಎಲ್ಲಾ ಹೋಬಳಿಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ