October 5, 2024

ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದ್ದ ಧರ್ಮಸ್ಥಳದ ಸೌಜನ್ಯ ಕೊಲೆಯ ಸಂಬಂಧ ಸಿಬಿಐ ನ್ಯಾಯಾಲಯವು ತನ್ನ ತೀರ್ಪು ಪ್ರಕಟಿಸಿದೆ.

ಕೊಲೆಪ್ರಕರಣದ ಆರೋಪಿ ಸಂತೋಷ್ ರಾವ್ ನನ್ನು ದೋಷಮುಕ್ತಗೊಳಿಸಿದೆ.

ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿಯ ಪುತ್ರಿ ಸೌಜನ್ಯ ಕೊಲೆಯಾದ ಯುವತಿ.

‘ಸಾಕ್ಷ್ಯಾಧಾರ ಕೊರತೆಯ ಹಿನ್ನೆಲೆಯಲ್ಲಿ ಸಂತೋಷ್ ರಾವ್ ಅವರನ್ನು ದೋಷಮುಕ್ತಗೊಳಿಸಲಾಗಿದೆ’ ಎಂದು ಸಿಬಿಐ ವಿಶೇಷ ಕೋರ್ಟ್‍ನ ನ್ಯಾಯಧೀಶ ಸಿ.ಬಿ.ಸಂತೋಷ್ ಶುಕ್ರವಾರ ತೀರ್ಪು ಪ್ರಕಟಿಸಿದರು.

ಪ್ರಕರಣವೇನು? :

ಉಜಿರೆಯ ಎಸ್‍ಡಿಎಂ ಕಾಲೇಜು ವಿದ್ಯಾರ್ಥಿನಿಯಾಗಿದ್ದ ಸೌಜನ್ಯ 2012ರ ಅಕ್ಟೋಬರ್ 9ರಂದು ಸಂಜೆ ಕಾಲೇಜಿನಿಂದ ಮನೆಗೆ ತೆರಳುವ ವೇಳೆ ನಾಪತ್ತೆಯಾಗಿದ್ದರು. ಮರುದಿನ ರಾತ್ರಿ ಧರ್ಮಸ್ಥಳದ ಮಣ್ಣಸಂಕ ಬಳಿ ಅವರ ಶವ ಪತ್ತೆಯಾಗಿತ್ತು. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಆರೋಪಿಗಳನ್ನು ಬಂಧಿಸಿಲ್ಲ ಎಂದು ದೊಡ್ಡಮಟ್ಟದ ಪ್ರತಿಭಟನೆಗಳು ನಡೆದಿದ್ದವು. ಕೊನೆಗೆ ಸಂಶಯದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ನಡೆದ ಸಂದರ್ಭದಲ್ಲಿ ಧರ್ಮಸ್ಥಳದ ಆಸುಪಾಸಿನಲ್ಲಿ ಓಡಾಡಿಕೊಂಡಿದ್ದ ಮಾನಸಿಕ ಅಸ್ವಸ್ಥನಂತೆ ಕಂಡುಬರುತ್ತಿದ್ದ ಕಾರ್ಕಳ ತಾಲ್ಲೂಕಿನ ಕುಕ್ಕಂದೂರು ಗ್ರಾಮದ ಸಂತೋಷ್ ರಾವ್ ನನ್ನು ಪೊಲೀಸರು ಬಂಧಿಸಿದ್ದರು.

ಸರ್ಕಾರ ಸಾರ್ವಜನಿಕ ಒತ್ತಡಕ್ಕೆ ಮಣಿದು ಪ್ರಕರಣವನ್ನು ಸಿ.ಬಿ.ಐ.ತನಿಖೆಗೆ ಒಪ್ಪಿಸಿತ್ತು.

ಸುದೀರ್ಘ ವಿಚಾರಣೆಯ ನಂತರ ಸಿ.ಬಿ.ಐ ನ್ಯಾಯಾಲಯ ಸಂತೋಷ್ ರಾವ್ ನನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿದೆ. ಆರೋಪಿ ಪರ ವಕೀಲ ಮೋಹಿತ್ ಕುಮಾರ್ ವಾದ ಮಂಡಿಸಿದ್ದರು.

ಇದರೊಂದಿಗೆ ಸೌಜನ್ಯ ಕೊಲೆ ಪ್ರಕರಣ ತಾರ್ಕಿಕ ಅಂತ್ಯ ಕಾಣದೇ ನಿಗೂಢವಾಗಿಯೇ ಉಳಿದಿದೆ

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ