October 5, 2024

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪ್ರಗತಿಬಂಧು -ಸ್ಟಸಹಾಯ ಸಂಘಗಳ ಸದಸ್ಯರ

ಮಕ್ಕಳ ವೃತ್ತಿಪರ ಹಾಗೂ ತಾಂತ್ರಿಕ ಶಿಕ್ಷಣಕ್ಕಾಗಿ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಿಸಲಾಯಿತು.

ಮೂಡಿಗೆರೆ ಪಟ್ಟಣದ ಯೋಜನೆಯ ಕಛೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಫಲಾನುಭವಿ ವಿದ್ಯಾರ್ಥಿಗಳಿಗೆ ಅವರ ಪೋಷಕರ ಸಮ್ಮುಖದಲ್ಲಿ ಸುಜ್ಞಾನನಿಧಿ ಮಂಜೂರಾತಿ ಪತ್ರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸುಜ್ಞಾನನಿಧಿ ಬಗ್ಗೆ ಮಾಹಿತಿ ನೀಡಿದ ಯೋಜನೆಯ ಜಿಲ್ಲಾ ನಿರ್ದೇಶಕರಾದ ಪ್ರಕಾಶ್ ರಾವ್ ರವರು   ಮೂಡಿಗೆರೆ ತಾಲೂಕು ವ್ಯಾಪ್ತಿಯ ಒಟ್ಟು 128 ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ರೂ. :111200/- ರಂತೆ ಕೋರ್ಸ್‌ ಮುಗಿಯುವವರೆಗೆ 52.00 ಲಕ್ಷ ಮೊತ್ತ ಮಂಜೂರಾಗಿದ್ದು, ಮಂಜೂರಾತಿ ಪತ್ರವನ್ನು ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗುತ್ತಿದೆ.

ಸಾಮಾನ್ಯ ಶಿಕ್ಷಣಕ್ಕಿಂತ ಹೆಚ್ಚಿನ ಅವಕಾಶಗಳು ಇಂದು ವೃತ್ತಿ ಮತ್ತು ತಾಂತ್ರಿಕ ಶಿಕ್ಷಣಕ್ಕಿದೆ. ಬಡ ಮತ್ತು ಅಸಂಘಟಿತ ವಲಯದ ಜನಸಾಮಾನ್ಯರ ಪ್ರತಿಭಾವಂತ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯುವುದೇ ದುಸ್ತರವಾಗಿದೆ. ಇದನ್ನು ಗಮನಿಸಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗಾಗಿ ಸುಜ್ಞಾನನಿಧಿ ಶಿಷ್ಯವೇತನ ಕಾರ್ಯಕ್ರಮ ಜಾರಿಗೆ ತಂದಿದ್ದಾರೆ. ಸಂಸ್ಥೆಯ ಬೆಳ್ಳಿಹಬ್ಬದ ಸವಿನೆನಪಿಗೆ 2007 ರಲ್ಲಿ ಪ್ರಾರಂಭಿಸಲಾದ ಈ ಕಾರ್ಯಕ್ರಮದಂತೆ ಇದುವರೆಗೆ 71091 ವಿದ್ಯಾರ್ಥಿಗಳಿಗೆ 82.52 ಕೋಟಿ ರೂ.ಮೊತ್ತದ ವಿದ್ಯಾರ್ಥಿವೇತನ ನೀಡಲಾಗಿದೆ.

ಅಭಿವೃದ್ಧಿ ಕಾಣದ ತೀರಾ ಹಿಂದುಳಿದ ಗ್ರಾಮಗಳ ಸಾಮಾನ್ಯ ಬಡಕೂಲಿ ಕಾರ್ಮಿಕರ ಮಕ್ಕಳು ಸುಜ್ಞಾನನಿಧಿ ಶಿಷ್ಯವೇತನ ಉಪಯೋಗ ಪಡೆದು ಡಾಕ್ಟರ್‌, ಸಾಫ್ಟ್‌ವೇರ್‌ ಇಂಜಿನಿಯರ್‌ನಂಥ ಉನ್ನತ ಶಿಕ್ಷಣ ಪಡೆಯಬಹುದು ಎನ್ನುವುದನ್ನು ಈ ಕಾರ್ಯಕ್ರಮ ನಿರೂಪಿಸಿದೆ ಎಂದರು.

ಮೂಡಿಗೆರೆ ತಾಲೂಕು ಯೋಜನಾಧಿಕಾರಿಗಳಾದ  ಶಿವಾನಂದ.ಪಿ ರವರು ಮಾತನಾಡಿ ಯೋಜನೆಯ ಸಂಘಗಳ ಬಡ ಸದಸ್ಯರ ಪ್ರತಿಭಾನ್ವಿತ ವಿದ್ಯಾರ್ಥಿಗಳ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸ್‌ ಗಳಿಗೆ ಶಿಷ್ಯವೇತನ ನೀಡಲಾಗುತ್ತಿದ್ದು, ಮೂರು ವರ್ಷದವರೆಗಿನ ಕೋರ್ಸ್‌ಗಳಿಗೆ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ತಲಾ 400 ಹಾಗೂ ಐದು ವರ್ಷದವರೆಗಿನ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆ ಕೋರ್ಸ್‌ ಮುಗಿಯುವವರೆಗೆ ತಲಾ 1000 ರೂಪಾಯಿಯಂತೆ ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ಪಾವತಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ದರ್ಪಣ ಪತ್ರಿಕೆ ಸಂಪಾದಕರಾದ ಪ್ರಸನ್ನ ಗೌಡಹಳ್ಳಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನಡೆಯುತ್ತಿರುವ ಸಮಗ್ರ ಅಭಿವೃದ್ಧಿ ಕಾರ್ಯಗಳು, ಸಾಮಾಜಿಕ ಸೇವೆ, ಶೈಕ್ಷಣಿಕ ಕ್ಷೇತ್ರಕ್ಕೆ ನೀಡುತ್ತಿರುವ ಪ್ರೋತ್ಸಾಹ ಕಾರ್ಯಕ್ರಮಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಕಳಸ ತಾಲೂಕಿನ ಯೋಜನಾಧಿಕಾರಿಗಳಾದ  ಸುರೇಶ್‌, ಮೂಡಿಗೆರೆ ತಾಲೂಕಿನ ಶೌರ್ಯ ವಿಪತ್ತು ಘಟಕದ ಕಾರ್ಯದರ್ಶಿ ಪ್ರವೀಣ್‌ ಪೂಜಾರಿ  ಉಪಸ್ಥಿತರಿದ್ದರು.

ನಿರಂತರ ಸುದ್ದಿಗಳಿಗೆ ದರ್ಪಣ ನ್ಯೂಸ್ ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಒತ್ತಿ

https://chat.whatsapp.com/IkFCXal7O5ODMBHsmKv9ak

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ