October 5, 2024

ಅತಿವೃಷ್ಟಿಯಿಂದ ಮನೆ ಕಳೆದುಕೊಂಡ ಮೂಡಿಗೆರೆ ಮತ್ತು ಕಳಸ ತಾಲ್ಲೂಕಿನ ಸಂತ್ರಸ್ತರ, ಸಂಬಂಧಪಟ್ಟ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಸಭೆಯನ್ನು ಸದ್ಯದಲ್ಲೇ ನಡೆಸುವಂತೆ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಎರಡು ತಾಲ್ಲೂಕುಗಳ ತಹಶೀಲ್ದಾರ್‍ಗಳಿಗೆ ಸೂಚಿಸಿದ್ದಾರೆ.

ಎರಡು ತಾಲ್ಲೂಕುಗಳಲ್ಲಿ ಅತಿವೃಷ್ಟಿ ಸಂತ್ರಸ್ತರ 467 ಮನೆ ನಿರ್ಮಾಣ ಈವರೆಗೆ ಪೂರ್ಣಗೊಂಡಿಲ್ಲ ಎಂದು ಶಾಸಕಿ ನಯನಾ ಮೋಟಮ್ಮ ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾಧಿಕಾರಿಗಳಿಗೆ ಮನೆ ನಿರ್ಮಾಣ ಪ್ರಕ್ರಿಯೆಗೆ ಸೂಕ್ತ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದರು.

ಈ ಹಿನ್ನಲೆಯಲ್ಲಿ  ಜಿಲ್ಲಾಧಿಕಾರಿಗಳ ಪರವಾಗಿ ಅಪರ ಜಿಲ್ಲಾಧಿಕಾರಿಗಳು  ಎರಡೂ ತಾಲ್ಲೂಕುಗಳ ತಹಶೀಲ್ದಾರ್ ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಪತ್ರ ಬರೆದು ವಿವಿಧ ಹಂತದಲ್ಲಿರುವ ಮತ್ತು ಮನೆ ನಿರ್ಮಾಣ ಆರಂಭಗೊಳ್ಳದಿರುವ ಸಂತ್ರಸ್ತರ ಸಭೆ ಕರೆಯಲು ಸೂಚನೆ ನೀಡಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ