October 5, 2024

ಶಾರ್ಟ್ ಸರ್ಕ್ಯೂಟ್ ನಿಂದ ಓಮಿನಿ ಕಾರೊಂದು ನಡುರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ನಡೆದಿದೆ. ಚಿಕ್ಕಮಗಳೂರು ತಾಲ್ಲೂಕು, ಆಲ್ದೂರು ಸಮೀಪದ ದೊಡ್ಡನಗುಡ್ಡ ಎಂಬಲ್ಲಿ ಓಮಿನಿ ಕಾರೊಂದು ಶಾರ್ಟ್ ಸರ್ಕ್ಯೂಟ್ ನಿಂದ ನಡುರಸ್ತೆಯಲ್ಲಿಯೇ ಹೊತ್ತಿ ಉರಿದಿದೆ.

ಕಾಫಿ ಎಸ್ಟೇಟ್ ವೊಂದಕ್ಕೆ ಕಳೆತೆಗೆಯಲೆಂದು ಯಂತ್ರಗಳ ಸಮೇತ ಓಮಿನಿ ಕಾರಿನಲ್ಲಿ ಏಳು ಮಂದಿ ಪ್ರಯಾಣಿಸಿತ್ತಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ದೊಡ್ಡನಗುಡ್ಡ ಬಳಿ ಏಕಾಏಕಿ ಕಾರಿನೊಳಗೆ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿನ ಕಾರಿನ ತುಂಬಾ ಆವರಿಸಿಕೊಂಡಿದೆ. ಕಾರಿನಲ್ಲಿದ್ದ ಏಳು ಮಂದಿ ಕಾರಿನಿಂದ ಹೊರನಗೆದು ಜೀವ ಉಳಿಸಿಕೊಂಡಿದ್ದಾರೆ.

ಕಾರು ಮತ್ತು ಕಾರಿನ ಮೇಲೆ ಇರಿಸಿದ್ದ ನಾಲ್ಕೈದು ಕಳೆ ತೆಗೆಯುವ ಯಂತ್ರಗಳು ಸೇರಿ ಸಂಪೂರ್ಣ ಸುಟ್ಟು ಭಸ್ಮವಾಗಿವೆ.

ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಪ್ರಯತ್ನಸಿದ್ದು, ಕಾರು ಅಷ್ಟೊತ್ತಿಗಾಗಲೇ ಸಂಪೂರ್ಣ ಸುಟ್ಟು ಕರಕಲಾಗಿತ್ತು

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ